
ಬಂಟ್ವಾಳ (ಅ.12): ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ. ಅವರು ಜನರ ಬಳಿಗೆ ಬಂದು ಸಮಸ್ಯೆ ಆಲಿಸುತ್ತಿದ್ದಾರೆ. ವೋಟ್ ಚೋರಿ ಸಹಿತ ಹಲವು ವಿಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ. ಅವರ ಬೆನ್ನ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು, ಜನರ ಬಳಿ ಮೋದಿ ಸರ್ಕಾರದ ವೈಫಲ್ಯಗಳನ್ನು ತಿಳಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಯುವ ಕಾಂಗ್ರೆಸ್ ಬಂಟ್ವಾಳ ಸಂಜೆ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಪಂಜಿನ ಬೃಹತ್ ಮೆರವಣಿಗೆಯಲ್ಲಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆವಹಿಸಿ ಮಾತನಾಡಿ, ಇಂದು ಮತಗಳ್ಳತನಕ್ಕೆ ಚುನಾವಣಾ ಆಯೋಗ ಉತ್ತರದಾಯಿತ್ವರಾಗಿದ್ದಾರೆ. ಮನಮೋಹನ್ ಸಿಂಗ್ ಅಧಿಕಾರವಧಿಯಲ್ಲಿ ಅನೇಕ ಕ್ಲಿಷ್ಟಕರ ಸನ್ನಿವೇಶಗಳನ್ನು ಯಶಸ್ವಿಯಾಗಿ ನಿಭಾಯಿಸಲಾಗಿತ್ತು. ಇಂದು ಇಂಧನ ಬೆಲೆ ಅಂತಾರಾಷ್ಟ್ರೀಯ ಕಚ್ಚಾ ತೈಲಕ್ಕೆ ಕಡಿಮೆ ಆದರೂ ಕಡಿಮೆ ಆಗಿಲ್ಲ. ಕಪ್ಪು ಹಣ ವಾಪಸ್ ತಂದಿದ್ದೀರಾ ಎಂದು ಪ್ರಶ್ನಿಸಿದರು.
ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಕಾರ್ಮಿಕ ಸಂಘಟನೆಗಳು, ಹೋಂ ಸ್ಟೇ ಹಾಗೂ ಹೋಟೆಲ್ ಅಸೋಷಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.ಹೋಂಸ್ಟೇ, ಹೋಟೆಲ್ ಸೇರಿದಂತೆ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು.
ಸಿಸಿಟಿವಿ ಅಳವಡಿಸುವುದು, ಸಂಚಾರಿ ದೂರವಾಣಿ ಸಂಖ್ಯೆ ಸೇರಿದಂತೆ ವಾಸ್ತವ್ಯ ಹೂಡುವವರ ಮಾಹಿತಿ ಇರಬೇಕು ಎಂದು ಸಂತೋಷ್ ಲಾಡ್ ಹೇಳಿದರು.ಹೋಂ ಸ್ಟೇ ನೋಂದಣಿ, ಪರವಾನಗಿ, ನವೀಕರಣ ಸಂಬಂಧ ಪ್ರವಾಸೋದ್ಯಮ, ಪೌರಾಡಳಿತ ಹಾಗೂ ಪಂಚಾಯತ್ ರಾಜ್ ಸಚಿವರ ಜೊತೆ ಚರ್ಚಿಸಲಾಗುವುದು. ಜೊತೆಗೆ ಶಾಸಕರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲು ನಿಯೋಗ ತೆರಳುವಂತೆ ಸಲಹೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪೌರಾಡಳಿತ ಸಚಿವ ರಹೀಮ್ ಖಾನ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ದಸರಾ ನಂತರ ನಿಯೋಗ ತೆರಳಿ ಭೇಟಿ ಮಾಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.