ಏ.5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ: ಅನರ್ಹತೆ ಬಗ್ಗೆ ಇಲ್ಲಿಂದಲೇ ಉತ್ತರ

By Kannadaprabha NewsFirst Published Mar 27, 2023, 11:28 PM IST
Highlights

ಮೋದಿ ಸಮುದಾಯದ ವಿರುದ್ಧ ಅವಹೇಳನ ಮಾಡಿದ ಆರೋಪಕ್ಕಾಗಿ ನ್ಯಾಯಾಲಯದಿಂದ ಶಿಕ್ಷೆ ಹಾಗೂ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ(Rahul gandhi) ಏಪ್ರಿಲ್‌ 5ರಂದು ಕೋಲಾರಕ್ಕೆ ಆಗಮಿಸಿ ಅಲ್ಲಿಂದಲೇ ಉತ್ತರ ನೀಡಲಿದ್ದಾರೆ ಎನ್ನಲಾಗಿದೆ.

ಕೋಲಾರ (ಮಾ.27) : ಮೋದಿ ಸಮುದಾಯದ ವಿರುದ್ಧ ಅವಹೇಳನ ಮಾಡಿದ ಆರೋಪಕ್ಕಾಗಿ ನ್ಯಾಯಾಲಯದಿಂದ ಶಿಕ್ಷೆ ಹಾಗೂ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ(Rahul gandhi) ಏಪ್ರಿಲ್‌ 5ರಂದು ಕೋಲಾರಕ್ಕೆ ಆಗಮಿಸಿ ಅಲ್ಲಿಂದಲೇ ಉತ್ತರ ನೀಡಲಿದ್ದಾರೆ ಎನ್ನಲಾಗಿದೆ.

ಎಐಸಿಸಿ(AICC) ರಾಜ್ಯ ಉಸ್ತುವಾರಿ ಸುರ್ಜೇವಾಲ(Randeep surjewala), ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar), ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ನೇತೃತ್ವದಲ್ಲಿ ಭಾನುವಾರ ರಾತ್ರಿ ಬೆಂಗಳೂರಿನ ಕೆಪಿಸಿಸಿ ಕಚೇರಿ(KPCC Office)ಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು ಒಳಗೊಂಡಂತೆ ಸಭೆ ನಡೆಸಿ ಏ.5ರಂದು ರಾಹುಲ್‌ಗಾಂಧಿ ಕೋಲಾರಕ್ಕೆ ಆಗಮಿಸಲಿದ್ದು, ಕೋಲಾರದಿಂದಲೇ ಅನರ್ಹತೆ ಮತ್ತು ಶಿಕ್ಷೆಯ ಬಗ್ಗೆ ಉತ್ತರ ನೀಡಲಿದ್ದಾರೆ. ಅದಕ್ಕಾಗಿ ಈಗನಿಂದಲೇ ಪೂರ್ವಸಿದ್ಧತೆ ನಡೆಸಲು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

2019 ಏ.13ರಂದು ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೋಲಾರಕ್ಕೆ ಆಗಮಿಸಿದ್ದ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮತ್ತು ಅವರ ಸಮುದಾಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಗುಜರಾತ್‌ನಲ್ಲಿ ಕೇಸ್‌ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್‌ಗಾಂಧಿಗೆ ಶಿಕ್ಷೆ ವಿಧಿಸಿತ್ತು.

 

ರಾಹುಲ್‌ ಗಾಂಧಿಗೆ ಜೈಲು ಶಿಕ್ಷೆ, ಅನರ್ಹ: ಇವೆಲ್ಲದಕ್ಕೂ ಕಾರಣ ಮುಳಬಾಗಿಲು ಸಾಕ್ಷಿ ರಘುನಾಥ್‌

click me!