ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದು, ನಾಳೆ ರಾಹುಲ್‌ ಗಾಂಧಿ ಪ್ರಚಾರ

By Kannadaprabha NewsFirst Published Apr 23, 2023, 4:00 AM IST
Highlights

ಕೂಡಲಸಂಗಮದ ಐಕ್ಯಲಿಂಗ ಹಾಗೂ ಸಂಗಮೇಶ್ವರ ದೇವಾಲಯಗಳಿಗೆ ರಾಹುಲ್‌ ಗಾಂಧಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಬಸವ ಮಂಟಪದಲ್ಲಿ ಉತ್ಸವ ಸಮಿತಿಯಿಂದ ಏರ್ಪಡಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕೂಡಲ ಸಂಗಮದ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ ವಿಜಯಪುರಕ್ಕೆ ಪ್ರಯಾಣ ಬೆಳೆಸಲಿರುವ ಅವರು ಅಧಿಕೃತ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಬೆಂಗಳೂರು(ಏ.23):  ವಿಧಾನಸಭೆ ಚುನಾವಣೆಯ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ರಾಜ್ಯದ ಐದು ಜಿಲ್ಲೆಗಳಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಂದು(ಭಾನುವಾರ) ಬೆಳಗ್ಗೆ ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಹೆಲಿಕಾಪ್ಟರ್‌ ಮೂಲಕ ಬಾಗಲಕೋಟೆಯ ಕೂಡಲಸಂಗಮಕ್ಕೆ ತೆರಳಲಿದ್ದಾರೆ.

ಈ ವೇಳೆ ಕೂಡಲಸಂಗಮದ ಐಕ್ಯಲಿಂಗ ಹಾಗೂ ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಬಸವ ಮಂಟಪದಲ್ಲಿ ಉತ್ಸವ ಸಮಿತಿಯಿಂದ ಏರ್ಪಡಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕೂಡಲ ಸಂಗಮದ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ ವಿಜಯಪುರಕ್ಕೆ ಪ್ರಯಾಣ ಬೆಳೆಸಲಿರುವ ಅವರು ಅಧಿಕೃತ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Latest Videos

ಬಿಜೆಪಿಯಲ್ಲಿ ಕುಟುಂಬ ರಾಜಕೀಯ ಆರೋಪ: ಆನಂದ್ ಸಿಂಗ್‌ ವಿರುದ್ಧ ಸೆಡ್ಡು ಹೊಡೆದ ಸಹೋದರಿ

ಜನಸಂಪರ್ಕ ರಾರ‍ಯಲಿ:

ಭಾನುವಾರ ಸಂಜೆ ವಿಜಯಪುರ ಶಿವಾಜಿ ವೃತ್ತದಿಂದ ಕನಕದಾಸ ವೃತ್ತದವರೆಗೆ ಜನಸಂಪರ್ಕ ಹೆಸರಿನಲ್ಲಿ ಅದ್ಧೂರಿ ರಾರ‍ಯಲಿ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಏ.24ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯ ರಾಮದುರ್ಗದಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3.30 ಗಂಟೆಗೆ ಗದಗದಲ್ಲಿ ಯುವ ಸಂವಾದದಲ್ಲಿ ಭಾಗವಹಿಸಿ ಯುವಕರೊಂದಿಗೆ ಸಂವಾದದಲ್ಲಿ ತೊಡಗಲಿದ್ದಾರೆ.

ಸಂಜೆ 5 ಗಂಟೆಗೆ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಡೆಯಲಿರುವ ಬೃಹತ್‌ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಹುಬ್ಬಳ್ಳಿ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ. ತನ್ಮೂಲಕ ಎರಡು ದಿನಗಳಲ್ಲಿ ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಬಿಜೆಪಿ ಟಿಕೆಟ್‌ಗೆ ಅಪ್ಪ- ಮಗನ ನಡುವೆ ಫೈಟ್‌...!

ಏನೇನು ಕಾರ‍್ಯಕ್ರಮ?

- ಕೂಡಲಸಂಗಮದಲ್ಲಿ ಇಂದು ಬಸವ ಜಯಂತಿಯಲ್ಲಿ ಭಾಗಿ
- ವಿಜಯಪುರದಲ್ಲಿ ಜನಸಂಪರ್ಕ ರಾರ‍ಯಲಿ, ಬೃಹತ್‌ ಸಮಾವೇಶ
- ಬೆಳಗಾವಿ ಕಬ್ಬು ಬೆಳೆಗಾರರು, ಗದಗ ಯುವಕರ ಜತೆ ಸಂವಾದ
- ಸಿಎಂ ತವರು ಜಿಲ್ಲೆಯ ಹಾನಗಲ್‌ ಸಮಾವೇಶದಲ್ಲೂ ಭಾಗಿ

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!