ರಾಹುಲ್‌ ಗಾಂಧಿ ಪ್ರತಿಭಟನಾ ಸಭೆ ಇಂದಿಲ್ಲ, ಆ.8ಕ್ಕೆ: ಡಿ.ಕೆ.ಶಿವಕುಮಾರ್‌

Published : Aug 05, 2025, 05:43 AM ISTUpdated : Aug 06, 2025, 04:41 AM IST
Karnataka Deputy Chief Minister DK Shivakumar (Photo/ANI)

ಸಾರಾಂಶ

ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು (ಆ.05): ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ಅವರ ನಿಧನ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಆ.8ಕ್ಕೆ ಮುಂದೂಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನಾ ಸ್ಥಳ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಶಿಬು ಸೊರೇನ್‌ ಬುಡಕಟ್ಟು ಸಮುದಾಯದ ಹಿರಿಯ ನಾಯಕ. ಕಾಂಗ್ರೆಸ್‌ನೊಂದಿಗೆ ಬಹುಕಾಲದ ಮೈತ್ರಿ ಹೊಂದಿದ್ದರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಅವರು ಶಿಬು ಸೊರೇನ್‌ ಅವರಿಗೆ ಗೌರವ ಸಲ್ಲಿಸಲು ತೆರಳಬೇಕಿದೆ. ಸೊರೇನ್‌ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ನಡೆಯಲಿದೆ. ಹೀಗಾಗಿ ಪ್ರತಿಭಟನಾ ಕಾರ್ಯಕ್ರಮದ ಕುರಿತು ಆತುರ ಬೇಡ ಎಂಬ ಕಾರಣಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ನಮ್ಮ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮಂಗಳವಾರದ ಕಾರ್ಯಕ್ರಮಕ್ಕಾಗಿ ಮಾಡಿಕೊಂಡಿರುವ ಸಿದ್ಧತೆಯನ್ನು ಹಾಗೆಯೇ ಮುಂದುವರಿಸುವಂತೆ ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡಿದ್ದೇನೆ. ಆ.8ರಂದು ನಿಗದಿತ ಸ್ಥಳದಲ್ಲಿ, ಅದೇ ಸಮಯಕ್ಕೆ ಪ್ರತಿಭಟನಾ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ, ಈ ವಿಚಾರವಾಗಿ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನೂ ಮುಂದೂಡಲಾಗಿದೆ. ಶಿಬು ಸೊರೇನ್‌ ಅವರ ಅಂತ್ಯಕ್ರಿಯೆ ಬಳಿಕ ಚರ್ಚಿಸಿ ಮಾಹಿತಿ ತಿಳಿಸಲಿದ್ದಾರೆ ಎಂದು ಹೇಳಿದರು.

ಆ.8ರಂದು ವರಮಹಾಲಕ್ಷ್ಮೀ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಮತ್ತು ಪ್ರಾರ್ಥನೆ ಸಲ್ಲಿಸಲು ನಾವು ಯಾರಿಗೂ ಅಡ್ಡಿಯನ್ನುಂಟು ಮಾಡುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ. ಈ ಕುರಿತು ಶಾಸಕಾಂಶ ಪಕ್ಷದ ಸಭೆ ಕರೆಯಲು ವರಿಷ್ಠರು ತಿಳಿಸಿದ್ದು, ಆ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ವಿವರಿಸಿದರು.

ಟೀಕಿಸುವವರನ್ನು ಸ್ವಾಗತಿಸುತ್ತೇವೆ: ಕಾಂಗ್ರೆಸ್‌ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಚುನಾವಣಾ ಆಯೋಗದ ಪರ ಹೋರಾಟ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವವರು, ಟೀಕಿಸುವವರನ್ನು ಸ್ವಾಗತಿಸುತ್ತೇವೆ. ಅವರು ಏನು ಬೇಕಾದರೂ ಹೇಳಲಿ. ಚುನಾವಣಾ ಆಯೋಗ ನಿಷ್ಪಕ್ಷಪಾತ ಹಾಗೂ ನ್ಯಾಯಪೀಠದ ಸ್ಥಾನದಲ್ಲಿರಬೇಕು. ನ್ಯಾಯಪೀಠದಿಂದ ಅನ್ಯಾಯವಾಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಸಮಯದಲ್ಲೇ ಮಹದೇವಪುರ ಕ್ಷೇತ್ರದ ನಮ್ಮ ಅಭ್ಯರ್ಥಿ ಸೂಕ್ತ ದಾಖಲೆಯೊಂದಿಗೆ ದೂರು ನೀಡಿದ್ದರು. ಅವರ ದೂರಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಈ ವಿಚಾರವಾಗಿ ಅಧ್ಯಯನ ನಡೆಸಿದ ಬಳಿಕ ಮತ್ತಷ್ಟು ಅಂಶಗಳು ಬೆಳಕಿಗೆ ಬಂದಿವೆ. ಅಲ್ಲದೆ, ವಿಷಯ ತಡವಾಗಿ ಬಹಿರಂಗವಾಗುತ್ತಿರಬಹುದು. ಹಾಗೆಂದು, ನಾವು ಕಣ್ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ನಮ್ಮ ಅಧ್ಯಯನದ ಅಂಶಗಳನ್ನು ಸಾರ್ವಜನಿಕರ ಮುಂದಿಡುತ್ತೇವೆ. ನಂತರ ಯಾರು ಸರಿ, ಯಾರು ತಪ್ಪು ಎಂಬುದನ್ನು ಜನ ತೀರ್ಮಾನ ಮಾಡಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!