ರಾಹುಲ್‌ ಸಂಸತ್‌ ಸದಸ್ಯತ್ವ ರದ್ದು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published : Jul 08, 2023, 06:39 AM IST
ರಾಹುಲ್‌ ಸಂಸತ್‌ ಸದಸ್ಯತ್ವ ರದ್ದು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಾರಾಂಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದು ಪಡಿಸಿದ್ದನ್ನು ಖಂಡಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ (ಜು.8) :  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದು ಪಡಿಸಿದ್ದನ್ನು ಖಂಡಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಾವೇಶಗೊಂಡ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

ರಾಹುಲ್‌ ಗಾಂಧಿಗೆ ಶಿಕ್ಷೆ ತಗ್ಗಿಸದ ಹೈಕೋರ್ಟ್‌: ಅನರ್ಹತೆ ತಡೆಯಾಜ್ಞೆ ಅರ್ಜಿ ತಿರಸ್ಕಾರ

ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ‘ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ನಾಶ ಮಾಡುತ್ತಿದೆ. ರಾಹುಲ್‌ ಗಾಂಧಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಅವರ ಸದಸ್ಯತ್ವ ರದ್ದುಗೊಳಿಸಿರುವುದು ಖಂಡನೀಯ. ಬಿಜೆಪಿಯ ದ್ವೇಷ ರಾಜಕಾರಣವನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಸರಕಾರದ ಆಡಳಿತಕ್ಕೆ ಬೇಸತ್ತು ರಾಜ್ಯದ ಜನರು ತಕ್ಕ ಪಾಠ ಕಲಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಜನರು ಒಗ್ಗಟ್ಟಾಗಿ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು.

ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಪ್ರಧಾನಿ ಮೋದಿಯವರ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡುವುದರಿಂದ ನಾಯಕ ರಾಹುಲ್‌ ಗಾಂಧಿಯವರ ಸದಸ್ಯತ್ವ ಅನರ್ಹಗೊಳಿಸಲಾಗಿದೆ. ಇದು ಖಂಡನೀಯ. ಅಧಿಕಾರ ಶಾಶ್ವತವಲ್ಲ. ಅದರ ದುರುಪಯೋಗವೂ ಸರಿಯಲ್ಲ. ಬರುವ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.

ಮೋದಿ ಸರ್‌ನೇಮ್ ಹೇಳಿಕೆ ವಿವಾದ: ಶಿಕ್ಷೆ ವಿರುದ್ಧ ರಾಹುಲ್‌ ಮೇಲ್ಮನವಿ: ಇಂದು ಹೈಕೋರ್ಟ್ ತೀರ್ಪು

ಮುಖಂಡರಾದ ಸದಾನಂದ ಡಂಗನವರ, ನಾಗೇಶ ಕಲಬುರ್ಗಿ, ಗಂಗಾಧರ ದೊಡವಾಡ, ನವೀದ ಮುಲ್ಲಾ, ಆರೀಫ್‌ ಭದ್ರಾಪುರ, ದೀಪಾ ಗೌರಿ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!