Karnataka Rain: 'ನಿಮ್ಮದು ಜನಸ್ವರಾಜ್ ಅಲ್ಲ, ಜನಬರ್ಬಾದ್ ಯಾತ್ರೆ'

By Suvarna News  |  First Published Nov 21, 2021, 5:51 PM IST

* ಬಿಜೆಪಿ ಮೇಲೆ ಸಿದ್ದರಾಮಯ್ಯ ಟ್ವಿಟ್ ಪ್ರಹಾರ
* ಮುಖ್ಯಮಂತ್ರಿಗಳೆ ನಿಮ್ಮ ಹನಿಮೂನ್ ಕಾಲ ಮುಗಿದಿದೆ. 
*ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ನಾಶವಾಗಿದೆ
* ನಿಮ್ಮದು  ಜನಸ್ವರಾಜ್ ಅಲ್ಲ, ಜನಬರ್ಬಾದ್ ಯಾತ್ರೆ


ಬೆಂಗಳೂರು(ನ. 21)  ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)ಸರಣಿ ಟ್ವೀಟ್ ಮಾಡಿ   ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿಗಳೆ ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ (Karnataka Floods) ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ. ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ  ಆಡಳಿತ ಪಕ್ಷ ಮತ್ತು ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಆರೋಪಿಸಿದ್ದಾರೆ.

"

Tap to resize

Latest Videos

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ.

ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ಸಂಕಟ

ಸುದ್ದಿ ಮಾದ್ಯಮಗಳಲ್ಲಿ ಮಳೆ ಹಾನಿ ಸಂಬಂಧ ಪ್ರಕಟವಾದ ವರದಿಗಳನ್ನು ಶೇರ್ ಮಾಡಿಕೊಂಡಿರುವ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ್ದಾರೆ. ಕರ್ನಾಟಕದಲ್ಲಿ ನವೆಂಬರ್ ಅಕಾಲಿಕ ಮಳೆ ಸಾಕಷ್ಟು ಸಂಕಷ್ಟ ತಂದಿಟ್ಟಿದೆ. 

ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ,   ಬಳ್ಳಾರಿ, ಉತ್ತರ ಕನ್ನಡ, ಹಾವೇರಿ ಸೇರಿದಂತೆ ಎಲ್ಲ ಕಡೆ ಮಳೆಯಾಗುತ್ತಲೇ ಇದೆ. ಅಡಕೆ ಫಸಲು ಕೊಯ್ಯಲು ಸಾಧ್ಯವಾಗುತ್ತಿಲ್ಲ. ಇನ್ನೊಂದು ಕಡೆ ಭತ್ತ ಕಟಾವಿಗೆ ಬಂದಿದ್ದು ಮಳೆ ಸಂಕಷ್ಟ ತಂದಿಟ್ಟಿದೆ.

 ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಬಿಜೆಪಿ  ಪಕ್ಷದ ಪ್ರಮುಖ ನಾಯಕರ ನೇತೃತ್ವದಲ್ಲಿ ರಾಜ್ಯಾದ್ಯಂತ ಜನಸ್ವರಾಜ್ ಯಾತ್ರೆ ನಡೆಸುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವುದು ಗುರಿ ಎಂದು ನಾಯಕರು ಹೇಳಿದ್ದಾರೆ. 

 

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ.

ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ.

ಸಚಿವರು ಯಾತ್ರೆಯಲ್ಲಿದ್ದಾರೆ,
ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ.

ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ?
4/5 pic.twitter.com/EK1IKFH8oB

— Siddaramaiah (@siddaramaiah)
click me!