ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದಾಗುವ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆ (ಜು.20): ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದಾಗುವ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸದನದಲ್ಲಿ ಮಳೆ ಹಾನಿ ಕುರಿತ ಚರ್ಚೆಗೆ ತುಕಡಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಇನ್ನು, ರಾಜ್ಯದಲ್ಲಿ ಮಳೆ ಹಾನಿ ಪರಿಹಾರಕ್ಕಾಗಿ ಜಿಲ್ಲೆಗಳಿಗೆ 774.5 ಕೋಟಿ ರೂ. ಒದಗಿಸಲಾಗಿದ್ದು, 29 ಆರೈಕೆ ಕೇಂದ್ರಗಳನ್ನು ಕೊರತೆ ಇಲ್ಲ, ಅಗತ್ಯವಿದ್ದರೆ 100 ರಿಂದ 200 ಕೋಟಿ ರೂ. ಒದಗಿಸಲು ಸಿದ್ಧರಿದ್ದೇವೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 10 ಕೋಟಿ ರೂ.ಗಿಂತ ಕಡಿಮೆಯಾದ ಕೂಡಲೇ ಹಣ ಬಿಡುಗಡೆ ಮಾಡುತ್ತೇವೆ ಎಂದರು.
ವಾಡಿಕೆಗಿಂತ ಹೆಚ್ಚು ಮಳೆ: ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ, ಕೆಲವಡೆ ಅತಿವೃಷ್ಠಿಯಾಗಿದ್ದು, ರಸ್ತೆ, ಸೇತುವೆ, ಮನೆ, ಬೆಳೆ, ಉತ್ತರ ನೀಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ತೆರೆಯಲಾಗಿದೆ. ಮಳೆ ಹಾನಿ ಪರಿಹಾರ ಕಾರ್ಯಕ್ಕೆ ಹಣದ ವಿದ್ಯುತ್ ಸಂಪರ್ಕಕ್ಕೆ ಹಾನಿ ಉಂಟಾಗಿದೆ. ಮಳೆಯಿಂದ ಸಮಸ್ಯೆಗೊಳಗಾಗುವ 2,225 ಗ್ರಾಮಗಳನ್ನು ಗುರುತಿಸ ಲಾಗಿದೆ. 1247 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಗ್ರಾಮಗಳಿದ್ದು, 2.38 ಲಕ್ಷ ಜನರು ಸಮಸ್ಯೆಗೆ ಸಿಲುಕುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಸಮಸ್ಯೆ ಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ.
ತೆಲಂಗಾಣ ಎಲೆಕ್ಷನ್‌ಗೆ ವಾಲ್ಮೀಕಿ ದುಡ್ಡು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಗಂಭೀರ ಆರೋಪ
ತಾಲೂಕು ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ಮಾಡಿ ಅಗತ್ಯ ಹಣ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು. ಬೆಳಗಾವಿ ಹಾಗೂ ಮಲೆನಾಡು ಸೇರಿದಂತೆ ಪ್ರವಾಹ ಉಂಟಾಗುವ ಆರು ಜಿಲ್ಲೆಗಳಲ್ಲಿಎನ್‌ಡಿಆರ್‌ಎಫ್‌ನ ಐದು ಸಂಕಷ್ಟಕ್ಕೆ ಸಿಲುಕಿರುವ ಜನರ ಕಷ್ಟ ನಿವಾರಣೆಗೆ ಸರ್ಕಾರ ಸಿದ್ಧವಿದೆ. ಮಳೆ ಹಾನಿಯಿಂದ ಹಾಳಾದ ಮನೆಗಳಿಗೆ ಮನೆ ಮಂಜೂರು ಮಾಡಿ, ಬೆಳೆಹಾನಿಗೂ ಪರಿಹಾರ ನೀಡಲು ಸೂಚಿಸಲಾಗಿದೆ. ಈ ವರ್ಷ ಜಲಾಶಯಗಳಲ್ಲಿ ಶೇ.60ರಷ್ಟು ನೀರು ಸಂಗ್ರ ಹವಾಗಿದೆ. ಕಳೆದ ವರ್ಷ ಕೇವಲ 243 ಟಿಎಂಸಿ ನೀರು ಇತ್ತು. ಈ ಬಾರಿ 536 ಟಿಎಂಸಿ ನೀರು ಸಂಗ್ರಹವಾಗಿದೆ. ಪ್ರತಿ ನದಿಯಲ್ಲೂ ಸ್ವಾಭಾವಿಕ ಮಟ್ಟ, ಅಪಾಯದ ಮಟ್ಟ ಗುರುತಿಸಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.