ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

By Kannadaprabha News  |  First Published Aug 29, 2024, 10:18 PM IST

ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ ₹ 16 ಲಕ್ಷ ಕೋಟಿ ಮನ್ನಾ ಮಾಡಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ 


ಬೆಳಗಾವಿ(ಆ.29): ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಪಿಸಿದರು. 

ನಗರದಲ್ಲಿ (ಇಂದು) ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. 

Tap to resize

Latest Videos

ಪರಪ್ಪನ ಅಗ್ರಹಾರದಲ್ಲಿ ನನಗೆ ಸಿಂಗಲ್‌ ಇಡ್ಲಿ ಕೊಟ್ಟಿರಲಿಲ್ಲ: ಕರವೇ ನಾರಾಯಣಗೌಡ

ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ ₹ 16 ಲಕ್ಷ ಕೋಟಿ ಮನ್ನಾ ಮಾಡಿದೆ ಎಂದು ಹೇಳಿದರು.

click me!