ರಾಜನಂದಿನಿ ಬಿಜೆಪಿ ಹೋಗಿದ್ದು ಕಾಂಗ್ರೆ​ಸ್‌ ನಷ್ಟ​ವ​ಲ್ಲ: ಮಧು ಬಂಗಾರಪ್ಪ

Published : Apr 17, 2023, 01:30 AM IST
ರಾಜನಂದಿನಿ ಬಿಜೆಪಿ ಹೋಗಿದ್ದು ಕಾಂಗ್ರೆ​ಸ್‌ ನಷ್ಟ​ವ​ಲ್ಲ: ಮಧು ಬಂಗಾರಪ್ಪ

ಸಾರಾಂಶ

ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‌ ಪಕ್ಷದ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಸೊರಬ (ಏ.17): ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‌ ಪಕ್ಷದ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಪಟ್ಟಣದ ಬಂಗಾರಧಾಮದ ಕಾಂಗ್ರೆಸ್‌ ಚುನಾವಣಾ ನಿರ್ವಹಣಾ ಕಚೇರಿಯಲ್ಲಿ ಶನಿವಾರ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. ರಾಜನಂದಿನಿ ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ. ಈ ಬಗ್ಗೆ ಅವರ ತಂದೆ ಕಾಗೋಡು ತಿಮ್ಮಪ್ಪ ಅವರೇ ಹೇಳಿದ್ದಾರೆ. 

ತಿಮ್ಮಪ್ಪ ಅವರು ಸೂಕ್ಷ್ಮವಾಗಿ ಅನೇಕ ವಿಷಯಗಳನ್ನು ಸಹ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಸಾಗರ ಕ್ಷೇತ್ರದಲ್ಲಿ ಕೆಲ ಪ್ರಮುಖರು ಟಿಕೇಟ್‌ ಘೋಷಣೆಯಾದ ತರುವಾಯ ಕೆಲ ಭಿನ್ನಾಭಿಪ್ರಾಯಗಳು ಮೂಡಿದ್ದವು. ಮುನಿಸಿಕೊಂಡವರನ್ನು ಮನವೊಲಿಸುವ ಯತ್ನ ಮಾಡಲಾಗಿದೆ. ಶೀಘ್ರದಲ್ಲಿಯೇ ಎಲ್ಲಾ ಭಿನ್ನಾಭಿಪ್ರಾಯಗಳು ಶಮನವಾಗಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್‌ 125ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೇರ್ಪಡೆಯ ಪರ್ವವೇ ಆರಂಭವಾಗಿದ್ದು, ಜನತೆ ಪಕ್ಷದ ಮೇಲೆ ವಿಶ್ವಾಸವನ್ನಿಟ್ಟು ಸೇರ್ಪಡೆಯಾಗುತ್ತಿದ್ದಾರೆ. 

ಎದುರಾಳಿ ಯಾರೇ ಆದರೂ ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ: ಬಾಲಚಂದ್ರ ಜಾರಕಿಹೊಳಿ

ಇದು ರಾಜ್ಯದಲ್ಲಿಯೇ ಮಾದರಿಯಾಗಿದೆ. ನುಡಿದಂತೆ ನಡೆಯುವ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡ್‌ ಬಗ್ಗೆ ಜನತೆಯಲ್ಲಿ ನಂಬಿಕೆ ಮೂಡಿದ್ದು, ಸ್ವಯಂ ಪ್ರೇರಿತರಾಗಿ ಕಾರ್ಡ್‌ ಪಡೆದ ಉದಾಹರಣೆ ಕ್ಷೇತ್ರದಲ್ಲಿ ಸಾಕಷ್ಟಿದೆ ಎಂದರು. ಅಂಡಿಗೆ ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರಪ್ಪ, ಕೊಡಕಣಿ ಗ್ರಾಪಂ ಮಾಜಿ ಅಧ್ಯಕ್ಷ ಹೂವಪ್ಪ, ಗಣಪತಿ ಯಂಕೇನ್‌ ಸೇರಿದಂತೆ ಸುಮಾರು 150ಕ್ಕೂ ಅಧಿಕ ಜನ ವಿವಿಧ ಪಕ್ಷಗಳನ್ನು ತೊರೆದು ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು. ಇದಕ್ಕೂ ಮೊದಲು ಮಧು ಬಂಗಾರಪ್ಪ ಅವರು ಹಿರಿಯ ಸಹೋದರಿ ಸುಜಾತಾ ಅವರ ಜೊತೆಗೆ ಬಂಗಾರಧಾಮಕ್ಕೆ ತೆರಳಿ ತಂದೆ ಎಸ್‌. ಬಂಗಾರಪ್ಪ ಮತ್ತು ತಾಯಿ ಶಕುಂತಲಮ್ಮ ಬಂಗಾರಪ್ಪ ಅವರ ಸಮಾಧಿಗೆ ನಮನ ಸಲ್ಲಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಜಿಲ್ಲಾ ಉಪಾಧ್ಯಕ್ಷ ಡಾ.ಶ್ರೀಧರ್‌ ಹುಲ್ತಿಕೊಪ್ಪ, ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್‌.ಗಣಪತಿ, ಮಾಜಿ ಸದಸ್ಯರಾದ ನಾಗರಾಜ ಚಿಕ್ಕಸವಿ, ಪುರುಷೋತ್ತಮ ಕುಪ್ಪಗಡ್ಡೆ, ಪ್ರಮುಖರಾದ ಎಲ್‌.ಜಿ. ರಾಜಶೇಖರ ಕುಪ್ಪಗಡ್ಡೆ, ಎಂ.ಡಿ. ಶೇಖರ್‌, ಸಂತೋಷ್‌ ಕೊಡಕಣಿ, ಕೆ.ಪಿ. ಪ್ರವೀಣ್‌ ಶಾಂತಗೇರಿ, ಶ್ರೀಕಾಂತ ಚಿಕ್ಕಶಕುನ, ರವಿ ಕೇಸರಿ ಸೇರಿದಂತೆ ಇತರರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತದಿಂದ ಜನರು ಬೇಸತ್ತಿದ್ದಾರೆ: ಸಿದ್ದರಾಮಯ್ಯ

ತಮ್ಮನಿಗೆ ಮತಯಾಚಿಸಿದ ಸಹೋದರಿ: ತಂದೆ ಅವರನ್ನು ಬೆಳೆಸಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ತಂದು ಕೊಟ್ಟಸೊರಬ ಕ್ಷೇತ್ರದ ಜನತೆಯಲ್ಲಿ ಎಸ್‌.ಬಂಗಾರಪ್ಪ ಅವರನ್ನು ಕಾಣುತ್ತಿದ್ದೇವೆ. ಅವರಿಗೆ ತೋರಿದ ಪ್ರೀತಿ, ವಿಶ್ವಾಸವನ್ನು ಮಧು ಬಂಗಾರಪ್ಪ ಅವರಿಗೂ ನೀಡುವ ಮೂಲಕ ಪ್ರೋತ್ಸಾಹ ನೀಡಿಬೇಕು ಎಂದು ಸಹೋದರಿ ಸುಜಾತ ತಿಲಕ್‌ಕುಮಾರ ಹೇಳಿ​ದರು. ದೇಶ ಮತ್ತು ರಾಜ್ಯಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಅನಿವಾರ್ಯವಾಗಿದೆ. ಏಕೆಂದರೆ ಬಡವರು, ದಲಿತರು, ಹಿಂದುಳಿದ ವರ್ಗದವರು ನಿಶ್ಚಿಂತೆಯಿಂದ ಬದುಕು ಕಟ್ಟಿಕೊಳ್ಳಲು ಕಾಂಗ್ರೆಸ್‌ ಮತ ನೀಡಬೇಕು ಎಂದು ಮತ​ಯಾ​ಚಿ​ಸಿ​ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ