
ರಾಜಸ್ಥಾನ (ನ.21): ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಪಂಚರಾಜ್ಯಗಳ ಚುನಾವಣೆ ನಡೆಯಲಿದೆ. ಇನ್ನೆರಡು ದಿನಗಳಾದರೆ ನ.25ರಂದು ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕಾಂಗ್ರೆಸ್‌ನಿಂದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಇಲ್ಲಿ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕರ್ನಾಟಕ ಈಗ, ರಾಜಸ್ಥಾನದಲ್ಲಿ 7 ಗ್ಯಾರಂಟಿ ಘೋಷಣೆ ಮಾಡಿದ್ದು, ಗೆಲ್ಲುವ ತವಕದಲ್ಲಿದೆ.
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2,000 ರೂ. ಕೊಟ್ಟಿದೆ. ಆದರೆ, ರಾಜಸ್ಥಾನದಲ್ಲಿ ವಾರ್ಷಿಕ 10,000 ರೂ. ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಗೊಧನ್ ಯೋಜನೆಯಡಿ ಸರ್ಕಾರವು ಹಸುವಿನ ಸಗಣಿ ಪ್ರತಿ ಕೆಜಿಗೆ 2 ರೂ.ಯಲ್ಲಿ ಖರೀದಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್/ಟ್ಯಾಬ್ಲೆಟ್ ವಿತರಿಸಲಾಗುವುದು ಎಂದು ಘೋಷಣೆ ಮಾಡಿದೆ.
ಬೆಂಗಳೂರು ವಿದ್ಯುತ್ ತಂತಿ ತುಳಿದು ಸಾವು ಪ್ರಕರಣ: ಇಲಿ ಮೇಲೆ ಆರೋಪ ಹೊರಿಸಿದ ಬೆಸ್ಕಾಂ
ರಾಜಸ್ಥಾನ ವಿಧಾನಸಭೆ ಚುನಾವಣೆ (Rajasthan Assembly Elections) ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಭರ್ಜರಿ ಪ್ರಣಾಳಿಕೆ (Manifesto) ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ರಾಜಸ್ಥಾನದ ಜನರಿಗೆ 7 ಗ್ಯಾರಂಟಿ (Congress Guarantee) ಘೋಷಿಸಿದ್ದು ಜೊತೆಗೆ ಜಾತಿ ಸಮೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಜೊತೆಗೆ, ಯುವಜನರಿಗೆ ಹೆಚ್ಚಾಗಿ ಉದ್ಯೋಗ ಅವಕಾಶ ಕಲ್ಪಿಸಿಕೊಡುವುದಾಗಿ ತಿಳಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ, ಪ್ರತಿ ಪಂಚಾಯತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡಲಾಗುವುದೆಂದು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
ರೈತರ ಬೆಳೆ ಕಟಾವಿಗೆ ಕಂಟಕವಾಗುವುದೇ 5 ದಿನ ನಿರಂತರ ಮಳೆ? ಹವಾಮಾನ ಇಲಾಖೆ ಎಚ್ಚರಿಕೆ!
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಅಶೋಕ್ ಗೆಹ್ಲೋಟ್, ರಾಜ್ಯ ಸರ್ಕಾರದ ವತಿಯಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಪ್ರತ್ಯೇಕ ಕಾನೂನನ್ನು ಜಾರಿಗೊಳಿಸಲಾಗುವುದು. ನಮ್ಮ ಅಧಿಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳು ಹಾಗೂ ಕಾನೂನುಗಳು ಜನರ ಮೇಲೆ ಪ್ರಭಾವ ಬೀರಿದ್ದು, ಮತ್ತೊಮ್ಮೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನಾವು ಘೋಷಿಸಿರುವ ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು. ನಾವು ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಅದೇ ರೀತಿ ಈ ಬಾರಿಯೂ ಸಹ ನಾವು ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.