
ಜೈಪುರ. (ಡಿ.12): ಭಿನ್ನಾಭಿಪ್ರಾಯದಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ರಾಜಸ್ಥಾನದ ಹಿರಿಯ ರಾಜಕಾರಣಿ ಘನಶ್ಯಾಂ ತಿವಾರಿ ಅವರು ಮತ್ತೆ ಬಿಜೆಪಿಗೆ ಮರಳಿದ್ದಾರೆ.
ಹೌದು... ರಾಜಸ್ಥಾನದ ಹಿರಿಯ ರಾಜಕಾರಣಿ ಘನಶ್ಯಾಂ ತಿವಾರಿ ಶನಿವಾರ ಮರಳಿ ಬಿಜೆಪಿ ಸೇರಿದ್ದಾರೆ. ಪಕ್ಷದ ರಾಜ್ಯ ಮತ್ತು ಕೇಂದ್ರ ನಾಯಕರ ನಡುವಣ ಭಿನ್ನಾಭಿಪ್ರಾಯದಿಂದಾಗಿ ಅವರು 2 ವರ್ಷಗಳ ಹಿಂದೆ ಪಕ್ಷ ತೊರೆದಿದ್ದರು. ಇದೀಗ ಘನಶ್ಯಾಂ ತಿವಾರಿ ಇಂದು (ಶನಿವಾರ) ಕಾರ್ಯಕ್ರಮವೊಂದರಲ್ಲಿ ಪಕ್ಷದ ರಾಜಸ್ಥಾನ ಅಧ್ಯಕ್ಷ ಸತೀಶ್ ಪೂನಿಯಾ ಸಮ್ಮುಖದಲ್ಲಿ ಬಿಜೆಪಿ ಸೆರ್ಪಡೆಯಾದರು.
BJP ಜೊತೆ JDS ವಿಲೀನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಕುಮಾರಸ್ವಾಮಿ
ಬಳಿಕ ಮಾತನಾಡಿದ ಘನಶ್ಯಾಂ ತಿವಾರಿ, ಸುದೀರ್ಘ ಸಮಯದ ನಂತರ ಈ ವೇದಿಕೆಯಲ್ಲಿ ಮಾತನಾಡಲು ಅವಕಾಶ ಪಡೆದಿದ್ದೇನೆ. ಪಕ್ಷಕ್ಕೆ ಸೇರುವುದಾಗಿ ನಾನು ಬರೆದ ಪತ್ರವನ್ನು ಪರಿಗಣಿಸಿದ ಪಕ್ಷದ ನಾಯಕತ್ವಕ್ಕೆ ಧನ್ಯವಾದಗಳು ತಿಳಿಸಿದರು.
ಕಾಂಗ್ರೆಸ್‌ನೊಂದಿಗೆ ಹಿಂದೊಮ್ಮೆ ವೇದಿಕೆ ಹಂಚಿಕೊಂಡಿದ್ದರೂ ಅದರ ಸದಸ್ಯತ್ವ ಸ್ವೀಕರಿಸಿಲ್ಲ. ಬಿಜೆಪಿಯ ಸಿದ್ಧಾಂತಕ್ಕೆ ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಅನಿವಾರ್ಯ ಕಾರಣಗಳಿಂದಾಗಿ ಬೇರೆ ಪಕ್ಷ ರಚಿಸಿದ್ದೆ ಎಂದು ಸ್ಪಷ್ಟಪಡಿಸಿದರು.
2018ರಲ್ಲಿ ಬಿಜೆಪಿ ತ್ಯಜಿಸುವ ಮುನ್ನ ಆಗಿನ ವಸುಂಧರಾ ರಾಜೆ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತಿವಾರಿ ಭಿನ್ನಾಭಿಪ್ರಾಯ ಹೊಂದಿದ್ದರು. ಬಳಿಕ ರಾಜಸ್ಥಾನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 'ಭಾರತ್ ವಾಹಿನಿ ಪಕ್ಷ' ಸ್ಥಾಪಿಸಿದ್ದರು. ಸಂಗಾನೆರ್ ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಕಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.