
ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ಶುಕ್ರವಾರ ಅವಿಶ್ವಾಸ ಗೊತ್ತುವಳಿಯೊಂದನ್ನು ಮಂಡಿಸಲು ನಿರ್ಧರಿಸಿದೆ. ಈ ಮಧ್ಯೆ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿರುವ ಸಚಿನ್ ಪೈಲಟ್ ಕೈ ಕುಲುಕಿ ಭಿನ್ನಾಭಿಪ್ರಾಯ ಕೊನೆಗೊಳಿಸುವ ಸೂಚನೆ ನೀಡಿದ್ದಾರೆ.
ರಾಜಸ್ಥಾನ ವಿಧಾನಸಭೆ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಕುರಿತಂತೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಇತರ ಬಿಜೆಪಿ ಮುಖಂಡರು ಗುರುವಾರ ಮುಂಜಾನೆ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತ ಯಾಚನೆಗೆ ಸಿದ್ಧತೆ ಮಾಡಿಕೊಂಡಿದೆ. ಶುಕ್ರವಾರ ಅಧಿವೇಶನದ ವೇಳೆ ಗೆಹ್ಲೋಟ್ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಬಂಡಾಯ ನಾಯಕ ಪೈಲಟ್ ಮೆತ್ತಗಾಗಿದ್ದರ ಅಸಲಿಯತ್ತು: ತೆರೆ ಹಿಂದಿನ ರಹಸ್ಯವಿದು!
ಇದೇ ವೇಳೆ ಸಚಿನ್ ಪೈಲಟ್ ಬಣದಲ್ಲಿ ಗುರುತಿಸಿಕೊಂಡಿದ್ದ ಇಬ್ಬರ ಶಾಸಕರಾದ ಭನ್ವರ್‌ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಗುರುವಾರ ಹಿಂತೆದುಕೊಂಡಿದ್ದು, ಸರ್ಕಾರಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲ, ಅಜಯ್ ಮಕೇನ್ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.