ಬೆಂಗಳೂರಿನ ಅಣ್ಣನ ಮನೆಗೆ ಸೂಪರ್ ಸ್ಟಾರ್ ರಜನೀಕಾಂತ್ ದಿಢೀರ್ ಭೇಟಿ!

Published : Dec 07, 2020, 02:21 PM ISTUpdated : Dec 07, 2020, 03:29 PM IST
ಬೆಂಗಳೂರಿನ ಅಣ್ಣನ ಮನೆಗೆ ಸೂಪರ್ ಸ್ಟಾರ್ ರಜನೀಕಾಂತ್ ದಿಢೀರ್ ಭೇಟಿ!

ಸಾರಾಂಶ

ರಾಜಕೀಯಕ್ಕೆ ಎಂಟ್ರಿ ಕೊಡುವ ಮಾತಿನ ನಡುವೆ ಬೆಂಗಳೂರಿಗೆ ಆಗಮಿಸಿದ ನಟ ರಜನೀಕಾಂತ್| ಬೆಂಗಳೂರಿನ ಅಣ್ಣನ ಮನೆಗೆ ರಜನೀಕಾಂತ್ ಭೇಟಿ| ರಾಜಕೀಯಕ್ಕೆ ಎಂಟ್ರಿ ಕೊಡುವ ಮಾತಿನ ಮಧ್ಯೆ ಭಾರೀ ಕುತೂಹಲ ಮೂಡಿಸಿದೆ ಭೇಟಿ

ಬೆಂಗಳೂರು(ಡಿ.07): ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ರಾಜಕೀಯ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿರುವ ದಕ್ಷಿಣ ಭಾರತದ ಖ್ಯಾತ ನಟ ಸೂಪರ್ ಸ್ಟಾರ್ ರಜನೀಕಾಂತ್ ಭಾನುವಾರ ಏಕಾಏಕಿ ಬೆಂಗಳೂರಿನಲ್ಲಿರುವ ಅಣ್ಣ  ಸತ್ಯನಾರಾಯಣ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದಿದ್ದಾರೆ. ಸಹೋದರರಿಬ್ಬರೂ ಬಹಳಷ್ಟು ಹೊತ್ತು ಕುಳಿತು ಮಾತುಕತೆ ನಡೆಸಿದ್ದಾರೆ.

"

ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಮುಹೂರ್ತ ಫಿಕ್ಸ್ ; ದಿನಾಂಕ ಘೋಷಿಸಿದ ತಲೈವಾ

ಕಳೆದ ಮೂರು ದಿನಗಳ ಹಿಂದಷ್ಟೇ,  ಡಿಸೆಂಬರ್ 3ರಂದು ನಟ ರಜನೀಕಾಂತ್ ಜನವರಿಯಲ್ಲಿ ಹೊಸ ಪಕ್ಷ ಘೋಷಣೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ ಡಿಸೆಂಬರ್ 31ರಂದು ಹೊಸ ಪಕ್ಷ ಕಟ್ಟುವ ಕುರಿತ ನಿರ್ಧಾರ ಪ್ರಕಟಿಸುವುದಾಗಿಯೂ ಹೇಳಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಹೀಗಿರುವಾಗ ಅವರ ಈ ಘೋಷಣೆ ಭಾರೀ ಸದ್ದು ಮಾಡಿತ್ತು. 

ಅಲ್ಲದೇ ರಾಜಕೀಯಕ್ಕೆ ಎಂಟ್ರಿ ನೀಡುವ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ರಜನೀಕಾಂತ್ 'ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವತ್ತೂ ಸಾಧ್ಯವಿಲ್ಲ. ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ  ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದಿದ್ದರು. ಆದರೀಗ ಈ ಎಲ್ಲಾ ಬೆಳವಣಿಗೆಗಳ ನಡುವೆ ಅವರು ಸಹೋದರನ ಭೇಟಿಯಾಗಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್