Vijayapura Lok Sabha Constituency: ಹ್ಯಾಟ್ರಿಕ್ ಗೆಲುವಿನ ಸರದಾರ ರಮೇಶ ಜಿಗಜಿಣಗಿಗೆ ರಾಜು ಆಲಗೂರ ಚಾಲೆಂಜ್!

Published : May 05, 2024, 11:32 AM IST
Vijayapura Lok Sabha Constituency: ಹ್ಯಾಟ್ರಿಕ್ ಗೆಲುವಿನ ಸರದಾರ ರಮೇಶ ಜಿಗಜಿಣಗಿಗೆ ರಾಜು ಆಲಗೂರ ಚಾಲೆಂಜ್!

ಸಾರಾಂಶ

ಪಂಚ ನದಿಗಳ ಬೀಡು, ಆದಿಲಶಾಹಿಗಳು ಆಳಿರುವ ನಾಡು, ಬಸವನಾಡು ಎಂದೆಲ್ಲ ಕರೆಸಿ ಕೊಳ್ಳುವ ವಿಜಯಪುರ ಲೋಕಸಭಾ ಮೀಸಲು (ಎಸ್ಸಿ) ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿಯೇ ಸಾಗಿದೆ. ಸತತ 5 ಬಾರಿ ಗೆದ್ದಿರುವ ಬಿಜೆಪಿ, ಈ ಬಾರಿ ಡಬಲ್ ಹ್ಯಾಟ್ರಿಕ್ ಸಾಧಿಸಬೇಕೆಂಬ ಛಲ ಇಟ್ಟುಕೊಂಡಿದೆ. 

• ಶಶಿಕಾಂತ ಮೆಂಡೆಗಾರ

ವಿಜಯಪುರ (ಮೇ.05): ಪಂಚ ನದಿಗಳ ಬೀಡು, ಆದಿಲಶಾಹಿಗಳು ಆಳಿರುವ ನಾಡು, ಬಸವನಾಡು ಎಂದೆಲ್ಲ ಕರೆಸಿ ಕೊಳ್ಳುವ ವಿಜಯಪುರ ಲೋಕಸಭಾ ಮೀಸಲು (ಎಸ್ಸಿ) ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿಯೇ ಸಾಗಿದೆ. ಸತತ 5 ಬಾರಿ ಗೆದ್ದಿರುವ ಬಿಜೆಪಿ, ಈ ಬಾರಿ ಡಬಲ್ ಹ್ಯಾಟ್ರಿಕ್ ಸಾಧಿಸಬೇಕೆಂಬ ಛಲ ಇಟ್ಟುಕೊಂಡಿದೆ. ಇದೇ ವೇಳೆ, ತನ್ನ ಹಳೆ ಕ್ಷೇತ್ರವನ್ನು ಮರು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. 2008ರಿಂದ ವಿಜಯಪುರ ಎಸ್ಸಿ ಮೀಸಲು ಕ್ಷೇತ್ರವಾಯಿತು. ಈ ಮೀಸಲು ಕ್ಷೇತ್ರದಲ್ಲಿ ಎಡ-ಬಲ ಸಮುದಾಯಗಳ ಮಧ್ಯೆ ನೇರ ಹಣಾಹಣಿ ನಡೆಯಲಿದೆ.

ಬಿಜೆಪಿ ಎಡ ಸಮು ದಾಯದ ರಮೇಶ ಜಿಗಜಿಣಗಿಗೆ ಅವಕಾಶ ಕಲ್ಪಿಸಿದ್ದು, ಕಾಂಗ್ರೆಸ್ ಬಲ ಸಮುದಾಯದ ರಾಜು ಆಲಗೂರಗೆ ಮಣೆ ಹಾಕಿದೆ. ಹೀಗಾಗಿ, ನೇರ ವಾಗಿ ಎಡ-ಬಲ ಸಮುದಾಯಗಳ ನಾಯಕರ ಮಧ್ಯೆಯೇ ತುರುಸಿನ ಫೈಟ್ ನಡೆಯುವ ಸಾಧ್ಯತೆ ಇದೆ. ಕ್ಷೇತ್ರದ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಇದ್ದಾರೆ. ಉಳಿದ ಇನ್ನೆರಡು ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಸಮನಾಗಿ ಒಂದೊಂದು ಸ್ಥಾನಗಳನ್ನು ಹಂಚಿಕೊಂಡಿವೆ. ಕಳೆದ ಬಾರಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಯಾಗಿದ್ದರಿಂದ ಕಾಂಗ್ರೆಸ್ ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. 

ತೊಡೆ ತಟ್ಟಿದವರ ಸೊಕ್ಕು ಮುರಿದವನು ನಾನು: ಸಿಎಂ ಸಿದ್ದರಾಮಯ್ಯ

ಈ ಬಾರಿ ಜೆಡಿಎಸ್ -ಬಿಜೆಪಿ ಮೈತ್ರಿಯಾಗಿದ್ದರಿಂದ ಬಿಜೆಪಿ ಅಭ್ಯರ್ಥಿಯೇ ಕಣದಲ್ಲಿದ್ದಾರೆ. ಜಿಲ್ಲೆಯಿಂದ ಎಂ.ಬಿ.ಪಾಟೀಲ್ ಹಾಗೂ ಶಿವಾನಂದ ಪಾಟೀಲ ಸಚಿವರಾಗಿದ್ದಾರೆ. ಜೊತೆಗೆ, ನಾಲ್ವರು ಶಾಸಕರು, ವಿಧಾನಪರಿಷತ್ ಸದಸ್ಯರು ಹೆಚ್ಚಾಗಿರುವ ಕಾರಣ ಕ್ಷೇತ್ರದ ಗೆಲುವು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿದೆ. ಇನ್ನೊಂದೆಡೆ, ಜಿಲ್ಲೆ ಸೇರಿ ರಾಜ್ಯದಲ್ಲಿ ಎಲ್ಲಿಯೂ ಬಂಜಾರ ಸಮಾಜಕ್ಕೆ ಟಿಕೆಟ್ ಹಿನ್ನೆಲೆಯಲ್ಲಿ ಕಾಂಗ್ರೆಸ್, ಆ ಸಮುದಾಯದ ನೀಡದ ಕೋಪಕ್ಕೆ ಕಾರಣವಾಗಿದೆ. ಬಿಜೆಪಿ, ಕಳೆದ ಐದು ಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸುತ್ತಿದೆ. ಎರಡು ಬಾರಿ ಬಸನಗೌಡ ಪಾಟೀಲ್ ಯತ್ನಾಳ ಗೆದ್ದಿದ್ದರೆ, ಮೂರು ಬಾರಿ ರಮೇಶ ಜಿಗಜಿಣಗಿ ಗೆದ್ದಿದ್ದಾರೆ. ಇನ್ನು, 1998ರಲ್ಲಿ ಎಂ.ಬಿ.ಪಾಟೀಲರು ಗೆದ್ದಿದ್ದೇ ಕಾಂಗ್ರೆಸ್‌ಗೆ ಕೊನೆಯ ಗೆಲುವು. 

ಕ್ಷೇತ್ರ ಪರಿಚಯ: ಕ್ಷೇತ್ರದಲ್ಲಿ ಇದುವರೆಗೆ ಕಾಂಗ್ರೆಸ್ 8 ಬಾರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಐದು ಬಾರಿ ಗೆಲುವು ಸಾಧಿಸಿದೆ. ಸ್ವತಂತ್ರ ಪಕ್ಷ2 ಬಾರಿ ಮತ್ತು ಜನತಾದಳ ಒಂದು ಬಾರಿ ಗೆಲುವು ಸಾಧಿಸಿದೆ. 2008ರವರೆಗೆ ಚಿಕ್ಕೋಡಿ ಮೀಸಲು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದ ರಮೇಶ ಜಿಗಜಿಣಗಿ, 2008ರಿಂದ ವಿಜಯಪುರ ಕ್ಷೇತ್ರ ಮೀಸಲಾಗಿ ಪರಿವರ್ತನೆಯಾಗಿದ್ದರಿಂದ ಇಲ್ಲಿಂದಲೇ ಸ್ಪರ್ಧಿಸುತ್ತಿದ್ದು, ಸತತ 3 ಬಾರಿ ಗೆಲುವು ಸಾಧಿಸಿದ್ದಾರೆ. ಈಗ ನಾಲ್ಕನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಕ್ಷೇತ್ರ ದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ, ಕಳೆದ 25 ವರ್ಷದಿಂದ ಕ್ಷೇತ್ರ ಕಳೆದು ಕೊಂಡಿರುವ ಕಾಂಗ್ರೆಸ್, ಆಲಗೂರ ರನ್ನು ಕಣಕ್ಕಿಳಿಸಿ, ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಜಾತಿ-ಮತ ಲೆಕ್ಕಾಚಾರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ 19 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಲಿಂಗಾಯತರು ಸರಿ ಸುಮಾರು 6.10 ಲಕ್ಷ, ಎಸ್ಸಿ-ಎಸ್ಟಿ 6 ಲಕ್ಷ ಮುಸ್ಲಿಮರು 3.15 ಲಕ್ಷ ಕುರುಬರು 3 ಲಕ್ಷ, ಇತರರು 1.17 ಲಕ್ಷವಿದ್ದಾರೆ. ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಉಳಿದಂತೆ, ಅಹಿಂದ ಮತಗಳು ಸಾಕಷ್ಟು ಪ್ರಭಾವ ಬೀರಲಿವೆ.

ರಮೇಶ ಜಿಗಜಿಣಗಿ, ಬಿಜೆಪಿ: ಹಾಲಿ ಸಂಸದ ರಮೇಶ ಜಿಗಜಿಣಗಿ ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಇದುವರೆಗೂ ಮೂರು ಬಾರಿ ಶಾಸಕರು, ಆರು ಬಾರಿ ಸಂಸದರಾಗಿದ್ದಾರೆ. 1975ರಲ್ಲಿ ರಾಜಕೀಯ ಪ್ರವೇಶಿಸಿದ ಜಿಗಜಿಣಗಿ, 2 ಬಾರಿ ಮಾತ್ರ ಸೋಲು ಅನುಭವಿಸಿದ್ದಾರೆ. ರಾಜ್ಯ ಸರ್ಕಾರಗಳಲ್ಲಿ ಬರೋಬ್ಬರಿ 8 ಖಾತೆಗಳ ಸಚಿವರಾಗಿ ಕೆಲಸ ಮಾಡಿ ದ್ದಾರೆ. 1983, 1984, 1989ರಲ್ಲಿ ಬಳ್ಕೊಳ್ಳಿ ಮೀಸಲು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1998, 1999, 2004ರಲ್ಲಿ ಚಿಕ್ಕೋಡಿ, 2009, 2014, 2019ರಲ್ಲಿ ವಿಜಯಪುರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ಪೆನ್‌ಡ್ರೈವ್‌ ಹಿನ್ನೆಲೆ ಏನೆಂದು ನಾವು ಬಿಚ್ಚಿಡಬೇಕಾ?: ಡಿ.ಕೆ.ಶಿವಕುಮಾರ್

ರಾಜು ಆಲಗೂರ, ಕಾಂಗ್ರೆಸ್: ದಶಕಗಳ ಕಾಲ ಪ್ರೊಫೆಸರ್ ಆಗಿ ವೃತ್ತಿ. ಮೂರು ಬಾರಿ ಶಾಸಕರಾಗಿರುವ ಪ್ರೊ.ಎಚ್.ಆರ್.ಆಲಗೂರ ಅವರು ಜಿಲ್ಲೆಯಾದ್ಯಂತ ರಾಜು ಆಲಗೂರ ಎಂದೇ ಚಿರಪರಿಚಿತ. ಜಿಲ್ಲೆಯಲ್ಲಿ ಸರಳ ಹಾಗೂ ಸಜ್ಜನಿಕೆ ರಾಜಕಾರಣಿ ಎನಿಸಿಕೊಂಡಿದ್ದಾರೆ. M.A., M.Phil ಮಾಡಿರುವ ಆಲಗೂರ, ಪರಿಶಿಷ್ಟ ಜಾತಿಗೆ (ಚಲವಾದಿ ಬಲ) ಸೇರಿ ದವರಾಗಿದ್ದು, ಸಮಾಜಸೇವೆ, ಕೃಷಿಯಲ್ಲಿ ತೊಡಗಿ ದ್ದಾರೆ. ಹಿಂದೆ ಮೀಸಲು ಬಳ್ಳೋಳ್ಳಿ ಕ್ಷೇತ್ರವಿದ್ದಾಗ 1999ರಲ್ಲಿ ಒಂದು ಬಾರಿ ಹಾಗೂ ಕ್ಷೇತ್ರ ವಿಂಗಡಣೆ ಆದ ಬಳಿಕ ನಾಗಠಾಣ ಮೀಸಲು ಕ್ಷೇತ್ರದಿಂದ 2013 ರಲ್ಲಿ ಶಾಸಕರಾಗಿದ್ದರು. 2013-2018ರ ನಡುವೆ ಸಿಎಂರ ಸಂಸದೀಯ ಕಾವ್ಯದರ್ಶಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!