ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಜೆಡಿಎಸ್ ಗಾಳ

Published : Feb 20, 2024, 06:46 AM IST
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಜೆಡಿಎಸ್ ಗಾಳ

ಸಾರಾಂಶ

ಇದೇ ತಿಂಗಳ 27ರಂದು ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

 ಬೆಂಗಳೂರು (ಫೆ.20) : ಇದೇ ತಿಂಗಳ 27ರಂದು ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ಇದುವರೆಗೆ ಯಾವುದೇ ಶಾಸಕರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಎರಡನೇ ಅಭ್ಯರ್ಥಿ ಹಾಗೂ ಒಟ್ಟು ಅಭ್ಯರ್ಥಿಗಳ ಪೈಕಿ ಐದನೆಯವರಾಗಿರುವ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುತ್ತೇವೆ ಎಂದು ಖಚಿತವಾಗಿ ಹೇಳಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

 

ವಸತಿ ಶಾಲೆಗಳ ಘೋಷವಾಕ್ಯ ಬದಲಾವಣೆ: ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸು ಎರಡೂ ಒಂದೇ ಎಂದ ಹೆಬ್ಬಾಳ್ಕರ್

ಚುನಾವಣೆ ಒಟ್ಟು ನಾಲ್ಕು ಸ್ಥಾನಗಳಿಗೆ ನಡೆಯುತ್ತಿದ್ದು, ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ಸಿಗೆ ಮೂರು ಸ್ಥಾನ ಮತ್ತು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಮೊದಲ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಅವರಿಗೆ ಒಂದು ಸ್ಥಾನ ಸುಲಭವಾಗಿ ಲಭಿಸಲಿದೆ.

ಬಿಜೆಪಿಯ ಹೆಚ್ಚುವರಿ ಮತ್ತು ಜೆಡಿಎಸ್‌ನ ಎಲ್ಲ ಮತಗಳನ್ನು ಪಡೆದರೂ ಕುಪೇಂದ್ರ ರೆಡ್ಡಿ ಅವರಿಗೆ ಗೆಲ್ಲಲು ಇನ್ನೂ ಐದಾರು ಮತಗಳ ಕೊರತೆ ಎದುರಾಗುತ್ತದೆ. ಪಕ್ಷೇತರರ ಪೈಕಿ ಗಾಲಿ ಜನಾರ್ದನರೆಡ್ಡಿ ಅವರನ್ನು ಹೊರತುಪಡಿಸಿ ಇನ್ನುಳಿದ ಮೂವರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ.

ವಸತಿ ಶಾಲೆಗಳ ಘೋಷವಾಕ್ಯ ಬದಲಾವಣೆ; ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದೇನು?

ಹೀಗಾಗಿ, ಹೆಚ್ಚುವರಿ ಮತಗಳನ್ನು ಪಡೆಯಬೇಕಾದಲ್ಲಿ ಕಾಂಗ್ರೆಸ್‌ನಿಂದಲೇ ಸೆಳೆಯಬೇಕಾಗುತ್ತದೆ.ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಿರಿಯ ನಾಯಕರು ತೆರೆಮರೆಯಲ್ಲಿ ಕಾಂಗ್ರೆಸ್‌ನ ಕೆಲವರು ಶಾಸಕರನ್ನು ಸಂಪರ್ಕಿಸಿ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಆದರೆ, ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಈಗಲೇ ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ