
ಬೆಂಗಳೂರು (ಫೆ.26): ನಾಳೆ ರಾಜ್ಯಸಭೆ ಚುನಾವಣೆ ನಡೆಯುವ ಹಿನ್ನೆಲೆ ಗಂಗಾವತಿ ಶಾಸಕ ಜನಾರ್ದನರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಜೊತೆಗೆ ಕಾವೇರಿ ನಿವಾಸಕ್ಕೆ ಆಗಮಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ ಜನಾರ್ದನ್ ರೆಡ್ಡಿಯವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೂ ಮುನ್ನ ಮೊನ್ನೆ ನಡೆದ ವಿಧಾನಸಭೆಯಲ್ಲಿ ಜನಾರ್ದನ ರೆಡ್ಡಿಯವರೊಂದಿಗೆ ಮಾತುಕತೆ ನಡೆಸಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ. ಇದೀಗ ನಾಳೆ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಸಿಎಂ ಮುಖ್ಯಮಂತ್ರಿ ನಿವಾಸಕ್ಕೆ ಡಿಕೆ ಶಿವಕುಮಾರ ಅವರೇ ಪಕ್ಕಾ ಪ್ಲಾನ್ ಮಾಡಿ ಕರೆದುಕೊಂಡು ಬಂದಿದ್ದಾರೆನ್ನಲಾಗಿದೆ.
ನಾಳೆ ರಾಜ್ಯಸಭೆ ಎಲೆಕ್ಷನ್: 3 ಪಕ್ಷಕ್ಕೂ ಅಡ್ಡ ಮತ ಭೀತಿ!
ಮುಖ್ಯಮಂತ್ರಿ ಭೇಟಿ ಬಳಿಕ ಕೆಂಗಲ್ ಗೇಟ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಐತಿಹಾಸಿಕ ಆನೆಗೊಂದಿ ಉತ್ಸವವನ್ನ ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಾರ್ಚ್ ತಿಂಗಳಲ್ಲಿ ಉತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿದೆ. ಈ ಸಂಬಂಧ ಸಿಎಂ, ಡಿಸಿಎಂ ಶಿವಕುಮಾರ ಅವರಿಗೆ ಆಹ್ವಾನ ನೀಡಲು ಹೋಗಿದ್ದೆ ಎಂದರು.
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಸೇರಿ ಎಲ್ಲ ಪಕ್ಷದವ್ರು ಮನವಿ ಮಾಡಿದ್ದಾರೆ. ಆದರೆ ನಾನು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದ ಶಾಸಕ ಜನಾರ್ದನರೆಡ್ಡಿ. ಇದೀಗ ಡಿಕೆ ಶಿವಕುಮಾರ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದು ಸದ್ಯಕ್ಕೆ ತೀವ್ರ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.