ಹಳ್ಳಿಯಲ್ಲಿರುವ ದೇವರು ಬಿಜೆಪಿಯವರಿಗೆ ದೇವರಾಗಿ ಕಾಣುತ್ತಿಲ್ವಾ? ಇಂಥ ಸಾವಿರ ಗುಡಿಗಳನ್ನು ನಾವು ಕಟ್ಟಿದ್ದೇವೆ. ನಾವು ಈ ರೀತಿಯ ಪ್ರಚಾರ ಪಡೆದುಕೊಂಡಿಲ್ಲ. ಬಿಜೆಪಿಯವರು ರಾಮನ ಹೆಸರಲ್ಲಿ ಚುನಾವಣೆಗೆ ಹೊರಟಿದ್ದಾರೆ. ಇದನ್ನೆಲ್ಲ ನೋಡುತ್ತಿರುವ ನಮ್ಮ ಜನತೆ ಬುದ್ದಿಗೇಡಿಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲಿ ಎಂದ ಅಬಕಾರಿ ಸಚಿವ ಆರ್ .ಬಿ.ತಿಮ್ಮಾಪುರ
ಹುಬ್ಬಳ್ಳಿ(ಜ.14): ಬಿಜೆಪಿಯವರಿಗೆ ರಾಮನೊಬ್ಬನೇ ದೇವರಾಗಿ ಕಾಣುತ್ತಿದ್ದಾನಾ? ನಮ್ಮೂ ರಲ್ಲಿ ಅನೇಕ ದೇವರಿದ್ದಾರೆ. ಕಾಳವ್ವ, ಹನಮಂತ, ದುರ್ಗವ್ವ ಇವರು ದೇವರಲ್ವಾ? ರಾಮ ಮಂದಿರಕ್ಕೆ ಹೋದರೆ ಅಷ್ಟೆ ಹಿಂದೂಗಳಾ? ಎಂದು ಅಬಕಾರಿ ಸಚಿವ ಆರ್ .ಬಿ.ತಿಮ್ಮಾಪುರ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಹಳ್ಳಿಯಲ್ಲಿರುವ ದೇವರು ಬಿಜೆಪಿಯವರಿಗೆ ದೇವರಾಗಿ ಕಾಣುತ್ತಿಲ್ವಾ? ಇಂಥ ಸಾವಿರ ಗುಡಿಗಳನ್ನು ನಾವು ಕಟ್ಟಿದ್ದೇವೆ. ನಾವು ಈ ರೀತಿಯ ಪ್ರಚಾರ ಪಡೆದುಕೊಂಡಿಲ್ಲ. ಬಿಜೆಪಿಯವರು ರಾಮನ ಹೆಸರಲ್ಲಿ ಚುನಾವಣೆಗೆ ಹೊರಟಿದ್ದಾರೆ. ಇದನ್ನೆಲ್ಲ ನೋಡುತ್ತಿರುವ ನಮ್ಮ ಜನತೆ ಬುದ್ದಿಗೇಡಿಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲಿ ಎಂದರು.
ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೇ ರಾಮ ಮಂದಿರ ಇತ್ತು: ಸಚಿವ ನಾಗೇಂದ್ರ
ಮೋದಿಯೇ ದೇವರು:
ಬಿಜೆಪಿಗರಿಗೆ ಮೋದಿಯೇ ದೇವರು. ಮೋದಿ ದೇವರು ಎಂದು ಹೇಳದವರನ್ನು ಬಿಜೆಪಿಯಿಂದ ಮನೆಗೆ ಕಳುಹಿಸುತ್ತಾರೆ. ಜನ ಇವರಿಗೆ ಮತ ಹಾಕಿರುವುದು ರಾಮ ಮಂದಿರದಲ್ಲಿ ಕುಳಿತುಕೊಳ್ಳುವುದಕ್ಕಾ? ಎಂದು ವಾಗ್ದಾಳಿ ನಡೆಸಿದರು.