ರಾಜ್ಯದ ಬೇಡಿಕೆಗಳ ಬಗ್ಗೆ ಆಂಧ್ರ ರಾಜ್ಯಪಾಲರೊಂದಿಗೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ

Published : Nov 29, 2025, 07:39 AM IST
Ramalinga Reddy

ಸಾರಾಂಶ

ಕರ್ನಾಟಕದ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಬೇಡಿಕೆ ಮತ್ತು ಸಮಸ್ಯೆಗಳ ಕುರಿತಂತೆ ಸಚಿವ ರಾಮಲಿಂಗಾರೆಡ್ಡಿ ಅವರು ಆಂಧ್ರಪ್ರದೇಶ ರಾಜ್ಯಪಾಲ ಸೈಯದ್‌ ಅಬ್ದುಲ್‌ ನಜೀರ್‌ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಬೆಂಗಳೂರು (ನ.29): ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಕರ್ನಾಟಕದ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಬೇಡಿಕೆ ಮತ್ತು ಸಮಸ್ಯೆಗಳ ಕುರಿತಂತೆ ಸಚಿವ ರಾಮಲಿಂಗಾರೆಡ್ಡಿ ಅವರು ಆಂಧ್ರಪ್ರದೇಶ ರಾಜ್ಯಪಾಲ ಸೈಯದ್‌ ಅಬ್ದುಲ್‌ ನಜೀರ್‌ ಅವರನ್ನು ಭೇಟಿಯಾಗಿ ಚರ್ಚಿಸಿದರು. ಆಂಧ್ರಪ್ರದೇಶದಲ್ಲಿನ ವಿಜಯವಾಡದಲ್ಲಿನ ರಾಜ್ಯಪಾಲರ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಹಿಂದೆ ರಾಜ್ಯಪಾಲ ಸೈಯದ್‌ ಅಬ್ದುಲ್‌ ನಜೀರ್‌ ಅವರು ಬೆಂಗಳೂರಿಗೆ ಭೇಟಿ ನೀಡಿದಾಗಲೂ ಸಚಿವ ರಾಮಲಿಂಗಾರೆಡ್ಡಿ ಕರ್ನಾಟಕದ ಬೇಡಿಕೆಗಳ ಕುರಿತು ಗಮನಕ್ಕೆ ತಂದಿದ್ದರು.

ಅದರ ಮುಂದುವರಿದ ಭಾಗವಾಗಿ ಶುಕ್ರವಾರ ರಾಜ್ಯಪಾಲರ ಕಚೇರಿಯಲ್ಲಿ ಎರಡೂ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ, ಆಂಧ್ರಪ್ರದೇಶ ರಾಜ್ಯದ ಶ್ರೀಶೈಲಂ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯಕ್ಕೆ 2 ಎಕರೆ ಭೂಮಿ ನೀಡಲಾಗಿದೆ. ಅದರ ಜತೆಗೆ ಇನ್ನೂ 3 ಎಕರೆ ಭೂಮಿ ಸೇರಿಸಿ ಒಟ್ಟು 5 ಎಕರೆ ಭೂಮಿ ನೀಡಲು ಆಂಧ್ರಪ್ರದೇಶ ಸರ್ಕಾರಕ್ಕೆ ಸೂಚಿಸಬೇಕು.

ಜತೆಗೆ ತಿರುಮಲದಲ್ಲಿ ರಾಜ್ಯಕ್ಕೆ ನೀಡಲಾಗಿರುವ ಏಳು ಎಕರೆ ಭೂಮಿಯ ಗುತ್ತಿಗೆ (ಲೀಸ್‌) ಅವಧಿಯನ್ನು 30 ವರ್ಷದಿಂದ 99 ವರ್ಷಗಳಿಗೆ ಹೆಚ್ಚಿಸಬೇಕು. ತಿರುಮಲದಲ್ಲಿ ಕರ್ನಾಟಕ ಮುಜರಾಯಿ ಇಲಾಖೆಯಿಂದ ಮನವಿ ಬಂದಲ್ಲಿ ವಿಶೇಷ ದರ್ಶನಕ್ಕೆ ಅವಕಾಶ ನೀಡಬೇಕು. ಮಂತ್ರಾಲಯದಲ್ಲಿ ರಾಜ್ಯ ಸರ್ಕಾರ ಖರೀದಿಸಿರುವ 5 ಎಕರೆ ಜಾಗವನ್ನು ರಾಜ್ಯದ ಹೆಸರಿಗೆ ಹಸ್ತಾಂತರ ಮಾಡಬೇಕು ಎಂದು ರಾಮಲಿಂಗಾರೆಡ್ಡಿ ಕೋರಿದರು.

ಭಕ್ತರ ಅನುಕೂಲಕ್ಕಾಗಿ ಸೂಕ್ತ ಕ್ರಮ

ಈ ಮನವಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಹಾಜರಿದ್ದ ಆಂಧ್ರಪ್ರದೇಶದ ಮುಜರಾಯಿ ಸಚಿವ ಅನಂ ರಾಮನಾರಾಯಣ ರೆಡ್ಡಿ ಅವರಿಗೆ ಈ ಕುರಿತು ಚರ್ಚೆ ನಡೆಸಿ ಭಕ್ತರ ಅನುಕೂಲಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ನಿರ್ದೇಶಿಸಿದರು. ಸಭೆಯಲ್ಲಿ ರಾಜ್ಯದ ಸಣ್ಣ ನೀರಾವರಿ ಸಚಿವ ಬೋಸ್‌ರಾಜ್‌, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯ, ಆಂಧ್ರಪ್ರದೇಶ ಮುಜರಾಯಿ ಆಯುಕ್ತ ರಾಮಚಂದ್ರಮೋಹನ್‌ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ