ಸಿದ್ದರಾಮಯ್ಯಗೆ ಸಮನ್ಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ

By Suvarna NewsFirst Published May 23, 2022, 3:38 PM IST
Highlights

* ಮಾಜಿ ಸಿಎಂ ಸಿದ್ದರಾಮಯ್ಯಗೆ ಸಮನ್ಸ್
* ರಾಮನಗರ ಕೋರ್ಟ್ ನಿಂದ ಸಮನ್ಸ್ ಜಾರಿ
* ವಿಚಾರಣೆಗೆ ಹಾಜರಾಗುವಂತೆ ಸೂಚನೆ

ರಾಮನಗರ, (ಮೇ.23):  ಕ್ಲೀನ್ ಇಮೇಜ್ ಹೊಂದಿರುವ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಕೊರೋನಾ  ನಿಯಮ ಉಲ್ಲಂಘಿಸಿ ಪಾದಯಾತ್ರೆ ಮಾಡಿದ್ದಕ್ಕೆ ರಾಮನಗರ ಕೋರ್ಟ್ ಇಂದು(ಸೋಮವಾರ) ಸಮನ್ಸ್ ಜಾರಿ ಮಾಡಿದ್ದು, ನಾಳೆ ಅಂದ್ರೆ ಮೇ.24ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಕೋವಿಡ್ ನಿಯಮ ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪಾದಯಾತ್ರೆ ನಡೆಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪಕ್ಷದ 40 ಮುಖಂಡರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

ಶಿವಕುಮಾರ್‌ ಅವರ ಹುಟ್ಟೂರಾದ ದೊಡ್ಡಾಲಹಳ್ಳಿಯಿಂದ ಕನಕಪುರದವರೆಗೆ ಸುಮಾರು 15 ಕಿ.ಮೀ ದೂರದ ಪಾದಯಾತ್ರೆ ನಡೆಸಿದ ಕಾಂಗ್ರೆಸ್‌ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಾತನೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ರಾಜ್ಯದಲ್ಲಿ ಓಮಿಕ್ರಾನ್ ಕೊರೋನಾ ರೂಪಾಂತರಿ ಪ್ರಕರಣ ಸೇರಿದಂತೆ ಕೋವಿಡ್-19 ಕೇಸುಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಇದು ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದ ನಡುವೆ ಭಾರೀ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಮೇಕೆದಾಟು ಯೋಜನೆ ಜಾರಿಗೆಗೆ ಆಗ್ರಹಿಸಿ ರಾಮನಗರದದಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಮಾಡಿತ್ತು. ರಾಮನಗರದಲ್ಲಿ ಅದ್ದೂರಿಯಾಗಿ ಪಾದಯಾತ್ರೆಗೆ ಚಾಲನೆ ಸಿಕ್ಕಿತ್ತು. ಆದ್ರೆ, ಆ ಸಂದರ್ಭದಲ್ಲಿ ಕೊರೋನಾ ಹೆಚ್ಚಾಗಿದ್ದರಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಬಳಿಕ ಕೊರೋನಾ ಕಡಿಮೆಯಾದ ನಂತರ ರಾಮನಗರದಿಂದ ಎರಡನೇ ಹಂತ ಮೇಕೆದಾಟಿಗಾಗಿ ಪಾದಯಾತ್ರೆ ಶುರುವಾಗಿ ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆದಿತ್ತು.

click me!