ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ; ಡಿಕೆಶಿ ನಿಯೋಗದಿಂದ ಸಿಎಂಗೆ ಪತ್ರ

By Sathish Kumar KH  |  First Published Jul 9, 2024, 11:54 AM IST

ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಸಲ್ಲಿಕೆ ಮಾಡಿದ್ದಾರೆ.


ಬೆಂಗಳೂರು (ಜು.09): ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಬೆಂಗಳೂರು ನಗರ ಜಿಲ್ಲಾ ನಾಯಕರು ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು.

Tap to resize

Latest Videos

undefined

ರೇಣುಕಾಸ್ವಾಮಿ ಕೊಲೆ ಕೇಸ್‌: ಸಾಕ್ಷ್ಯ ಸಂಗ್ರಹ ಬಳಿಕ ನಟ ದರ್ಶನ್ ಕೇಸಲ್ಲಿ ಚಾರ್ಜ್‌ಶೀಟ್‌, ಪರಂ

ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲಾಯಿತು.

ಪ್ರಸ್ತುತ, ಬೆಂಗಳೂರು ನಗರದ ಅಂತರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಆಗಿದೆ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಬೆಂಗಳೂರು ನಾಯಕರ ತಂಡವು ಮನವಿ ಸಲ್ಲಿಕೆ ಮಾಡಿದೆ.

click me!