
ಬೆಂಗಳೂರು(ಏ.24): ಸಚಿವ ಸಂಪುಟ ವಿಸ್ತರಣೆ(Cabinet Expansion) ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸಂಪುಟಕ್ಕೆ ಸೇರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkihli) ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಶನಿವಾರ ಆರ್.ಟಿ.ನಗರದ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿದರು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲು ಬೊಮ್ಮಾಯಿ ಒಲವು ಹೊಂದಿದ್ದಾರೆ. ಅಲ್ಲದೇ, ರಮೇಶ್‌ಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭೇಟಿ ಮಹತ್ವ ಪಡೆದುಕೊಂಡಿದೆ. ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ತ್ಯಾಗ ಮಾಡಿರುವ ರಮೇಶ್ ಜಾರಕಿಹೊಳಿ ಅವರಿಗೆ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡವು ಕ್ಲೀನ್‌ಚಿಟ್ ನೀಡಿದೆ. ಇದೇ ಆಧಾರದ ಮೇಲೆ ರಮೇಶ್ ಮತ್ತೆ ಸಚಿವ ಸಂಪುಟ ಸೇರಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
Karnataka Cabinet Expansion: ಏ. 29ರಂದು ಸಿಎಂ ದಿಲ್ಲಿ ಭೇಟಿ: ಸಂಪುಟ ಬಗ್ಗೆ ಚರ್ಚೆ ಸಾಧ್ಯತೆ
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸಂಪುಟ ಸೇರುವ ಸಂಬಂಧ ಈಗಾಗಲೇ ಹಲವು ಬಾರಿ ಮುಖ್ಯಮಂತ್ರಿಯವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ, ದೆಹಲಿಗೆ ತೆರಳಿ ವರಿಷ್ಠರ ಮನವೊಲಿಕೆ ಮಾಡುವ ಪ್ರಯತ್ನವನ್ನು ಸಹ ಮಾಡಿದ್ದಾರೆ. ಅತ್ಯಾಚಾರ(Rape) ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ತ್ಯಾಗ ಮಾಡಿರುವ ರಮೇಶ್ ಜಾರಕಿಹೊಳಿ ಅವರಿಗೆ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡವು ಕ್ಲೀನ್‌ಚಿಟ್ ನೀಡಿದೆ. ಇದೇ ಆಧಾರದ ಮೇಲೆ ರಮೇಶ್ ಮತ್ತೆ ಸಚಿವ ಸಂಪುಟ ಸೇರಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮುಖ್ಯಮಂತ್ರಿಗಳನ್ನು ಮೇಲಿಂದ ಮೇಲೆ ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪೋರ್ನ್ ವೆಬ್‌ಸೈಟ್‌ಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರಲ್ಲಿ ವಿಡಿಯೋ ಅಪ್‌ಲೋಡ್!
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರಲು ಕೆಲ ಕಿಡಿಗೇಡಿಗಳು 'ಸತೀಶ್ ಜಾರಕಿಹೊಳಿ ಸೆಕ್ಸ್ ವಿಡಿಯೋಸ್' ಎಂದು ಅಶ್ಲೀಲ ವೆಬ್‌ಸೈಟ್‌ನಲ್ಲಿ ಬೇರೆ ಅಶ್ಲೀಲ ವಿಡಿಯೋಗಳ ಪೋಸ್ಟ್ ಮಾಡಿದ್ದು ಈ ಕುರಿತು ಕ್ರಮ ಕೈಗೊಳ್ಳುವಂತೆ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಗೆ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ದೂರು ನೀಡಿದ್ದರು.
ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರು ಬಳಸಿ ಪೋಸ್ಟ್ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರು ದುರ್ಬಳಕೆ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಆಗ್ರಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.