
ಬೆಳಗಾವಿ, (ಡಿ.25): ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಮುಂದಿನ ಬಾರಿ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರಹಾರ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ ಎಂದು ಸ್ಪಷ್ಟಪಡಿಸಿದರು.
6 ಶಾಸಕರು ಬಿಜೆಪಿ ಸೇರ್ಪಡೆ: ಸಂಚಲನ ಮೂಡಿಸಿದ ರಾಜಕೀಯ ಬೆಳವಣಿಗೆ
ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಯುವರಾಜ ಕದಂ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ನಾನು ಸೇಡು ತೀರಿಸಿಕೊಳ್ಳುತ್ತಿಲ್ಲ. ಕಳೆದ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನ ನನ್ನ ನಂಬಿ ಮತ ಹಾಕಿದ್ರು. ಮುಂದಿನ ಬಾರಿ ಅವರಿಗೆ ಮತ ಹಾಕಿದ್ರೆ ಶಾಸಕಿಗೆ ಮಾಲೆ ಹಾಕೋಣ ಎಂದು ಸವಾಲು ಹಾಕಿದರು.
ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಯಾವ ಮಟ್ಟಿಗೆ ತಯಾರಿ ಮಾಡಿದ್ದೇವು ಎಲ್ಲರಿಗೂ ಗೊತ್ತಿದೆ. ಆದರೆ ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.