ವಿಶ್ವನಾಥ್‌ಗೆ ರಮೇಶ್ ಜಾರಕಿಹೊಳಿಯಿಂದ ಸಿಕ್ಕ ಭರವಸೆ ಇದು

Kannadaprabha News   | Asianet News
Published : Jan 16, 2021, 09:08 AM ISTUpdated : Jan 16, 2021, 09:41 AM IST
ವಿಶ್ವನಾಥ್‌ಗೆ ರಮೇಶ್ ಜಾರಕಿಹೊಳಿಯಿಂದ ಸಿಕ್ಕ ಭರವಸೆ ಇದು

ಸಾರಾಂಶ

ಎಚ್ ವಿಶ್ವನಾಥ್ ಟೀಕಾ ಪ್ರಹಾರಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮಾತು ಆಶೀರ್ವಾದ ಎಂದು ಹೇಳಿದ್ದಾರೆ. 

ಹುಬ್ಬಳ್ಳಿ (ಜ.16): ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ನಮ್ಮ ಗುರುಗಳು, ಅವರ ಪ್ರತಿಯೊಂದು ಮಾತು, ಟೀಕೆ ನಮಗೆ ಆಶೀರ್ವಾದ ಇದ್ದಂತೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್‌ ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. 

ಆದರೆ, ಅವರ ಬಗ್ಗೆ ನಮಗೆ ಅಪಾರ ಗೌರವಿದೆ. ಅವರು ಏನೇ ಮಾತನಾಡಿದರೂ ನಮಗೆ ಆಶೀರ್ವಾದವಿದ್ದಂತೆ. ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ನ್ಯಾಯಾಲಯದಲ್ಲಿದೆ. ಅದು ಬಗೆಹರಿದ ಮೇಲೆ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ನುಡಿದರು. 

ಮತ್ತೆ ಸಹೋದರರ ಸವಾಲ್‌.. MLA ಆಗಿ ಆರಿಸಿ ಬರಲಿ.. ಚಾಲೆಂಜ್! ...

ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದು ಅತ್ಯಂತ ಯೋಗ್ಯವಾಗಿದೆ. ಒಂದು ವೇಳೆ ಅವರ ಮೇಲೆ ವಂಚನೆ ಆರೋಪವಿದ್ದರೆ, ಅದನ್ನು ವಿಶ್ವನಾಥ್‌ ಅವರು ಪಕ್ಷದ ವರಿಷ್ಠರ ಗಮನಕ್ಕೆ ತಂದರೆ ಅವರು ಕ್ರಮಕೈಗೊಳ್ಳುತ್ತಾರೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಪ್ರತಿಯೊಂದರಲ್ಲಿಯೂ ಹಸ್ತಕ್ಷೇಪ ಮಾಡುತ್ತಾರೆ ಎಂಬುದು ಸುಳ್ಳು. ಮುಖ್ಯಮಂತ್ರಿಗಳ ಪುತ್ರ ಎಂಬ ಕಾರಣಕ್ಕೆ ಆರೋಪ ಮಾಡಲಾಗುತ್ತಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?