
ಹಾನಗಲ್ (ಅ.27): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಗ್ಗೆ ನನಗೆ ಗೌರವವಿದೆ. ಆದರೆ, ಕಳೆದ 15 ದಿನಗಳಿಂದ ಬಹಳ ಸುಳ್ಳು ಹೇಳುತ್ತಿದ್ದಾರೆ.
ಸಮತೋಲನ ಕಳೆದುಕೊಂಡವರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh jarkiholi) ಟೀಕಿಸಿದರು. ತಾಲೂಕಿನಲ್ಲಿ ಪ್ರಚಾರ ನಡೆಸಿದ ಅವರು, ನಾನು ಹಿಂದೆ ಆ ಪಕ್ಷದಲ್ಲೇ ಇದ್ದುದರಿಂದ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ.
ಆದರೆ, ಈ ಚುನಾವಣೆಯಲ್ಲಿ (Election) ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅವರನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ. ಅವರು ತಮ್ಮ ಈ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಅವರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
100 ಕೋಟಿ ಡೋಸ್ ಸಂಭ್ರಮಕ್ಕೆ ಲೇವಡಿ ಮಾಡಿದ ಸಿದ್ದರಾಮಯ್ಯಗೆ ಅಶೋಕ್ ತಿರುಗೇಟು
ಈ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಮತ್ತಷ್ಟುಶಕ್ತಿ ನೀಡಬೇಕು. ಉಪಚುನಾವಣೆಯಲ್ಲಿ ಗೆದ್ದ ಮೇಲೆ ಸಿಎಂ ಬೊಮ್ಮಾಯಿ ರಾಜ್ಯದ ದೊಡ್ಡ ಲೀಡರ್ ಆಗಲಿದ್ದಾರೆ ಎಂದರು.
ಕೃತಜ್ಞತೆ ಇಲ್ಲದವರೆಂದ ಹಳ್ಳಿ ಹಕ್ಕಿ
ಈ ನಾಡಿನಲ್ಲಿ ಕೃತಜ್ಞತೆ ಇಲ್ಲದ ನಾಯಕ ಅಂದರೆ ಸಿದ್ದರಾಮಯ್ಯ (Siddaramaiah) ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ (H Vishwanath) ವಾಗ್ದಾಳಿ ನಡೆಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಡಿ. ದೇವೇಗೌಡ (HD Devegowda) ಅವರು ನಿಮ್ಮನ್ನು (ಸಿದ್ದರಾಮಯ್ಯ) ಆಚೆಗೆ ಹಾಕಿದಾಗ ನಿಮ್ಮ ಕೈ ಹಿಡಿದವನು ನಾನು. ನಂತರ ಎಸ್.ಎಂ. ಕೃಷ್ಣ (SM Krishna), ಎಚ್.ಎಂ. ರೇವಣ್ಣ (HM Revanna), ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕಾಂಗ್ರೆಸ್‌ಗೆ ಕರೆ ತಂದಿದ್ದರಿಂದ ವಿರೋಧ ಪಕ್ಷದ ನಾಯಕ ಆದ್ರಿ, ನಂತರ ಮುಖ್ಯಮಂತ್ರಿ ಆದ್ರಿ ಎಂದರು.
ಬೊಮ್ಮಾಯಿ ವಾಗ್ದಾಳಿ
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ(Irrigation Projects in North Karnataka) ವಿಚಾರವಾಗಿ ಕಾಂಗ್ರೆಸ್ಸಿಗರು(Congress) ಎ, ಬಿ ಸ್ಕೀಮ್ ಎಂದು ಕಳೆದ 40 ವರ್ಷಗಳಿಂದ ಸುಳ್ಳು ಹೇಳುತ್ತಾ ಜನರಿಗೆ ಮೋಸ ಮಾಡಿದ್ದಾರೆ. ಆದರೆ ಉತ್ತರ ಕರ್ನಾಟಕ ಅಭಿವೃದ್ಧಿಗೆ(Development Of Uttara Karnataka) ನಮ್ಮ ಯೋಜನೆಗಳು ಸಾಕ್ಷಿಯಾಗಿವೆ. ಕೆರೆ ತುಂಬಿಸುವ ಯೋಜನೆ ವಿಜಯಪುರ ಜಿಲ್ಲೆಯಿಂದಲೇ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Badsavaraj Bommai) ತಿರುಗೇಟು ನೀಡಿದ್ದಾರೆ.
'ಕಂಬಳಿ ಹಾಕಲು ಕುರುಬರೇ ಆಗಬೇಕು ಅಂತಾದ್ರೆ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ
ವಿಜಯಪುರ ಜಿಲ್ಲೆಯ ಆಲಮೇಲದ ಎ.ಕೆ.ನಂದ ಕಾಲೇಜು ಆವರಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಪರವಾಗಿ ಆಯೋಜಿಸಿದ್ದ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ವಿಚಾರವಾಗಿ ಪ್ರತಿಪಕ್ಷ ಕಾಂಗ್ರೆಸ್ ಅನ್ನು ತೀವ್ರವಾಗಿ ಟೀಕಿಸಿದರು. ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರನ್ನೂ ತರಾಟೆಗೆ ತೆಗೆದುಕೊಂಡರು. ಕೃಷ್ಣೆ ವಿಚಾರವಾಗಿ ಆಣೆ ಮಾಡಿ ಮಾತು ತಪ್ಪಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಪ್ರಧಾನಿ ಮೋದಿ(PM Narendra Modi) ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ದೂರಿದರು.
ಮುಳವಾಡ, ರೇವಣಸಿದ್ದ ಏತ ನೀರಾವರಿ ಸೇರಿದಂತೆ ಇತರೆ ನೀರಾವರಿ ಯೋಜನೆಗಳಿಗೆ ನಾನು ನೀರಾವರಿ ಮಂತ್ರಿ ಆಗಿದ್ದಾಗ ಅನುದಾನ ಮಂಜೂರು ಮಾಡಿದ್ದೇನೆ. ಕಾಂಗ್ರೆಸ್‌ನವರು ಎ, ಬಿ ಸ್ಕೀಮ್ ಎಂದು 40 ವರ್ಷಗಳಿಂದ ಬರೀ ಸುಳ್ಳು ಹೇಳುತ್ತಾ ಜನರಿಗೆ ಮೋಸ ಮಾಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.