ಸವದಿ ವಿರುದ್ಧ ಪ್ರತಿಷ್ಠೆಯ ಗ್ರಾಪಂ ಚುನಾವಣೆ ಗೆದ್ದ ಜಾರಕಿಹೊಳಿ..!

By Kannadaprabha News  |  First Published Aug 2, 2023, 4:40 AM IST

ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅವರ ಕ್ಷೇತ್ರದಲ್ಲಿ ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಬೆಂಬಲಿಗ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆದರೆ, ಕಾಂಗ್ರೆಸ್‌ ಬೆಂಬಲಿತ ಸದಸ್ಯ ರೂಪಾ ಭರಮಣ್ಣ ಸೋಂದಕರ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.


ಅಥಣಿ(ಆ.02):  ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎನಿಸಿಕೊಂಡಿರುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿದ್ದು, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಬಣದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಶಾಸಕ ಲಕ್ಷ್ಮಣ ಸವದಿ ಬಣದ ಕಾಂಗ್ರೆಸ್‌ ಬೆಂಬಲಿಗರಿಗೆ ತೀವ್ರ ಮುಖಭಂಗವಾಗಿದೆ.
ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅವರ ಕ್ಷೇತ್ರದಲ್ಲಿ ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಬೆಂಬಲಿಗ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆದರೆ, ಕಾಂಗ್ರೆಸ್‌ ಬೆಂಬಲಿತ ಸದಸ್ಯ ರೂಪಾ ಭರಮಣ್ಣ ಸೋಂದಕರ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿದ್ದು ರಾಜ್ಯದಲ್ಲಿ ಇದೇ ಮೊದಲು: ಬಿಜೆಪಿ ಇತಿಹಾಸ ಬರೆದಿದೆ: ಸವದಿ ಟಾಂಗ್

Tap to resize

Latest Videos

ಒಟ್ಟು 56 ಸದಸ್ಯ ಬಲದ ಸಂಕೋನಟ್ಟಿಗ್ರಾಮ ಪಂಚಾಯಿತಿ, ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಖ್ಯಾತಿ ಪಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ, ರಮೇಶ್‌ ಜಾರಕಿಹೊಳಿಯವರ ಆಪ್ತ, ಸಂತೋಷ್‌ ಚೌಡಪ್ಪ ಕಕಮರಿ ಅವರು 31 ಮತಗಳನ್ನು ಪಡೆದು ಆಯ್ಕೆಯಾದರೆ, ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ, ಲಕ್ಷ್ಮಣ ಸವದಿ ಬಣದ ಶಂಕರ ಗಡದೆ ಅವರು 24 ಮತಗಳನ್ನು ಪಡೆದು ಪರಾಭವಗೊಂಡರು. ಇನ್ನು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ರೂಪಾ ಸೊಂದಕರ ಅವರು 30 ಮತಗಳನ್ನು ಪಡೆದು ಆಯ್ಕೆಯಾದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿ ರೇಣುಕಾ ಬಕಾರಿ 26 ಮತಗಳನ್ನು ಪಡೆದು ಪರಾಭವಗೊಂಡರು.

ಬಳಿಕ ನಡೆದ ವಿಜಯೋತ್ಸವದಲ್ಲಿ ಮಾಜಿ ಶಾಸಕ ಮಹೇಶ ಕುಮಠಳ್ಳಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಮಾತನಾಡಿ, ಇನ್ನೂ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

click me!