ಪಕ್ಷದಿಂದ ಟಿಕೆಟ್ ಘೋಷಣೆ ಮಾಡಿದಕ್ಕೆ ಸಂತಸ ತಂದಿದೆ. ಟಿಕೆಟ್ ಕ್ರೆಡಿಟ್ ನಮ್ಮ ರಾಷ್ಟ್ರೀಯ ನಾಯಕರು ಹಾಗೂ ಕಾರ್ಯಕರ್ತರಿಗೆ ಸಲ್ಲಬೇಕು. ಇದರಲ್ಲಿ ನನದ್ದೇನು ಪಾತ್ರ ಇಲ್ಲ, ಎಲ್ಲ ಕಾರ್ಯಕರ್ತರದ್ದು ಎಂದ ರಮೇಶ ಜಿಗಜಿಣಗಿ
ವಿಜಯಪುರ(ಮಾ.14): ಹಾಲಿ ಸಂಸದ ರಮೇಶ ಜಿಗಜಿಣಗಿಗೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆ ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಜಿಗಜಿಣಗಿ ಅವರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆಗೆ ಮಾತನಾಡಿದ ರಮೇಶ ಜಿಗಜಿಣಗಿ ಅವರು, ಪಕ್ಷದಿಂದ ಟಿಕೆಟ್ ಘೋಷಣೆ ಮಾಡಿದಕ್ಕೆ ಸಂತಸ ತಂದಿದೆ. ಟಿಕೆಟ್ ಕ್ರೆಡಿಟ್ ನಮ್ಮ ರಾಷ್ಟ್ರೀಯ ನಾಯಕರು ಹಾಗೂ ಕಾರ್ಯಕರ್ತರಿಗೆ ಸಲ್ಲಬೇಕು. ಇದರಲ್ಲಿ ನನದ್ದೇನು ಪಾತ್ರ ಇಲ್ಲ, ಎಲ್ಲ ಕಾರ್ಯಕರ್ತರದ್ದು ಎಂದರು.
ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು: ವಿಜಯಪುರ ಸಂಸದ ಜಿಗಜಿಣಗಿ
ನನಗೆ ಟಿಕೆಟ್ ಸಿಕ್ಕಿದ್ದು ಕಾರ್ಯಕರ್ತರಿಗೆ ಸಿಕ್ಕಂತೆ. ಕಾರ್ಯಕರ್ತರ ಆಶಯದಂತೆ ನನಗೆ ಟಿಕೆಟ್ ಸಿಕ್ಕಿದೆ. ನನಗೆ ಟಿಕೆಟ್ ಸಿಗುತ್ತದೆ ಎಂದು ಮೊದಲೇ ಹೇಳಿದ್ದೇ. ಎಲ್ಲವೂ ಮೀರಿ ನನಗೆ ಟಿಕೆಟ್ ನೀಡಿದ್ದಾರೆ. ನನಗೆ ಯಾರು ವಿರೋಧ ಮಾಡಿದ್ದಾರೆ ಅವರೆಲ್ಲರಿಗೂ ದೇವರು ಒಳ್ಳೆಯದು ಮಾಡಲಿ ಎಂದ ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಈ ವೇಳೆ ಶಾಸಕರು ಹಾಗೂ ಬೆಳಗಾವಿ ವಿಭಾಗ ಉಸ್ತುವಾರಿ ಮಹೇಶ ಟೆಂಗಿನಕಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಮುಖಂಡರಾದ ವಿಜುಗೌಡ ಪಾಟೀಲ್, ಚಂದ್ರಶೇಖರ ಕವಟಗಿ, ವಿಜಯ ಜೋಶಿ ಹಲವರಿದ್ದರು.