ಒಂಭತ್ತನೇ ಬಾರಿಗೆ ಕಾಂಗ್ರೆಸ್‌ನಿಂದ ಕಣಕ್ಕಿಳಿದ ರಮಾನಾಥ ರೈ: ಪಾದಯಾತ್ರೆಗೆ ಜನಸಾಗರ!

By Kannadaprabha News  |  First Published Apr 21, 2023, 5:39 AM IST

 ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಗುರುವಾರ ಭಾರಿ ಜನಸಾಗರದ ನಡುವೆ ಅದ್ಧೂರಿ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದರು.


ಬಂಟ್ವಾಳ (ಏ.21) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಗುರುವಾರ ಭಾರಿ ಜನಸಾಗರದ ನಡುವೆ ಅದ್ಧೂರಿ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದರು.

ಬಂಟ್ವಾಳ(Bantwal assembly constituency)ದ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಹೊರಟ ಸಹಸ್ರಾರು ಜನರ ಪಾದಯಾತ್ರೆ ಬಿ.ಸಿ.ರೋಡ್‌(BC Road) ಬಸ್‌ ನಿಲ್ದಾಣದ ವರೆಗೆ ಸಾಗಿತು. ನಂತರ ಮಿನಿವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಪಕ್ಷದ ಪ್ರಮುಖರೊಂದಿಗೆ ತೆರಳಿದ ರೈಗಳು ನಾಮಪತ್ರ ಸಲ್ಲಿಸಿದರು.

Tap to resize

Latest Videos

ಇನಾಯತ್‌ ಅಲಿಗೆ ಟಿಕೆಟ್‌: ಮೊಯ್ದಿನ್ ಬಾವಾ ಕಾಂಗ್ರೆಸ್‌ಗೆ ಗುಡ್‌ಬೈ

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಬಿ.ಸಿ.ರೋಡ್‌ ಕೇಂದ್ರ ಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಮಾನಾಥ ರೈ, ನನ್ನ ಸುದೀರ್ಘ ಜನಸೇವೆಯ ಜೀವನದಲ್ಲಿ ಒಂಬತ್ತನೇ ಬಾರಿ ಒಂದೇ ಪಕ್ಷದಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ. ಎಂತಹುದೇ ಪ್ರತಿಕೂಲ ವಾತಾವರಣದಲ್ಲಿ ನನ್ನ ಜೊತೆ ನಿಂತ ನಿಮ್ಮ ಋುಣವನ್ನು ಜನ್ಮ ಜನ್ಮಾಂತರಕ್ಕೂ ತೀರಿಸಲು ಸಾಧ್ಯವಿಲ್ಲ ಎಂದು ನುಡಿದರು.

ಅಪಪ್ರಚಾರದಿಂದ ಸೋಲು:

ಕಳೆದ ಚುನಾವಣೆಯಲ್ಲಿ ನನ್ನನ್ನು ಅಪಪ್ರಚಾರದಿಂದ ಸೋಲಿಸಲಾಯಿತು. ಸೋತ ಬಗ್ಗೆ ನನಗೆ ಬೇಸರವಿಲ್ಲ, ಆದರೆ ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌(BK Hariprasad), ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ ಅಶ್ರಫ್‌, ಕೇರಳದ ಖ್ಯಾತ ನ್ಯಾಯವಾದಿ ಗೋವಿಂದನ್‌, ನ್ಯಾಯವಾದಿ ಅಶ್ವನಿ ಕುಮಾರ್‌ ರೈ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ನಾಮಪತ್ರ ಸಲ್ಲಿಸುವಾಗ ರಮಾನಾಥ ರೈ ಅವರ ಜೊತೆಗೆ ಕೆ.ಪಿ.ಸಿ.ಸಿ. ಸದಸ್ಯರಾದ ಪಿಯೂಸ್‌ ಎಲ.ರೊಡ್ರಿಗಸ್‌, ಚಂದ್ರಪ್ರಕಾಶ್‌ ಶೆಟ್ಟಿ, ಪ್ರಮುಖರಾದ ಬಿ.ಎಚ್‌.ಖಾದರ್‌, ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ಇದ್ದರು.

ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿಸೋಜಾ, ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಪ್ರಮುಖರಾದ ಎಂ.ಎಸ್‌. ಮುಹಮ್ಮದ್‌, ಪದ್ಮಶೇಖರ್‌ ಜೈನ್‌, ಮಾಯಿಲಪ್ಪ ಸಾಲ್ಯಾನ್‌, ಜನಾರ್ದನ ಚೆಂಡ್ತಿಮಾರ್‌, ಅಬ್ಬಾಸ್‌ ಅಲಿ, ರಾಕೇಶ್‌ ಮಲ್ಲಿ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್‌ ಸಪಲ್ಯ, ನ್ಯಾಯವಾದಿ ಸುರೇಶ್‌ ಬಿ. ನಾವೂರ, ರೈಯವರ ಧರ್ಮಪತ್ನಿ ಧನಭಾಗ್ಯ ರೈ, ಸಹೋದರಿ ಚೆನ್ನವೇಣಿ ಎಂ. ಶೆಟ್ಟಿಮತ್ತಿತರರಿದ್ದರು.

ರಮಾನಾಥ ರೈ (Ramanath rai)ಪುತ್ರಿ ಚರಿಷ್ಮಾ ರೈ ಮೆರವಣಿಗೆಯ ಆರಂಭದಿಂದ ಕೊನೆವರೆಗೂ ಇದ್ದು, ಕಾರ್ಯಕರ್ತರನ್ನು ಹುರಿದುಂಬಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು. ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀಪ್‌ ಕುಮಾರ್‌ ಶೆಟ್ಟಿಧನ್ಯವಾದ ಸಲ್ಲಿಸಿದರು.

ಹೂಮಳೆ : ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ರೈಗಳ ಅಭಿಮಾನಿಗಳು ಹೂವಿನ ಮಳೆಗೈದು ಶುಭ ಕೋರಿದರು.

ಕ್ಷೇತ್ರಗಳಲ್ಲಿ ಪ್ರಾರ್ಥನೆ : ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮೆರವಣಿಗೆ ಆರಂಭಕ್ಕೂ ಮುನ್ನ ಬಿ. ರಮಾನಾಥ ರೈ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ತೂರಲ್ಲಿ ಬಿಜೆಪಿ VS ಹಿಂದುತ್ವ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಪರ ಅಖಾಡಕ್ಕಿಳಿದ ಸಂಘ ಪರಿವಾರ

ಬಳಿಕ ಮೊಡಂಕಾಪು ಚಚ್‌ರ್‍ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಿತ್ತಬೈಲು ಮೊಯ್ದಿನ್‌ ಜುಮಾ ಮಸೀದಿ, ಕೆಳಗಿನಪೇಟೆ ಮಸೀದಿಯಲ್ಲೂ ಪ್ರಾರ್ಥಿಸಿದರು. ಆನಂತರ ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಹಳೇ ಮುಖವಾದರೂ ನಾನು ಬಣ್ಣ ಬದಲಿಸಿಲ್ಲ: ರೈ

ಕಾಂಗ್ರೆಸ್‌ನಲ್ಲಿ ಒಬ್ಬರೇ ಸ್ಪರ್ಧಿಸುವುದು ಎಂದು ಪ್ರತಿಪಕ್ಷದವರು ಇತ್ತೀಚೆಗೆ ಲೇವಡಿ ಮಾಡಿದ್ದರು. ಅದಕ್ಕೆ ತಿರುಗೇಟು ನೀಡಿದ ರಮಾನಾಥ ರೈ, ಹೌದು, ತಮ್ಮದು ಹಳೇ ಮುಖವಾದರೂ, ತಾವು ಯಾವತ್ತೂ ಬಣ್ಣ ಬದಲಿಸಿಲ್ಲ, ತಮ್ಮದು ಒಂದೇ ಬಣ್ಣ, ಒಂದೇ ಅಂಗಿ, ಒಂದೇ ಚಿಹ್ನೆ, ಒಂದೇ ಸಿದ್ಧಾಂತ, ಒಂದೇ ಪಕ್ಷ, ಒಂದೇ ಧ್ವಜ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!