ಪ್ರಧಾನಿ ಮೋದಿಗೆ 6 ಬಹಿರಂಗ ಪ್ರಶ್ನೆ ಕೇಳಿದ ಸುರ್ಜೇವಾಲಾ

Published : Feb 28, 2023, 11:35 AM IST
ಪ್ರಧಾನಿ ಮೋದಿಗೆ 6 ಬಹಿರಂಗ ಪ್ರಶ್ನೆ ಕೇಳಿದ ಸುರ್ಜೇವಾಲಾ

ಸಾರಾಂಶ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಯಲ್ಲಿ ಶೇ.10 ರಷ್ಟನ್ನೂ ರಾಜ್ಯ ಬಿಜೆಪಿಯಿಂದ ಪೂರೈಸಿಲ್ಲ. ಏಕೆ ? ನಿಮ್ಮ ರೋಡ್‌ ಷೋಗಾಗಿ ಸೋಮವಾರ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಬೆಳಗಾವಿಯಲ್ಲಿ ರದ್ದು ಮಾಡಿದ್ದು ಇದಕ್ಕೆ ಉತ್ತರಿಸುವಿರಾ?: ಸುರ್ಜೇವಾಲಾ

ಬೆಂಗಳೂರು(ಫೆ.28): ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡಿ ಸುಳ್ಳು ಮಾಹಿತಿಗಳಿಂದ ಜನಸಾಮಾನ್ಯರ ಭಾವನೆಗಳ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ತರಾಟೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಮೋದಿ ಅವರಿಗೆ ಆರು ಬಹಿರಂಗ ಪ್ರಶ್ನೆ ಕೇಳಿ ಉತ್ತರಿಸುವಂತೆ ಆಗ್ರಹಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಯಲ್ಲಿ ಶೇ.10 ರಷ್ಟನ್ನೂ ರಾಜ್ಯ ಬಿಜೆಪಿಯಿಂದ ಪೂರೈಸಿಲ್ಲ. ಏಕೆ ? ನಿಮ್ಮ ರೋಡ್‌ ಷೋಗಾಗಿ ಸೋಮವಾರ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಬೆಳಗಾವಿಯಲ್ಲಿ ರದ್ದು ಮಾಡಿದ್ದು ಇದಕ್ಕೆ ಉತ್ತರಿಸುವಿರಾ. ಶಿಕ್ಷಣ ಇಲಾಖೆಯಲ್ಲಿ ಶೇ.40 ರಷ್ಟು ಕಮೀಷನ್‌ ನೀಡದೇ ಯಾವುದೇ ಕೆಲಸ ಆಗುವುದಿಲ್ಲ ಎಂದು ಅನುದಾನರಹಿತ ಶಾಲೆಗಳ ಒಕ್ಕೂಟವಾದ ‘ರುಪ್ಸ’ ನಿಮಗೆ ಪತ್ರ ಬರೆದಿದ್ದು ಇನ್ನೂ ಏಕೆ ಉತ್ತರ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ. ವಿಐಎಸ್‌ಎಲ್‌ಗೆ ಬೀಗ ಹಾಕಿದ್ದು ಸರಿಯೇ ? ದೇಶಿಯ ಅಡಿಕೆಗೆ ಪ್ರೋತ್ಸಾಹ ನೀಡದೆ ಅಡಿಕೆ ಮೇಲಿದ್ದ ಆಮದು ಸುಂಕವನ್ನು ಶೇ.110 ರಿಂದ ಕೇವಲ ಶೇ.10 ಕ್ಕೆ ಇಳಿಸಿ ದೇಶೀ ಅಡಿಕೆಯ ಮಾರುಕಟ್ಟೆಯನ್ನು ಭಸ್ಮ ಮಾಡಿದ್ದು ಏಕೆ? ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಗಡಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕರಿಗೆ ಪಾಠ ಹೇಳುತ್ತೀರಾ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಲಂಚ ಪಡೆದ್ರೆ ಉಚ್ಚಾಟನೆ: ಸುರ್ಜೇವಾಲಾ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡಿ ಸುಳ್ಳು ಮಾಹಿತಿಗಳಿಂದ ಜನಸಾಮಾನ್ಯರ ಭಾವನೆಗಳ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ತರಾಟೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಮೋದಿ ಅವರಿಗೆ ಆರು ಬಹಿರಂಗ ಪ್ರಶ್ನೆ ಕೇಳಿ ಉತ್ತರಿಸುವಂತೆ ಆಗ್ರಹಿಸಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಯಲ್ಲಿ ಶೇ.10 ರಷ್ಟನ್ನೂ ರಾಜ್ಯ ಬಿಜೆಪಿಯಿಂದ ಪೂರೈಸಿಲ್ಲ. ಏಕೆ ? ನಿಮ್ಮ ರೋಡ್‌ ಷೋಗಾಗಿ ಸೋಮವಾರ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಬೆಳಗಾವಿಯಲ್ಲಿ ರದ್ದು ಮಾಡಿದ್ದು ಇದಕ್ಕೆ ಉತ್ತರಿಸುವಿರಾ. ಶಿಕ್ಷಣ ಇಲಾಖೆಯಲ್ಲಿ ಶೇ.40 ರಷ್ಟುಕಮೀಷನ್‌ ನೀಡದೇ ಯಾವುದೇ ಕೆಲಸ ಆಗುವುದಿಲ್ಲ ಎಂದು ಅನುದಾನರಹಿತ ಶಾಲೆಗಳ ಒಕ್ಕೂಟವಾದ ‘ರುಪ್ಸ’ ನಿಮಗೆ ಪತ್ರ ಬರೆದಿದ್ದು ಇನ್ನೂ ಏಕೆ ಉತ್ತರ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಯುವಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಬಿಜೆಪಿ ಸಚಿವರು, ಶಾಸಕರು ಸರ್ಕಾರಿ ಹುದ್ದೆಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. ನಿಮ್ಮದೇ ಪಕ್ಷದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಶಾಸಕರೊಬ್ಬರು, ‘ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳ ಪುತ್ರ ಪಿಎಸ್‌ಐ ನೇಮಕಾತಿ ಹಗರಣದ ನೇರ ರೂವಾರಿ’ ಎಂದು ಆರೋಪಿಸಿದ್ದರು. ಅದರ ಬಗ್ಗೆಯೂ ನಿಮ್ಮ ಭಾಷಣಕಾರರಿಗೆ ಹೇಳಿ ಒಂದು ಉತ್ತರ ಬರೆಸಿ ಅದನ್ನು ಓದಿ ಹೇಳಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯಿಂದ ಹಿಂಸಾತ್ಮಕ ರಾಜಕೀಯ: ಸುರ್ಜೆವಾಲಾ

ವಿಐಎಸ್‌ಎಲ್‌ಗೆ ಬೀಗ ಹಾಕಿದ್ದು ಸರಿಯೇ ?

ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆಗೆ ಯುಪಿಎ ಸರ್ಕಾರ 2013ರಲ್ಲಿಯೇ ಬಳ್ಳಾರಿಯಲ್ಲಿ 380 ಎಕರೆ ಗಣಿ ಪ್ರದೇಶ ಒದಗಿಸಿತ್ತು. ಆದರೆ ನಿಮ್ಮ ಸರ್ಕಾರ ಅದರ ಉಪಯೋಗವ ಮಾಡದೆ ಕಾರ್ಖಾನೆಗೆ ಶಾಶ್ವತವಾಗಿ ಬೀಗ ಹಾಕಿದ್ದು ಯಾಕೆ ಎಂದು ಶಿವಮೊಗ್ಗದ ಜನರಿಗೆ ಉತ್ತರಿಸಿಲ್ಲ ಏಕೆ? ಕಳೆದ ಚುನಾವಣೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶಿವಮೊಗ್ಗ ಜಿಲ್ಲೆಯಲ್ಲಿ 500 ಕೋಟಿ ರು. ವೆಚ್ಚದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪಿಸುವುದಾಗಿ’ ಭರವಸೆ ನೀಡಿದ್ದರು. ಆದರೆ ಈವರೆಗೂ ಅದಕ್ಕೆ 5 ಪೈಸೆ ಸಹ ನೀಡಿಲ್ಲ ಏಕೆ? ಎಂದು ತರಾಟೆ ತೆಗೆದುಕೊಂಡಿದ್ದಾರೆ.

ದೇಶಿಯ ಅಡಿಕೆಗೆ ಪ್ರೋತ್ಸಾಹ ನೀಡದೆ ಅಡಿಕೆ ಮೇಲಿದ್ದ ಆಮದು ಸುಂಕವನ್ನು ಶೇ.110 ರಿಂದ ಕೇವಲ ಶೇ.10 ಕ್ಕೆ ಇಳಿಸಿ ದೇಶೀ ಅಡಿಕೆಯ ಮಾರುಕಟ್ಟೆಯನ್ನು ಭಸ್ಮ ಮಾಡಿದ್ದು ಏಕೆ? ಮಲೆನಾಡಿನಲ್ಲಿ ಎಲೆ ಚುಕ್ಕೆ ರೋಗದಿಂದ ಅಡಿಕೆ ಬೆಳೆ ಸರ್ವನಾಶವಾಗುವ ಲಕ್ಷಣ ಕಾಣುತ್ತಿದ್ದು ಇನ್ನೂ ನಿಮ್ಮ ಡಬಲ್‌ ಇಂಜಿನ್‌ ಸರ್ಕಾರ ಔಷದ ಕಂಡು ಹಿಡಿಯಲು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಬಿಜೆಪಿ ಸಚಿವರು, ಶಾಸಕರು ಕಂದಕ ಸೃಷ್ಟಿಸುತ್ತಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಗಡಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಅಲ್ಲಿನ ಬಿಜೆಪಿ ಶಾಸಕರಿಗೆ ಪಾಠ ಹೇಳುತ್ತೀರಾ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!