ಕರ್ನಾಟಕದ ಮತದಾರರು ಕಾಂಗ್ರೆಸ್‌ಗೆ 136 ಸ್ಥಾನಗಳನ್ನು ನೀಡುವ ಮೂಲಕ ಸ್ಥಿರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ಆಶಯಕ್ಕೆ ತಕ್ಕಂತೆ ಕಾರ್ಯನಿರ್ವಹಣೆ ಮಾಡುತ್ತಿದೆ. ಹೀಗಿದ್ದರೂ ಬಿಜೆಪಿ- ಜೆಡಿಎಸ್ ಮೈತ್ರಿ ನಾಯಕರು ಪಕ್ಷವನ್ನು ಅಸ್ಥಿರಗೊಳಿಸಲು ಯತ್ನಿಸಿದ್ದು, ಇದರಲ್ಲಿ ಯಶ ಕಾಣುವುದಿಲ್ಲ ಎಂದು ಸ್ಪಷ್ಟಪಡಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು(ಆ.08): ಬಿಜೆಪಿಯವರಿಗೆ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಆಗಿಲ್ಲ. ಹೀಗಾಗಿ ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ. ಇದಕ್ಕಾಗಿ ರಾಜಭವನವನ್ನು ಕೇಸರಿ ಭವನವನ್ನಾಗಿ ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.
ಈ ಬಗ್ಗೆ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಮತದಾರರು ಕಾಂಗ್ರೆಸ್‌ಗೆ 136 ಸ್ಥಾನಗಳನ್ನು ನೀಡುವ ಮೂಲಕ ಸ್ಥಿರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ಆಶಯಕ್ಕೆ ತಕ್ಕಂತೆ ಕಾರ್ಯನಿರ್ವಹಣೆ ಮಾಡುತ್ತಿದೆ. ಹೀಗಿದ್ದರೂ ಬಿಜೆಪಿ- ಜೆಡಿಎಸ್ ಮೈತ್ರಿ ನಾಯಕರು ಪಕ್ಷವನ್ನು ಅಸ್ಥಿರಗೊಳಿಸಲು ಯತ್ನಿಸಿದ್ದು, ಇದರಲ್ಲಿ ಯಶ ಕಾಣುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಸಚಿವರಿಗೆ ಕೆ.ಸಿ. ವೇಣುಗೋಪಾಲ್ ತಾಕೀತು!
ಬೇರೆ ಬೇರೆ ರಾಜ್ಯಗಳಲ್ಲಿ ಕೆಡ ವಿದಂತೆ ಕರ್ನಾಟಕದಲ್ಲಿಯೂ ಸರ್ಕಾರ ಕೆಡವಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ದಾರೆ. ಇದಕ್ಕೆ ರಾಜ್ಯ ಪಾಲರನ್ನು ದಾಳವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಹಗರಣ ಆಗಿಲ್ಲ ಎಂ ಬುದು ಬಿಜೆಪಿಯವರಿಗೂ ಗೊತ್ತು. ಪಾದ ಯಾತ್ರೆ ಹೆಸರಿನಲ್ಲಿ ಬೀದಿ ನಾಟಕಕ್ಕೆ ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.