ಬ್ಯಾಲೆಟ್ ಪೇಪರ್ ಬಳಕೆ ಪ್ರಜಾಪ್ರಭುತ್ವ ಬಲಪಡಿಸುವ ಹೆಜ್ಜೆ: ರಣದೀಪ್ ಸಿಂಗ್ ಸುರ್ಜೆವಾಲಾ

Published : Sep 06, 2025, 08:18 AM IST
ಬ್ಯಾಲೆಟ್ ಪೇಪರ್ ಬಳಕೆ ಪ್ರಜಾಪ್ರಭುತ್ವ ಬಲಪಡಿಸುವ ಹೆಜ್ಜೆ: ರಣದೀಪ್ ಸಿಂಗ್ ಸುರ್ಜೆವಾಲಾ

ಸಾರಾಂಶ

ಬ್ಯಾಲೆಟ್ ಪೇಪರ್ ಬಳಸಿ ನಡೆಸುವ ಚುನಾವಣೆಯು ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಮತ್ತು ಮತದಾರರ ನಂಬಿಕೆಯನ್ನು ಮರುಸ್ಥಾಪಿಸುವ ಒಂದು ದಿಟ್ಟ ಹೆಜ್ಜೆಯಾಗಿದೆ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಬೆಂಗಳೂರು (ಸೆ.06): ಬ್ಯಾಲೆಟ್ ಪೇಪರ್ ಬಳಸಿ ನಡೆಸುವ ಚುನಾವಣೆಯು ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಮತ್ತು ಮತದಾರರ ನಂಬಿಕೆಯನ್ನು ಮರುಸ್ಥಾಪಿಸುವ ಒಂದು ದಿಟ್ಟ ಹೆಜ್ಜೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಈ ಕುರಿತು ಮಾಧ್ಯಮದ ಪ್ರಕಟಣೆ ನೀಡಿರುವ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ.

ಈ ನಿರ್ಧಾರವು ದೇಶದ ಇತರ ರಾಜ್ಯಗಳಿಗೂ ಮಾದರಿಯಾಗುವಂಥದ್ದು. ಬ್ಯಾಲೆಟ್ ಪೇಪರ್ ಬಳಕೆಯು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮಾತ್ರ ಸೀಮಿತವಾಗಿರದೆ, ಭವಿಷ್ಯದಲ್ಲಿ ಸಾಮಾನ್ಯ ಚುನಾವಣೆಗಳಿಗೂ ವಿಸ್ತರಿಸಬೇಕು ಎಂದು ನಾನು ಆಶಿಸುತ್ತೇನೆ. ಪ್ರಜಾಪ್ರಭುತ್ವ ಪರ ನಿಲುವಿಗಾಗಿ ಕರ್ನಾಟಕ ಸರ್ಕಾರವನ್ನು ಅಭಿನಂದಿಸುತ್ತೇನೆ.

ಕಳೆದ ಕೆಲವು ವರ್ಷಗಳಿಂದ ಇವಿಎಂ ವಿಶ್ವಾಸಾರ್ಹತೆಯ ಕುರಿತು ಹಲವು ಅನುಮಾನಗಳು ಮತ್ತು ಪ್ರಶ್ನೆಗಳು ರಾಜಕೀಯ ವಲಯಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿನ ತಾಂತ್ರಿಕ ದೋಷಗಳು, ಹ್ಯಾಕಿಂಗ್ ಸಾಧ್ಯತೆಗಳು ಮತ್ತು ಫಲಿತಾಂಶಗಳ ಕುರಿತು ವ್ಯಕ್ತವಾಗುತ್ತಿರುವ ಗೊಂದಲಗಳು ಮತದಾರರಲ್ಲಿ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿ. ಹೀಗಾಗಿ ಬ್ಯಾಲೆಟ್ ಮರುಸ್ಥಾಪನೆ ಅಗತ್ಯ ಎಂದು ಹೇಳಿದ್ದಾರೆ.

ಸರ್ಕಾರದಲ್ಲಿ ಸುರ್ಜೇವಾಲಾ ಹಸ್ತಕ್ಷೇಪವಿಲ್ಲ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ರಾಜ್ಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ಅಧಿಕಾರಿಗಳನ್ನು ಕರೆದು ಮಾತನಾಡಿಲ್ಲ, ಯಾವುದೇ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ರಾಜ್ಯದಲ್ಲಿ ಸೂಪರ್ ಸಿಎಂ ರೀತಿ ವರ್ತಿಸುತ್ತಾರೆ ಎಂಬುದು ವಿಪಕ್ಷಗಳ ಆರೋಪ. ವಿಪಕ್ಷದವರದು ಆರೋಪ ಅಷ್ಟೇ ಅಲ್ವಾ? ಅದರಲ್ಲಿ ಸತ್ಯಾಂಶವಿಲ್ಲ ಎಂದರು.

ರಣದೀಪ ಸುರ್ಜೇವಾಲಾ ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ. ಇದೇನೂ ಹೊಸದೇನಲ್ಲ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ರಾಜ್ಯಗಳ ಉಸ್ತುವಾರಿಯಾಗಿ ಮಾಡುತ್ತಾರೆ. ನಮ್ಮ ಪಕ್ಷದ ಶಾಸಕರು, ಸಚಿವರ ಜೊತೆಗೆ ರಣದೀಪ ಸುರ್ಜೇವಾಲಾ ಒನ್‌ ಟು ಒನ್ ಮೀಟಿಂಗ್ ಮಾಡಿದ್ದಾರೆಂದರೆ ಅದು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದಕ್ಕೂ ವಿಪಕ್ಷ ಬಿಜೆಪಿಯವರಿಗೆ ಏನು ಸಂಬಂಧ? ಅದೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಇಲ್ಲಿಗೆ ಬರುವುದಿಲ್ಲವೇ? ನಾವು ಜನರಿಗೆ ನೀಡಿದ್ದ ಭರವಸೆ ಜಾರಿಗೆ ತರುತ್ತಿದ್ದೇವಾ, ಕೊಟ್ಟ ಭರವಸೆಯಂತೆ ಕೆಲಸ ಮಾಡುತ್ತಿದ್ದೇವಾ ಎಂಬುದನ್ನು ನಮ್ಮ ಪಕ್ಷ ನೋಡಬೇಕಲ್ವಾ? ಅದಕ್ಕೆ ಬರುತ್ತಾರೆಂದು ಸುರ್ಜೇವಾಲಾ ರಾಜ್ಯ ಭೇಟಿಯನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ