ಕೆಲ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬದಲಾವಣೆ: ವಿಜಯೇಂದ್ರ ಭವಿಷ್ಯ

By Kannadaprabha News  |  First Published Oct 11, 2024, 3:31 PM IST

ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು. ಪಟ್ಟಣದ ಹಿರೇಮಠದ ದಸರಾ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.


ಹುಕ್ಕೇರಿ (ಅ.11): ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು. ಪಟ್ಟಣದ ಹಿರೇಮಠದ ದಸರಾ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದ ಜನರು ಗಮನಿಸುತ್ತಿದ್ದಾರೆ. ಒಂದಂತೂ ಸತ್ಯ ಬರುವ ದಿನಗಳಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದರು.

ರಮೇಶ ಜಾರಕಿಹೊಳಿ ಮತ್ತಿತರರು ವಿಜಯೇಂದ್ರ ನಾಯಕತ್ವ ಒಪ್ಪುತ್ತಿಲ್ಲವೇಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅನೇಕ ಹಿರಿಯರಿದ್ದರೂ ನಮ್ಮ ಪಕ್ಷದ ವರಿಷ್ಠರು ನನಗೆ ಅವಕಾಶ ನೀಡಿದ್ದಾರೆ. ಹಿರಿಯರಿಗೆ ನನ್ನನ್ನು ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ. ಅದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಭಾವಿಸಿದರೆ ತಪ್ಪಾಗುತ್ತದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಬರುವ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tap to resize

Latest Videos

undefined

ಸಿಪಿವೈ ಟಿಕೆಟ್‌ ಪ್ರಯತ್ನಿಸೋದರಲ್ಲಿ ತಪ್ಪೇನಿಲ್ಲ: ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೆಟ್‌ಗೆ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಪ್ರಯತ್ನ ಪಡುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ‌ಗ್ರಾಮಾಂತರ ಕ್ಷೇತ್ರದ ಬಿಜೆಪಿ ಗೆಲುವಿಗೆ ಸಿಪಿವೈ ಶ್ರಮ ಇದೆ. ಸಿ.ಪಿ. ಯೋಗೇಶ್ವರಗೆ ಕ್ಷೇತ್ರದಲ್ಲಿ ಹಿಡಿತ ಇದೆ. ಟಿಕೆಟ್‌ಗೆ ಪೈಪೋಟಿ ನಡೆಸಿರುವುದು ತಪ್ಪಲ್ಲ ಎಂದರು.

ಮುಡಾ ಕಳಂಕ ಮರೆಮಾಚಲು ಜಾತಿ ಗಣತಿ ಮುನ್ನಲೆಗೆ ಯತ್ನ: ಸಿ.ಟಿ.ರವಿ ಆರೋಪ

ಬಿಜೆಪಿ ಅವಧಿಯಲ್ಲಿ ‌ನಡೆದ ಕೋವಿಡ್ ಹಗರಣ ಎಸ್ಐಟಿ‌ಗೆ ಹಸ್ತಾಂತರಿಸುವ ಕುರಿತು ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲ. ಪ್ರತಿಪಕ್ಷಗಳನ್ನು ಬೆದರಿಸಿದರೆ ಸೆರೆಂಡರ್ ಆಗ್ತೇವೆ ಎಂದು ತಿಳಿದಿದ್ದಾರೆ ಎಂದು ಕುಟುಕಿದರು. ಪ್ರಿಯಾಂಕ್‌ ಖರ್ಗೆಗೆ ತಮ್ಮ ಇಲಾಖೆ ಸಮಸ್ಯೆ ಬಗೆಹರಿಸಲು ಸಮಯವಿಲ್ಲ. ನನ್ನ ವಿರುದ್ಧ ಸುದ್ದಿಗೋಷ್ಠಿ ನಡೆಸಲು ಸಮಯವಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ‌ಸರ್ಕಾರ ನಾಲಾಯಕ್‌ ಸರ್ಕಾರ ಎಂದು ಜರಿದರು.

click me!