ರಾಜ್ಯದಲ್ಲಿ ವರ್ಗಾವಣೆಗೆ ಪ್ರತಿ ಹುದ್ದೆಗೂ ದರ ನಿಗದಿ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

By Kannadaprabha NewsFirst Published Jun 9, 2023, 11:31 AM IST
Highlights

ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ದರ ನಿಗದಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. 

ಬೆಂಗಳೂರು (ಜೂ.09): ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ದರ ನಿಗದಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್‌ ನಾಯಕರು ಈಗ ಪ್ರತಿ ಹುದ್ದೆಗೆ ದರ ನಿಗದಿ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರ್ಕಾರದಲ್ಲಿ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್‌ ಸರ್ಕಾರ ಎಂದು ಕರೆಯಬೇಕು ಎಂದು ಕಿಡಿಕಾರಿದರು. 

ಪೇಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್‌ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲಿಯೇ ದರ ನಿಗದಿ ಆಗಿರುವ ಬಗ್ಗೆ ಮಾತುಕತೆ ನಡೆದಿದೆ ಎಂದರು. ಈಗ ಇವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಇದನ್ನು ಸಾಬೀತು ಮಾಡಿ ಎಂದರೆ ಹೇಗೆ ಮಾಡುವುದು. ಹಿಂದೆ 40 ಪರ್ಸೆಂಟ್‌ ಆರೋಪವನ್ನು ಸಾಬೀತು ಮಾಡಿದ್ದರಾ? ಈಗ ಅವರದೇ ಸರ್ಕಾರ ಬಂದಿದೆ. ಪರ್ಸೆಂಟೇಜ್‌ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

Latest Videos

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ಅಭಿಪ್ರಾಯ ಕೇಳಿದ ಅರುಣ್‌ಸಿಂಗ್‌

ಕಾಡಾನೆ ಸೆರೆಗೆ ಎಚ್‌ಡಿಕೆ ಸಂತಸ: ಇಬ್ಬರು ರೈತರನ್ನು ಬಲಿ ಪಡೆದ ಪುಂಡಾನೆಯನ್ನು ಸೆರೆಹಿಡಿದಿರುವ ಅರಣ್ಯ ಇಲಾಖೆ ಕಾರ್ಯಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಸಂಶೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇಬ್ಬರು ರೈತರನ್ನು ಬಲಿ ಪಡೆದ ಒಂಟಿ ಸಲಗವನ್ನು ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಸತತ ಐದು ಗಂಟೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯ ಕಾರ್ಯ ಸಂತಸ ತಂದಿದೆ. ರಾಮನಗರ ಜಿಲ್ಲೆಯ ವಿವಿಧೆಡೆ ಕಾಡಾನೆಗಳು ಹಾಗೂ ಇತರೆ ವನ್ಯಜೀವಿಗಳ ಭಯ ನಿರಂತರವಾಗಿದೆ. ಈ ಭಾಗದಲ್ಲಿ ಇನ್ನಷ್ಟುಕಾಡಾನೆಗಳಿದ್ದು, ಅವುಗಳನ್ನು ಹಿಡಿಯಬೇಕಿದೆ. ಇದರ ಜತೆಗೆ ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಗ್ಯಾರಂಟಿ ಸ್ಕೀಂಗಳ ಒಳವರ್ಮ ಜನರಿಗೆ ತಿಳಿಯುತ್ತೆ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅವರು, ಷರತ್ತು ಸಹಿತವಾಗಿ ಘೋಷಣೆ ಮಾಡಲಾಗಿರುವ ಐದು ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. 

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಅರೆಬರೆ ಜ್ಞಾನ: ಎಚ್‌.ಡಿ.ಕುಮಾರಸ್ವಾಮಿ ಲೇವಡಿ

ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದಿದ್ದಾರೆ. ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ. ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ. ನಾನು ಕಾಯುತ್ತೇನೆ ಮತ್ತು ಅವರ ಜತೆ ನಿಲ್ಲುತ್ತೇನೆ ಎಂದಿದ್ದಾರೆ.

click me!