
ಮೈಸೂರು(ಡಿ.01): ‘ಅಪ್ಪನಿಗಾಗಿ ವರುಣ ಕ್ಷೇತ್ರ ಬಿಟ್ಟುಕೊಡಲು ಸಿದ್ಧ’ ಎಂದು ವರುಣ ಕ್ಷೇತ್ರದ ಹಾಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಇರುವುದರಿಂದ ನನ್ನ ತಂದೆ ಸಿದ್ದರಾಮಯ್ಯ ಅವರಿಗೆ ವರುಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದೇನೆ. ವರುಣ ಕ್ಷೇತ್ರ ಸಿದ್ದರಾಮಯ್ಯನವರ ಪಾಲಿಗೆ ಅದೃಷ್ಟದ ಕ್ಷೇತ್ರ. ಇಲ್ಲಿಂದ ಸ್ಪರ್ಧಿಸಿದಾಗ ಮೊದಲು ವಿರೋಧ ಪಕ್ಷದ ನಾಯಕರಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದರು. ಈ ಬಾರಿಯೂ ಅವರಿಗೆ ಸಿಎಂ ಆಗುವ ಅವಕಾಶವಿದೆ ಅಂತ ಹೇಳಿದ್ದಾರೆ.
ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್, ಪುತ್ರ ಬಿಟ್ಟು ಕೊಟ್ಟ ಸುಳಿವು
ಕೋಲಾರ ಸೇರಿದಂತೆ ಹಲವು ಕ್ಷೇತ್ರಗಳು ಅಪ್ಪನಿಗೆ ಸೇಫ್ ಇವೆ. ಆದರೆ, ವರುಣಕ್ಕೆ ಬರಲಿ ಅನ್ನೋದು ನನ್ನ ಮತ್ತು ಪಕ್ಷದ ಕಾರ್ಯಕರ್ತರ ಬಯಕೆ. ನನ್ನ ಆಸೆಯನ್ನು ಅಪ್ಪನ ಮುಂದೆ ಹೇಳಿದ್ದೇನೆ. ಆದರೆ, ಅಪ್ಪ ಈವರೆಗೂ ಯಾವ ತೀರ್ಮಾನವನ್ನೂ ಮಾಡಿಲ್ಲ. ಅವರು ವರುಣ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಅಪ್ಪನ ಪರವಾಗಿ ನಿಂತು ಕೆಲಸ ಮಾಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.