
ತುಮಕೂರು (ಫೆ.24) : ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆಂಬ ಪ್ರತಿಪಕ್ಷ ಬಿಜೆಪಿ ಭವಿಷ್ಯ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೆಲ ಕಾಂಗ್ರೆಸ್ ಹಿರಿಯ ನಾಯಕರು ದೆಹಲಿ ಯಾತ್ರೆ ಕೈಗೊಂಡಿರುವ ಬೆನ್ನಲ್ಲೇ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಭಾನುವಾರ ತಮ್ಮ ಸ್ವಕೇತ್ರದಲ್ಲಿಯೇ ರಾಜಿನಾಮೆ ಮಾತುಗಳನ್ನು ಆಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಭಾನುವಾರ ತುಮಕೂರು ಜಿಲ್ಲೆ ಕೊರಟಗೆರೆ ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಡಾ.ಪರಮೇಶ್ವರ್, ‘ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸ್ಸಿನ ಆಕಾಂಕ್ಷೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಯಕರ್ತರ ಕ್ಷಮೆ ಕೇಳಿದರು. ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’ ಎಂದು ಹೇಳಿದರು.
ಇದನ್ನೂ ಓದಿ: 'ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿದ್ರೆ ನಾನು ಬೇರೆ ದಾರಿ ನೋಡಿಕೊಳ್ತೇನೆ': ಸಂಚಲನ ಸೃಷ್ಟಿಸಿದ ಶಶಿ ತರೂರ್ ಹೇಳಿಕೆ!
ಪರಂರ ಈ ಅಚ್ಚರಿಯ ಹೇಳಿಕೆಯಿಂದ ಕಾರ್ಯಕರ್ತರಲ್ಲೇ ಗೊಂದಲ ನಿರ್ಮಾಣವಾಯಿತು. ಕೂಡಲೇ ಕಾರ್ಯಕರ್ತರು ‘ರಾಜೀನಾಮೆ ಬೇಡ. ನೀವು ಮುಖ್ಯಮಂತ್ರಿ ಆಗಿ’ ಎಂದು ಘೋಷಣೆ ಕೂಗಿದರು.
ಇತ್ತೀಚೆಗೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ರಾಜಣ್ಣ ಅವರು ದೆಹಲಿಗೆ ಭೇಟಿ ನೀಡಿ ಹಲವು ನಾಯಕರ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದರು. ಇದರ ನಡುವೆಯೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್ ಅವರು ದೆಹಲಿ ಭೇಟಿ ಕೈಗೊಂಡು ವಾಪಸ್ಸಾಗಿ ಖಾಸಗಿ ಕೆಲಸದ ನಿಮಿತ್ತ ಹೋಗಿದ್ದು, ಯಾವುದೇ ರಾಜಕೀಯ ಅಡೆಂಡಾ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅದರ ನಡುವೆಯೇ ಪರಂ ನೀಡಿರುವ ಹೇಳಿಕೆ ನಾನಾ ವಿಶ್ಲೇಷಣೆಗೆ ನಾಂದಿ ಹಾಡಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.