ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಹೋರಾಟ ಮಾಡಲು ಸಿದ್ದ: ಸಿಎಂ ಸಿದ್ದರಾಮಯ್ಯ

Published : Aug 05, 2024, 04:26 PM ISTUpdated : Aug 05, 2024, 05:50 PM IST
ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಹೋರಾಟ ಮಾಡಲು ಸಿದ್ದ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ನಾವು ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡಲು ನಾವು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಬೆಳಗಾವಿ (ಆ.05): ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ನಾವು ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡಲು ನಾವು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಪಾಲರು ಸಿಎಂ ವಿರುದ್ದ ತನಿಖೆಗೆ ಪ್ರಾಶ್ಯೂಕೇಶನ್ ಕೊಡ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇವತ್ತು ದೆಹಲಿಯಿಂದ ಬರುತ್ತಾರೆ ಎಂದು ನಿಮಗೆ ಹೇಳಿದರಾ ಎಂದು ಸುದ್ದಿಗಾರರಿಗೆ ಪ್ರಶ್ನೆ ಮಾಡಿದ ಅವರು, ಅಬ್ರಾಹಂ ಅವರು ಕೊಟ್ಟಿರುವ ಕಂಪ್ಲೀಟ್ ನ್ನ ತಿರಸ್ಕಾರ ಮಾಡಲು ನಾನು ಮನವಿ ಮಾಡಿದ್ದೇವೆ. ಇದರಲ್ಲಿ ಕಾನೂನು ಹಾಗೂ ರಾಜಕೀಯ ಹೋರಾಟಕ್ಕೆ ನಾನು ಸಿದ್ಧನಾಗಿದ್ದೇನೆ ಎಂದರು.

ಎಚ್ಡಿಕೆ ಎಷ್ಟು ದಿನ ಮಂತ್ರಿ ಆಗಿರುತ್ತಾರೆ?: ಕುಮಾರಸ್ವಾಮಿಯವರೇ, ನೀವೇಷ್ಟು ದಿನ ಕೇಂದ್ರದಲ್ಲಿ ಮಂತ್ರಿಯಾಗಿರುತ್ತೀರಿ ಎನ್ನುವುದು ನಿಮಗೆ ಗೊತ್ತಿದೆಯಾ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲಿನಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ಇನ್ನು ಹತ್ತು ತಿಂಗಳು ಮಾತ್ರ ಈ ಸರ್ಕಾರ ಇರುತ್ತದೆ’ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಜನರು ನಮಗೆ 136 ಸೀಟು ಕೊಟ್ಟು ಆಶೀರ್ವಾದ ಮಾಡಿದ್ದಾರೆ. 

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ನೇರ ಆರೋಪಿಗಳು: ಸಂಸದ ಜಗದೀಶ್‌ ಶೆಟ್ಟರ್

ಅದೇ ಜೆಡಿಎಸ್ 19 ಸೀಟ್ ಮಾತ್ರ ಗೆದ್ದಿದೆ. ಕುಮಾರಸ್ವಾಮಿಗೆ ಇದು ನೆನಪಿದೆಯಾ?. ಹಾಸನದಲ್ಲಿ ಇವರ ಕುಟುಂಬದವರು ಆಳ್ವಿಕೆ ಮಾಡುತ್ತಿದ್ದರು. ಈಗ ಹಾಸನದಲ್ಲಿ ಎಂಪಿಯಾಗಿ ಗೆದ್ದಿರುವವರು ಯಾರು? ಎಂದು ಪರೋಕ್ಷವಾಗಿ ಟೀಕಿಸಿದರು. ಇನ್ನು ಹತ್ತು ತಿಂಗಳು ಮಾತ್ರ ಈ ಸರ್ಕಾರ ಇರುತ್ತದೆ ಎನ್ನುವ ಕುಮಾರಸ್ವಾಮಿಯವರೇ, ‘ಕೇಂದ್ರದಲ್ಲಿ ನೀವೇಷ್ಟು ದಿನ ಮಂತ್ರಿಯಾಗಿರುತ್ತೀರಿ ಎಂಬುದು ಗೊತ್ತಿದೆಯಾ?’ ಎಂದು ಪ್ರಶ್ನಿಸಿದರು.

ಉಪಾಹಾರ ಸಭೆ: ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಚಾಮರಾಜನಗರ, ಕೊಡಗು ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರೊಡನೆ ಉಪಾಹಾರ ಕೂಟ ನಡೆಸಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ, ಪ್ರಸ್ತುತ ರಾಜಕೀಯ ಬೆಳವಣಿಗೆ, ಬಿಜೆಪಿ- ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆಯ ಕುರಿತು ಸಮಾಲೋಚನೆ ನಡೆಸಿದರು. 

ಸಿಎಂ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ಸಚಿವ ದಿನೇಶ್‌ ಗುಂಡೂರಾವ್‌ ಆರೋಪ

ಈ ವೇಳೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕರಾದ ದರ್ಶನ್ ಧ್ರುವನಾರಾಯಣ್, ಕೆ.ಹರೀಶಗೌಡ, ಎ.ಆರ್. ಕೃಷ್ಣಮೂರ್ತಿ, ಡಿ.ರವಿಶಂಕರ್, ಸಿ.ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಡಾ.ಯತೀಂದ್ರ ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಕೆ.ಮರೀಗೌಡ ಹಾಗೂ ಇತರರು ಉಪಸ್ಥಿತರಿದ್ದರು. ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸೆಡ್ಡು ಹೊಡೆದು ಕಾಂಗ್ರೆಸ್‌ ಸರಣಿ ಸಮಾವೇಶಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಆ.9ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದ ಹಿನ್ನೆಲೆಯಲ್ಲಿ ಈ ಉಪಾಹಾರ ಕೂಟ ಮಹತ್ವ ಪಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!