ಇದೇ ಜ.13 ಅಥವಾ 14 ರಂದು 7 ಜನ ಶಾಸಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮತ್ತೊಂದೆಡೆ ಸಚಿವರೊಬ್ಬರು ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ.
ಹೊಸಪೇಟೆ, (ಜ.11): ಕೊನೆಗೂ ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದ್ದು, ಇದೇ ಜ.13 ಅಥವಾ 14 ರಂದು 7 ಜನ ಶಾಸಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಆದ್ರೆ, ಡ್ರಾಪ್ ಮಾಡಿ ಬೇರೆಯವರಿಗೆ ಮಂತ್ರಿ ಮಾಡುವ ಲೆಕ್ಕಾಚಾರಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಯಾರನ್ನು ಮಂತ್ರಿ ಮಾಡ್ಬೇಕು? ಯಾರನ್ನ ಕೈಬಿಡಬೇಕು ಎನ್ನುವ ಚಿಂತನೆಗಳು ನಡೆದಿವೆ.
undefined
ಕೇವಲ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಪ್ರಮುಖ ಖಾತೆ ಬದಲಾವಣೆ ಖಚಿತ...!
ಇನ್ನು ಈ ವಿಚಾರವಾಗಿ ಮಾತನಾಡಿದ ಅರಣ್ಯ ಸಚಿವ ಆನಂದ್ ಸಿಂಗ್, ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇರುವುದಾದರೆ ನನ್ನ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.
ಹೊಸಪೇಟೆಯಲ್ಲಿ ಇಂದು (ಸೋಮವಾರ) ಸದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್ ಯಡಿಯೂರಪ್ಪ ಅವರು ಈಗಾಗಲೇ ಸರ್ಕಾರ ರಚನೆ ಮಾಡಲು ಕಾರಣೀಕರ್ತರಾದ ನಮಗೆಲ್ಲ ಸಚಿವ ಸ್ಥಾನ ನೀಡಿದ್ದಾರೆ. ಈ ಹಿಂದೆ ಹೇಳಿದಂತೆ ನಾನು ಸಚಿವ ಸ್ಥಾನದ ತ್ಯಾಗಕ್ಕೆ ಸದಾ ಸಿದ್ಧವಾಗಿರುವೆ ಎಂದರು.
ಇನ್ನುಳಿದವರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ನಮ್ಮ ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿಯೂ ಕೊಟ್ಟ ಮಾತು ಈಡೇರಿಸಿದ್ದಾರೆ. ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇದ್ದರೆ. ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಸಿದ್ಧ ಎಂದಿದ್ದೆ, ನಾನು ಈಗಲೂ ಆ ಮಾತಿಗೆ ಬದ್ಧನಾಗಿದ್ದೇನೆ ಎಂದು ಹೇಳಿದರು.
ನನಗೆ ಬಳ್ಳಾರಿ ಜಿಲ್ಲಾ ವಿಭಜನೆ ಹಾಗೂ ವಿಜಯನಗರ ಜಿಲ್ಲೆ ರಚನೆ ಮಾಡುವುದು ಮುಖ್ಯ. ನನ್ನ ಬೇಡಿಕೆಯನ್ನು ಸಿಎಂ ಈಡೇರಿಸಿದ್ದಾರೆ. ಹೀಗಾಗಿ ಅವರು ಕೇಳಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದರು.