ನನ್ನ ಅಧಿಕಾರವಧಿಯಲ್ಲಿ ಎಲ್ಲ ಸಮುದಾಯಗಳನ್ನು ಸಮಾನ ದೃಷ್ಟಿಯಿಂದ ನೋಡುತ್ತ ಅವರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕ್ಷೇತ್ರದ ಜನತೆಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸೌಹಾರ್ದಯುತವಾದ ವಾತಾವರಣವನ್ನು ಕ್ಷೇತ್ರದಲ್ಲಿ ನಿರ್ಮಿಸಿದ್ದೇನೆ ಎಂದು ತಿಳಿಸಿದ ರಮೇಶ ಜಾರಕಿಹೊಳಿ.
ಗೋಕಾಕ(ಮೇ.02): ಕಾಂಗ್ರೆಸ್ ಪಕ್ಷ ಜಾತಿ, ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ನಿಜವಾದ ಕೋಮುವಾದಿ ಪಕ್ಷವಾಗಿದೆ. ಈ ಹಿಂದೆ ಬ್ರಿಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಪಕ್ಷ ಅನುಸರಿಸಿಕೊಂಡು ಬಂದಿದೆ ಎಂದು ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ದೂರಿದರು.
ಗೋಕಾಕ ಮತಕ್ಷೇತ್ರದ ಅಂಕಲಗಿ ಪಟ್ಟಣದಲ್ಲಿ ಸೋಮವಾರ ಮತಯಾಚನೆ ನಡೆಸಿ ಮಾತನಾಡಿದ ಅವರು, ದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ATHANI CONSTITUENCY: ಹೈವೋಲ್ಟೇಜ್ ಕ್ಷೇತ್ರ ಅಥಣಿ ಈ ಬಾರಿ ಕಾಂಗ್ರೆಸ್ ಪಾಲಾಗುತ್ತಾ?
ನನ್ನ ಅಧಿಕಾರವಧಿಯಲ್ಲಿ ಎಲ್ಲ ಸಮುದಾಯಗಳನ್ನು ಸಮಾನ ದೃಷ್ಟಿಯಿಂದ ನೋಡುತ್ತ ಅವರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕ್ಷೇತ್ರದ ಜನತೆಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸೌಹಾರ್ದಯುತವಾದ ವಾತಾವರಣವನ್ನು ಕ್ಷೇತ್ರದಲ್ಲಿ ನಿರ್ಮಿಸಿದ್ದೇನೆ ಎಂದು ತಿಳಿಸಿದರು.
ಶಿಸ್ತುಬದ್ಧ ಹಾಗೂ ನುಡಿದಂತೆ ನಡೆದು ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷಕ್ಕೆ ತಾವುಗಳ ಬೆಂಬಲಿಸಬೇಕು. ಕಾಂಗ್ರೆಸ್ ಪಕ್ಷ ಮುಳುಗುತ್ತಿದ್ದು, ಕೇವಲ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ಮೋಸಗೊಳಿಸುವ ಪಕ್ಷಕ್ಕೆ ಮಾರುಹೋಗದೇ ಬಿಜೆಪಿ ಪಕ್ಷಕ್ಕೆ ತಮ್ಮ ಮತವನ್ನು ನೀಡಿ, ಮತ್ತೊಮ್ಮೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಸಹಕರಿಸುವಂತೆ ಕೋರಿದರು.
ಗೋಕಾಕ ಮತಕ್ಷೇತ್ರದ ಹನಮಾಪೂರ, ಹುಲಿಕಟ್ಟಿ, ಕೊಳವಿ, ತವಗ, ಕನಸಗೇರಿ, ಬೆಣಚಿನಮರ್ಡಿ(ಉ), ಶಿಗಿಹೋಳಿ, ಗಡ್ಡಿಹೊಳಿ, ಕುಂದರಗಿ, ದಾಸನಟ್ಟಿಡುಮ್ಮಉರುಬಿನಹಟ್ಟಿಗ್ರಾಮಗಳಲ್ಲಿ ಮನೆ ಮನೆಗೆ ಮತಯಾಚನೆ ಮಾಡಿದರು. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಸ್ವಯಂ ಪ್ರೇರಿತರಾಗಿ ಆರತಿ ಬೆಳಗಿ ಹೂಮಳೆ ಗೈದು ಸ್ವಾಗತಿಸಿದರು.
ಅಂಬಾದೇವಿಯ ಆಶೀರ್ವಾದದಿಂದ ಅದೊಂದು ಆದ್ರೆ ಸವದಿ ಹೆಣ ಬಿದ್ದಂಗೆ ಲೆಕ್ಕ: ಜಾರಕಿಹೊಳಿ
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರು-ಸದಸ್ಯರು, ಗ್ರಾಮ ಪಂಚಾಯತಿ-ಅಧ್ಯಕ್ಷರು ಸದಸ್ಯರು ಜನಪ್ರತಿನಿಧಿಗಳು, ಗ್ರಾಮಗಳ ಹಿರಿಯರು, ಬಿಜೆಪಿ ಕಾರ್ಯಕರ್ತರು, ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಿದ್ದು, ಬರುವ ಮೇ.10ರಂದು ಬಿಜೆಪಿಗೆ ಮತ ನೀಡುವ ಮೂಲಕ ನನ್ನನ್ನು ಶಾಸಕನನ್ನಾಗಿ 7ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡುವ ಅವಕಾಶ ನೀಡಬೇಕು ಅಂತ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.