ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿ; ಮಾಜಿ ಎಂಎಲ್‌ಸಿ ಹೆಚ್.ಆರ್.ಶ್ರೀನಾಥ

Published : Oct 08, 2022, 02:05 PM ISTUpdated : Oct 08, 2022, 02:06 PM IST
ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿ; ಮಾಜಿ ಎಂಎಲ್‌ಸಿ ಹೆಚ್.ಆರ್.ಶ್ರೀನಾಥ

ಸಾರಾಂಶ

ಭ್ರಷ್ಟಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿ ಭಾರತ ಜೋಡೊ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಎಚ್‌.ಆರ್‌. ಶ್ರೀನಾಥ ಮನವಿ

ಗಂಗಾವತಿ (ಅ.8) : ಭ್ರಷ್ಟಾಚಾರದ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿ ಎಂದು ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ್‌ ಮನವಿ ಮಾಡಿದರು. ನಗರದ ಸರೋಜಮ್ಮ ಕಲ್ಯಾಣಮಂಟಪದಲ್ಲಿ ಭಾರತ ಜೋಡೊ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಭ್ರಷ್ಟಬಿಜೆಪಿ ಹೊರದೋಡಿಸಲು ರಾಹುಲ್‌ ಗಾಂಧಿ ಪಾದಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ನಿಲ್ಲಿಸಲು ಮುಂದಾಗಬೇಕಾಗಿದೆ ಎಂದರು.

ಕೊಪ್ಪಳ: ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ನಾಲ್ವರು ಮಹಿಳೆಯರು..!

ರಾಹುಲ್‌ ಗಾಂಧಿ ಅವರು ದೇಶದ ಎಲ್ಲ ಧರ್ಮದವರನ್ನು ಕೂಡಿಸಿಕೊಂಡು ಹೋಗುವವರು. ಕೋಮು ಸೌಹಾರ್ದತೆಯನ್ನು ಹಾಳು ಮಾಡುವರು ಬಿಜೆಪಿಯವರು. ಇನ್ನು 6 ತಿಂಗಳ ಒಳಗಾಗಿ ಚುನಾವಣೆ ಬರುತ್ತದೆ. ಬಿಜೆಪಿಯು ಧರ್ಮದ ಹೆಸರಿನಲ್ಲಿ ಅಧಿಕಾರಕ್ಕೆ ಬರಲು ಹುನ್ನಾರ ನಡೆಸುತ್ತಿದೆ ಎಂದರು. ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರು.

ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮಾತನಾಡಿ, ಭಾರತ ಜೋಡೊ ಯಾತ್ರೆಗೆ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ. ರಾಹುಲ್‌ ಗಾಂಧಿ ಅವರಿಗೆ ಅಧಿಕಾರ ಬೇಕಾಗಿಲ್ಲ. ಎಲ್ಲರೂ ಒಂದಾಗಬೇಕಾಗಿದೆ. ದೇಶ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರೈತ ವಿರೋಧಿ, ಜನವಿರೋಧಿ ಸರ್ಕಾರವಾಗಿದೆ. ಈ ಸರ್ಕಾರವನ್ನು ಓಡಿಸಬೇಕಾಗಿದೆ. ಬಳ್ಳಾರಿ ಕ್ಷೇತ್ರ ಸೋನಿಯಾ ಗಾಂಧಿ ಅಚ್ಚು ಮೆಚ್ಚಿನ ಕ್ಷೇತ್ರವಾಗಿದೆ. ಮಾಜಿ ಸಂಸದ ಎಚ್‌.ಜಿ. ರಾಮುಲು ನೇತೃತ್ವದಲ್ಲಿ ಅವರ ಗೆಲುವಿಗೆ ಶ್ರಮಿಸಿದ್ದೇವೆ ಎಂದರು. ಮಾಜಿ ಸಂಸದ ಶಿವರಾಮ ಗೌಡ ಮಾತನಾಡಿ, ರಾಹುಲ್‌ ಗಾಂಧಿ ದೇಶದ ಭಾವಿ ಪ್ರಧಾನಿ. ಬಿಜೆಪಿ ಸರ್ಕಾರ ಸುಳ್ಳು ಹೇಳುವ ಪಕ್ಷವಾಗಿದೆ ಎಂದರು.

ಪೆಟ್ರೋಲ್ ಡೀಸೆಲ್ ಗ್ಯಾಸ್‌ ದರ ಹೆಚ್ಚಾಗಿದೆ. ಇದರ ಬಗ್ಗೆ ಪ್ರತಿಭಟನೆ ಮಾಡಲು ಆಗುತ್ತಿಲ್ಲ. ಸರ್ಕಾರ ಜನರನ್ನು ಕಟ್ಟಿಹಾಕಿದೆ. ಧರ್ಮ, ಜಾತಿ ಜಾತಿಗಳಲ್ಲಿ ವಿಷಬೀಜ ಬಿತ್ತುವುದನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ನಡೆಯುವ ಭಾರತ ಜೋಡೊ ಕಾರ್ಯಕ್ರಮಕ್ಕೆ 5 ಲಕ್ಷ ಜನರು ಭಾಗವಹಿಸಲಿದ್ದಾರೆಂದರು.

ಕೊಪ್ಪಳ‌ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಜ್ ವ್ಯವಹಾರ ನೋಡಿ ಬೆಚ್ಚಿಬಿದ್ದ ಪೊಲೀಸ್!

ಮುಖಂಡರಾದ ರೆಡ್ಡಿ ಶ್ರೀನಿವಾಸ, ಪುತ್ತೂರು ಶ್ರೀನಿವಾಸ, ವೀರಭದ್ರಪ್ಪ ನಾಯಕ, ರಮೇಶ ಗೌಳಿ, ನಾಗರಾಜ್‌ ನಂದಾಪುರ, ಸಂಗಮೇಶ ಬಾದವಾಡಗಿ, ಸರ್ವೇಶ್‌ ಮಲ್ಲಿಕಾರ್ಜುನ ನಾಗಪ್ಪ, ಸುರೇಶ ಗೌರಪ್ಪ, ಮಹೇಶ ಸಾಗರ ಸೇರಿದಂತೆ ಇತರರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ