ಜನರ ಭಾವನೆಗಳ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟ: ಭಾರತ್ ಮರುನಾಮಕರಣಕ್ಕೆ ಸಚಿವ ಕೃಷ್ಣ ಬೈರೇಗೌಡ ವ್ಯಂಗ್ಯ

By Govindaraj S  |  First Published Sep 6, 2023, 9:50 AM IST

ಇಂಡಿಯಾ ಬದಲಿಗೆ ಭಾರತ ಹೆಸರಿಡಲು ಕೇಂದ್ರ ಚಿಂತನೆ ವಿಚಾರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬಂದ ನಂತರ ಜನರ ಪತಿಸ್ಥಿತಿ ದುಸ್ಥಿತಿಯಾಗಿದೆ. 


ಚಿತ್ರದುರ್ಗ (ಸೆ.06): ಇಂಡಿಯಾ ಬದಲಿಗೆ ಭಾರತ ಹೆಸರಿಡಲು ಕೇಂದ್ರ ಚಿಂತನೆ ವಿಚಾರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬಂದ ನಂತರ ಜನರ ಪತಿಸ್ಥಿತಿ ದುಸ್ಥಿತಿಯಾಗಿದೆ. ಎಲ್ಲಾ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಂದ ಸುಲಿಗೆ ಮಾಡ್ತಿದ್ದಾರೆ. ಬಡವರನ್ನ ಸುಲಿದು ಸಾಹುಕಾರರನ್ನು ಸಾಕುವಂತಹ ದುರ್ಗತಿ ದೇಶಕ್ಕೆ ಬಂದಿದೆ. ಹೊಟ್ಟೆ ಪಾಡಿನ ವಿಷಯ ಮುಚ್ಚಿ ಹಾಕಲು, ಭಾವನಾತ್ಮಕ ವಿಷಯಗಳ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಇಲ್ಲಿವರೆಗೂ ಸಕ್ಸಸ್ ಆಗಿತ್ತು, ಮುಂದೆ ಆಗಲ್ಲ ಎಂದರು. 

ಭಾವನಾತ್ಮಕ ಅಮಲಿನಲ್ಲಿ ಮತ ಪಡೆಯುವ ಪದ್ದತಿ ಯಾವತ್ತಿಗೂ ಕೆಲಸ ಮಾಡಲ್ಲ. ಈ ಬಾರಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಭಾವನಾತ್ಮಕ ವಿಷಯಗಳಿಂದ ದೇಶ ಉದ್ದಾರ ಆಗಲ್ಲ. ಹಸಿದವರಿಗೆ ಅನ್ನ, ಉದ್ಯೋಗ ನೀಡಿದಾಗ ದೇಶ ಅಭಿವೃದ್ಧಿ ಆಗುತ್ತದೆ. ಬಡವರನ್ನ ಮತಕ್ಕಾಗಿ ಉಪಯೋಗ ಮಾಡಿಕೊಳ್ಳುವ ರಾಜಕೀಯ ಕೊನೆ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. 

Tap to resize

Latest Videos

ಪ್ರಧಾನಿ ಮೋದಿ 'ಗೇಮ್ ಚೇಂಜರ್ಸ್' ಅಲ್ಲ 'ನೇಮ್ ಚೇಂಜರ್ಸ್': ಇಂಡಿಯಾ ಹೆಸರು ಬದಲಾವಣೆಗೆ ಸಚಿವ ಪ್ರಿಯಾಂಕ್ ವಾಗ್ದಾಳಿ

ರಾಜ್ಯದಲ್ಲಿನ ಬರ ವಿಷಯಕ್ಕೆ ಸಚಿವರ ಪ್ರತಿಕ್ರಿಯೆ ನೀಡಿದ ಕೃಷ್ಣ ಬೈರೇಗೌಡ, ಆ.18 ಕ್ಕೆ ಮಳೆ ಕೊರೆತೆ ಇರುವ ತಾಲ್ಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ 62 ತಾಲ್ಲೂಕು ಬರ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಬರ ಪಟ್ಟಿಗೆ ಆಯ್ಕೆಯಾಗಿದೆ. ಇನ್ನೊಂದು ಸುತ್ತು ಬೆಲೆ ಸಮೀಕ್ಷೆ ಮಾಡಬೇಕು ಎಂದಾಗ ಉಳಿದ 51 ತಾಲ್ಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಸೆ.2 ಕ್ಕೆ  83 ತಾಲ್ಲೂಕು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇವೆ. 3-4 ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೂಡಾ ನಾವು ನೀಡುತ್ತೇವೆ. ಎಲ್ಲಿ ಬರ ಇದೆ ಅಲ್ಲಿ MLA ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡುತ್ತೇವೆ. 

ಹಿಂದೂ ಧರ್ಮ ಯಾವಾಗ ಹುಟ್ಟಿತು, ಹುಟ್ಟಿಸಿದ್ದು ಯಾರು?: ಗೃಹಸಚಿವ ಪ​ರ​ಮೇ​ಶ್ವ​ರ್‌

ಮೇವಿನ ಕೊರತೆ ಆಗಬಾರದು ಎಂದು ರೈತರಿಗೆ 20 ಕೋಟಿ ವೆಚ್ಚದಲ್ಲಿ ರೈತರಿಗೆ ಉಚಿತ ಮೇವಿನ ಬೀಜ ನೀಡುತ್ತೇವೆ. ಬರ ಪ್ರದೇಶದಲ್ಲಿ ನರೇಗಾದಲ್ಲಿ 150 ಉದ್ಯೋಗ ಖಾತ್ರಿ ಕೆಲಸ ನೀಡಲು ಚಿಂತನೆ ಮಾಡಿದ್ದೇವೆ. ಜಿಲ್ಲಾಧಿಕಾರಿ ಖಾತೆಯಲ್ಲಿ 529 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಬದಲಾವಣೆಗೆ ಮನವಿ ಮಾಡುತ್ತೇವೆ. ಜನರ ನಿರೀಕ್ಷೆಯಂತೆ ಬರ ಘೋಷಣೆ ಮಾಡಲು ಆಗಲ್ಲ. ಹೀಗಾಗಿ ನಮ್ಮ ಸರ್ಕಾರ ಬಂದ ಬಳಿಕ ಪತ್ರ ಬರೆದಿದ್ದೇವೆ. ಇನ್ನೊಂದು ಬಾರಿ ಮಾನದಂಡ ಬದಲಾವಣೆ ಮಾಡಿ ಎಂದು ಮನವಿ ಮಾಡುತ್ತೇವೆ. ಸಮರ್ಥವಾಗಿ ಜನರಿಗೆ ನ್ಯಾಯ ಕೊಡಲು ಕೇಂದ್ರ ಸರ್ಕಾರದ ಮಾನದಂಡ ಕೈ ಕಟ್ಟಿ ಹಾಕಿದಂತಾಗಿದೆ ಎಂದರು.

click me!