ಬಿಜೆಪಿ ವಿರುದ್ಧ ಕಾಂಗ್ರೆಸ್‌ನಿಂದ ರಾಜೀನಾಮೆ ಅಸ್ತ್ರ!

By Kannadaprabha News  |  First Published Jan 3, 2025, 5:30 AM IST

ಸಂಪುಟ ಸದಸ್ಯರ ಜತೆಗಿನ ಅನೌಪಚಾರಿಕ ಚರ್ಚೆ ವೇಳೆ ಬಿಜೆಪಿ ನಾಯಕರ ಮೇಲಿನ ಪ್ರಕರಣಗಳು ಹಾಗೂ ಹಗ ರಣಗಳ ಆರೋಪಗಳ ಪಟ್ಟಿಯನ್ನೂ ಸದಸ್ಯರಿಗೆ ನೀಡಿರುವುದಾಗಿ ತಿಳಿದು ಬಂದಿದೆ.


ಬೆಂಗಳೂರು(ಜ.03): ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವೇ ಇಲ್ಲ. ಹೀಗಾಗಿ ಪ್ರಿಯಾಂಕ್ ಖರ್ಗೆ ಪರ ಎಲ್ಲಾ ಸಚಿವರು ಗಟ್ಟಿಯಾಗಿ ನಿಲ್ಲಬೇಕು. ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ಮುಂದಿಟ್ಟುಕೊಂಡು ತಿರುಗೇಟು ನೀಡಬೇಕು, ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 

ಸಂಪುಟ ಸದಸ್ಯರ ಜತೆಗಿನ ಅನೌಪಚಾರಿಕ ಚರ್ಚೆ ವೇಳೆ ಬಿಜೆಪಿ ನಾಯಕರ ಮೇಲಿನ ಪ್ರಕರಣಗಳು ಹಾಗೂ ಹಗ ರಣಗಳ ಆರೋಪಗಳ ಪಟ್ಟಿಯನ್ನೂ ಸದಸ್ಯರಿಗೆ ನೀಡಿರುವುದಾಗಿ ತಿಳಿದು ಬಂದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಡೀ ಪ್ರಕರಣದ ಬಗ್ಗೆ ಸಂಪುಟ ಸದಸ್ಯರಿಗೆ ವಿವರಣೆ ನೀಡಿದರು ಎನ್ನಲಾಗಿದೆ.

Tap to resize

Latest Videos

ಖರ್ಗೆ ಸುಪುತ್ರ ಪ್ರಿಯಾಂಕ್ ಯಾವ ಮಟ್ಟಕ್ಕೂ ಇಳಿಯಬಲ್ಲರು..! ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಿಯಾಂಕ್ ಖರ್ಗೆ ಅವರನ್ನು ಬಲ ವಾಗಿ ಸಮರ್ಥಿ ಸಿಕೊಂಡಿದ್ದು, ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಪಾತ್ರವಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರಿಲ್ಲದಿದ್ದರೂ ಬಿಜೆಪಿಯವರು ರಾಜಕೀಯ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಎಲ್ಲಾ ಸಚಿವರು ತಿರುಗೇಟು ನೀಡಬೇಕು ಎಂದು ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ. 

ಬಿಜೆಪಿಗರ ಪ್ರಕರಣಗಳ ಪಟ್ಟಿ ಪ್ರಸ್ತಾಪ: 

ಲಂಚದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸ್ವಂತ ಸಹೋದರನ ಬಂಧನವಾದರೂ ಅವರು ಯಾಕೆ ರಾಜೀನಾಮೆ ನೀಡಲಿಲ್ಲ. ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರ ಮೇಲೆ ಇ.ಡಿ. ಪ್ರಕರಣ ಇರುವುದನ್ನು ಪ್ರಮಾಣಪತ್ರದಲ್ಲಿ ಅವರೇ ಹೇಳಿದ್ದಾರೆ. ಇನ್ನು ಸಚಿವ ವಿ. ಸೋಮಣ್ಣ ಅವರ ಮೇಲೂ ಹೌಸಿಂಗ್ ಸೊಸೈಟಿ ಅಕ್ರಮ ಆರೋಪ ಇದೆ. ಇವರೆಲ್ಲರೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಯಾವಾಗ ಎಂದು ಪ್ರಶ್ನಿಸಬೇಕು ಸೂಚಿಸಿರುವುದಾಗಿ ಎಂದು ತಿಳಿದುಬಂದಿದೆ.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ? ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಇನ್ನು ವಿಜಯೇಂದ್ರ ಇ.ಡಿ ಪ್ರಕರಣ ಎದುರಿಸುತ್ತಿದ್ದಾರೆ. ಅವರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಿ.ಎಸ್ .ಯಡಿಯೂರಪ್ಪ ಮೇಲೆ ಪೋಕೋ ಪ್ರಕರಣ ಇದೆ. ಇವರೆಲ್ಲರೂ ತಮ್ಮ ರಾಜಕೀಯ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲು ತೀರ್ಮಾನಿಸಲಾಗಿದೆ.

ಗುತ್ತಿಗೆದಾರ ಸಚಿನ್ ಮರಣಪತ್ರ ಕಾಂಗ್ರೆಸ್ ವರಿಷ್ಠರಿಗೆ: ಬಿಜೆಪಿ

ಬೆಂಗಳೂರು: ಬೀದ‌ರ್ ಗುತ್ತಿಗೆದಾರ ಸಚಿನ್ ಪಂಚಾಳ್ ಬರೆದಿರುವ ಡೆತ್‌ನೋಟ್ ಅನ್ನು ಕಾಂಗ್ರೆಸ್ಸಿನ ರಾಷ್ಟ್ರೀಯ ಹಾಗೂ ರಾಜ್ಯ ಹಿರಿಯ ನಾಯಕರಿಗೆ ಕಳುಹಿಸಲಾಗುವುದು. ಸಚಿವ ಪ್ರಿಯಾಂಕ್ ಖರ್ಗೆ ವಜಾ ಮಾಡಲು ಆಗ್ರಹಿಸಲಾಗುವುದು ಎಂದು ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ.

click me!