
ಕಾರವಾರ : ಕಾಂಗ್ರೆಸ್ ಹೈಕಮಾಂಡ್ ಆದಷ್ಟು ಶೀಘ್ರ ಅಧಿಕಾರ ಹಂಚಿಕೆ ಸಂಬಂಧದ ಗೊಂದಲ ಬಗೆಹರಿಸಿ, ಮುಖ್ಯಮಂತ್ರಿ ಹುದ್ದೆ ಸಂಬಂಧ ಶೀಘ್ರ ನಿರ್ಣಯ ಕೈಗೊಳ್ಳಬೇಕು ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಹಳಿಯಾಳದ ಗೃಹ ಕಚೇರಿಯಲ್ಲಿ ‘ಕನ್ನಡಪ್ರಭ’ದ ಜೊತೆ ಮಾತನಾಡಿ, ಹೈಕಮಾಂಡ್ ಸಮಯ ವ್ಯರ್ಥಮಾಡದೆ, ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೋ ಅಥವಾ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗುತ್ತಾರೋ ಎನ್ನುವ ಬಗ್ಗೆ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸರ್ಕಾರದ ಇಮೇಜ್‌ಗೆ ತೊಂದರೆ ಆಗಲಿದೆ. ಆಡಳಿತ ಯಂತ್ರದಲ್ಲೂ ಸ್ವಲ್ಪ ಮಟ್ಟಿಗೆ ಅಸ್ಥಿರತೆ ಕಾಣಿಸಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇವರಿಬ್ಬರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ, ಜೀವನದಲ್ಲಿ ಪ್ರತಿಯೊಬ್ಬರಿಗೂ ಆಸೆ, ಆಕಾಂಕ್ಷೆ ಹಾಗೂ ಗುರಿ ಇರುತ್ತದೆ. ಹೀಗಾಗಿ, ಡಿಕೆಶಿಗೆ ತಾವೂ ಮುಖ್ಯಮಂತ್ರಿ ಆಗಬೇಕು ಎಂಬ ಆಕಾಂಕ್ಷೆ ಇರಬಹುದು. ಹಾಗೆಯೇ ಸಿದ್ದರಾಮಯ್ಯ ಅವರಿಗೂ ಮುಖ್ಯಮಂತ್ರಿಯಾಗಿ ತಾವೇ 5 ವರ್ಷ ಮುಂದುವರಿಯಬೇಕೆಂಬ ಆಕಾಂಕ್ಷೆ ಇರಬಹುದು. ಇದರಲ್ಲಿ ಇಬ್ಬರದ್ದೂ ತಪ್ಪಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.