
ಬೆಂಗಳೂರು, [ಫೆ.04]: ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಆನಂದ್ ಸಿಂಗ್ ಇಂದು [ಸೋಮವಾರ] ಡಿಸ್ಚಾರ್ಚ್ ಆಗಿದ್ದಾರೆ.
ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಗಣೇಶ್ ಹಾಗೂ ವಿಜಯನಗರ ಶಾಸಕ ಆನಂದ್ ಸಿಂಗ್ ನಡುವೆ ಜಗಳ ನಡೆದಿತ್ತು. ಈ ವೇಳೆ ಆನಂದ್ ಸಿಂಗ್ಗೆ ಗಣೇಶ್ ಬಾಟಲ್ನಿಂದ ಹಲ್ಲೆ ಮಾಡಿದ್ದರು.
ಆನಂದ್ ಸಿಂಗ್ ಕುಟುಂಬಕ್ಕೆ ಬೆದರಿಕೆ ಇದೆಯಾ? ಪುತ್ರ ಸಿದ್ಧಾರ್ಥ್ ಹೇಳೋದೇನು?
ಹಲ್ಲೆಯಿಂದಾಗಿ ಆನಂದ್ ಸಿಂಗ್ ಕಣ್ಣಿಗೆ ಗಾಯವಾಗಿತ್ತು. ಅಲ್ಲದೇ, ಎದೆಯ ಭಾಗಕ್ಕೆ ಪೆಟ್ಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದ್ರೆ ಇಂದು ರಾತ್ರಿ 8.30ರ ಸುಮಾರಿಗೆ ಆನಂದ್ ಸಿಂಗ್ ತರಾತುರಿಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಹಲ್ಲೆ ಮಾಡಿ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಜೆ.ಎನ್. ಗಣೇಶ್ ತಲೆಮರಿಸಿಕೊಂಡಿದ್ದಾರೆ.
ಹಲ್ಲೆ ನಂತರ ಮೊದಲ ಸಾರಿ ಮಾತನಾಡಿದ ಆನಂದ್ ಸಿಂಗ್, ಗಣೇಶ್ ಬಗ್ಗೆ ಏನಂದ್ರು?
ರಾಮನಗರ ಪೊಲೀಸರು ಗಣೇಶ್ ನನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಿದ್ದು, ಇದುವರೆಗೂ ಅವರನ್ನು ಬಂಧಿಸಲು ಸಾಧ್ಯವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.