Bhaskar Rao : ಸಿಎಂ ಕೇಜ್ರಿವಾಲ್‌ಗೆ ಮತ್ತೊಂದು ಶಾಕ್: ಎಎಪಿ ತೊರೆದು ಬಿಜೆಪಿ ಸೇರಲಿರುವ ಭಾಸ್ಕರ್ ರಾವ್!

Published : Feb 28, 2023, 08:45 PM IST
Bhaskar Rao : ಸಿಎಂ ಕೇಜ್ರಿವಾಲ್‌ಗೆ ಮತ್ತೊಂದು ಶಾಕ್: ಎಎಪಿ ತೊರೆದು ಬಿಜೆಪಿ ಸೇರಲಿರುವ ಭಾಸ್ಕರ್ ರಾವ್!

ಸಾರಾಂಶ

ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ.

ಬೆಂಗಳೂರು (ಫೆ..28): ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ.

ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ(AAP) ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ(Retired IPS officer) ಭಾಸ್ಕರ್ ರಾವ್(Bhaskar rao) ಅವರು ನಾಳೆ ಅಧಿಕೃತವಾಗಿ ಬಿಜೆಪಿ(BJP)ಗೆ ಸೇರ್ಪಡೆಗೊಳ್ಳಲಿದ್ದಾರೆ. 

ಇಂದು ಬಿಜೆಪಿ ಕಚೇರಿ ಜಗನ್ನಾಥ ಭವನ(BJP office Jagannath Bhavan)ದಲ್ಲಿ ಕಂದಾಯ ಸಚಿವ ಆರ್ ಅಶೋಕ್(R Ashok) ಅವರನ್ನು ಭೇಟಿ ಮಾಡಿದ ಬಾಸ್ಕರ್ ರಾವ್ ಅವರು ನಂತರ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕ ಜೊತೆ ಮಾತುಕತೆ ನಡೆಸಿದರು.

ಭಾಸ್ಕರ್ ರಾವ್ ಅವರು ಎಎಪಿ ಪಕ್ಷದಿಂದ ಬಸವನಗುಡಿ ವಿಧಾನಸಭೆ ಕ್ಷೇತ್ರ(Basavanagudi assembly constituency)ದಿಂದ ಸ್ಪರ್ಧಿಸುವ ಇಚ್ಛೆ ಹೊಂದಿದ್ದ ಅವರ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಅಚ್ಚರಿ ಮೂಡಿಸಿದೆ. 

ಕೇಜ್ರಿವಾಲ್ ಸರ್ಕಾರದ 2 ವಿಕೆಟ್ ಪತನ, ಜೈಲು ಪಾಲಾಗಿರುವ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ
ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!