ತವರು ಜಿಲ್ಲೆಯಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಿಗ್ ಶಾಕ್; ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆಪ್ತ!

By Kannadaprabha News  |  First Published Jan 25, 2024, 7:17 AM IST

ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.


ಬೆಂಗಳೂರು (ಜ.25): ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಲೋಕಸಭೆ ಚುನಾವಣೆಗೆ ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ತವರು ಕ್ಷೇತ್ರದಲ್ಲೇ ಬಿಗ್​​ ಶಾಕ್ ನೀಡಲಾಗಿದೆ. ​ಅದು ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

Tap to resize

Latest Videos

undefined

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಹೋಗಲ್ಲ: ಡಿಕೆ ಶಿವಕುಮಾರ

ಬುಧವಾರ ಬೆಳಿಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಂಸದ ಎಸ್. ಮುನಿಸ್ವಾಮಿ, ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ದಲಿತ ಸಮುದಾಯದ ನಾಯಕರಾಗಿರುವ ರುದ್ರಯ್ಯ ಅವರು ನೀರಾವರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಲಿಂಗಸೂಗೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದರು. 

ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ

ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರಣ ಪಕ್ಷೇತರರಾಗಿ ಸ್ಫರ್ದಿಸಿದ್ದರು. ಇನ್ನು ತಮಗೆ ಟಿಕೆಟ್​ ತಪ್ಪಲು ಮಲ್ಲಿಕಾರ್ಜುನ್​ ಖರ್ಗೆ ಅವರೇ ಕಾರಣ ಎಂದು ಕಾಂಗ್ರೆಸ್​ ತೊರೆಯಲು ನಿರ್ಧರಿಸಿದ್ದಾರೆ ಮಾತುಗಳು ಕೇಳಿಬಂದಿದ್ದವು. ಆದರೆ ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುವುದು ಖಚಿತಪಡಿಸಿರಲಿಲ್ಲ. ಇದೀಗ ಕಮಲಪಾಳಯ ಸೇರಿದ್ದಾರೆ.

click me!