ಇದು ಸೇಡಿನ ರಾಜಕಾರಣ ಅಲ್ಲದೇ ಮತ್ತೇನು.? ಪಾಪ ಪದೇ ಪದೇ ಕುಮಾರಸ್ವಾಮಿ ಮೇಲೆ ಎಫ್‌ಐಆರ್ ಇಲ್ವಾ ಅಂತಾರೆ, ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಟ್ಟಿಲ್ಲ ಅಂತ ಕೇಳುತ್ತಾರೆ. ಕುಮಾರಸ್ವಾಮಿ ಮೇಲಿನ ಎಫ್‌ಐಆರ್‌ಗೆ ಬೇಲ್ ಪಡೆದಿದ್ದೇನೆ. ಕಾಂಗ್ರೆಸ್ ನಾಯಕರ ನಡವಳಿಕೆ, ಅಧಿಕಾರ ದುರ್ಬಳಕೆ ನೋಡಿ ವಕೀಲರ ಸಲಹೆ ಮೇರೆಗೆ ಬೇಲ್ ಪಡೆದಿದ್ದೇನೆ ಎಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣ(ಅ.11): ಕೋವಿಡ್ ಹಗರಣ ತನಿಖೆಗೆ ಎಸ್‌ಐಟಿ ರಚನೆ ಭಜನೆ ಒಂದುವರೆ ವರ್ಷದಿಂದ ನಡೆಯುತ್ತಿದೆ. ಇವರು ವಿರೋಧ ಪಕ್ಷದಲ್ಲಿ ಕೆಲಸ ಮಾಡುವಾಗ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು. ಪಿಎಸಿಎಲ್ ಚೇರ್ಮನ್ ಅವರ ಪಕ್ಷದವರೇ ಇದ್ರಲ್ಲ. ಇಲ್ಲಿಯವರೆಗೆ ಯಾವುದೇ ರೀತಿಯ ತನಿಖೆ ಮಾಡಿಲ್ಲ. ಈಗ ಯಾತಕ್ಕೆ ಕೊಟ್ಟಿದ್ದಾರೆ. ಇಲ್ಲಿಯವರೆಗೆ ಯಾಕೆ ಮಾಡಲಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ ನಿಜಕ್ಕೂ ರಾಜ್ಯದ ತೆರಿಗೆ ಹಣ ಲೂಟಿ ಬಗ್ಗೆ ಮಾಹಿತಿ ಇದ್ದರೆ ಯಾವಾಗಲೋ ತನಿಖೆ ಆಗಬೇಕಿತ್ತು. ಈಗ ನಿಮ್ಮ ಪರಿಸ್ಥಿತಿಗಳಿಂದ ರಕ್ಷಣೆ ಪಡೆಯಲು ಈ ರೀತಿಯ ಬೆಳವಣಿಗೆ ಪ್ರಾರಂಭ ಮಾಡಿದ್ದೀರಿ. ಇದು ಯಾವುದೇ ರೀತಿಯ ಫಲ ನೀಡಲ್ಲ ಎಂದರು.
undefined
ನನ್ನ ರಾಜೀನಾಮೆ ಬಳಿಕ ಚನ್ನಪಟ್ಟಣಕ್ಕೆ ಕಾಂಗ್ರೆಸ್ ದಂಡು: ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ಸೇಡಿನ ರಾಜಕಾರಣ ಅಲ್ಲದೇ ಮತ್ತೇನು.? ಪಾಪ ಪದೇ ಪದೇ ಕುಮಾರಸ್ವಾಮಿ ಮೇಲೆ ಎಫ್‌ಐಆರ್ ಇಲ್ವಾ ಅಂತಾರೆ, ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಟ್ಟಿಲ್ಲ ಅಂತ ಕೇಳುತ್ತಾರೆ. ಕುಮಾರಸ್ವಾಮಿ ಮೇಲಿನ ಎಫ್‌ಐಆರ್‌ಗೆ ಬೇಲ್ ಪಡೆದಿದ್ದೇನೆ. ಕಾಂಗ್ರೆಸ್ ನಾಯಕರ ನಡವಳಿಕೆ, ಅಧಿಕಾರ ದುರ್ಬಳಕೆ ನೋಡಿ ವಕೀಲರ ಸಲಹೆ ಮೇರೆಗೆ ಬೇಲ್ ಪಡೆದಿದ್ದೇನೆ ಎಂದರು.
ನಾನು ನನ್ನ ಮೇಲೆ ತನಿಖೆ ಮಾಡಬೇಡಿ ಅಂತ ಹೇಳಿದ್ದೀನಾ? ತನಿಖೆ ಮಾಡಲು ಎಷ್ಟು ವರ್ಷ ಬೇಕು. 12 ವರ್ಷಗಳಿಂದ ತನಿಖೆ ಮಾಡಬೇಕಾ? ಈಗ ಕಂಪ್ಲೆಂಟ್ ಕೊಡೊದು, ಕರೆದುಕೊಂಡು ಹೋಗಿ ಕೂರಿಸಿಕೊಳ್ಳೋದು ಮಾಡ್ತಿಲ್ವಾ? ತನಿಖೆ ಮಾಡಲಿ ಎಂದರು.