ಡಬಲ್ ಎಂಜಿನ್ ಸರ್ಕಾರದಿಂದ ಏನೂ ಪ್ರಯೋಜನವಿಲ್ಲ. ರೈತರ ಹಣವನ್ನು ಡಬಲ್ ಎಂಜಿನ್ ಸರ್ಕಾರಗಳು ಲೂಟಿ ಮಾಡುತ್ತಿವೆ. ಜನರ ವಿಮಾ ಹಣವನ್ನು ಲೂಟಿ ಮಾಡಲು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಿವೆ. ಈ ಸರ್ಕಾರಕ್ಕೆ ಅಭಿವೃದ್ಧಿ ಬೇಕಿಲ್ಲ. ರೈತರು ಮತ್ತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದ ಕುಮಾರಸ್ವಾಮಿ
ವಿಜಯಪುರ(ಜ.18): ಜೆಡಿಎಸ್‌ಗೆ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ಅವಕಾಶ ನೀಡಿದರೆ ಶಿಕ್ಷಣ, ಆರೋಗ್ಯ, ವಸತಿ, ಕೃಷಿ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ 5 ವರ್ಷಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಇಂಡಿ ತಾಲೂಕಿನ ಅಗರಖೇಡದಲ್ಲಿ ಮಂಗಳವಾರ ಪಂಚರತ್ನ ರಥ ಯಾತ್ರೆ ಅಂಗವಾಗಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರೈತರ ಬಗ್ಗೆ ಡಬಲ್ ಎಂಜಿನ್ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ ಎಂದರು.
ಡಬಲ್ ಎಂಜಿನ್ ಸರ್ಕಾರದಿಂದ ಏನೂ ಪ್ರಯೋಜನವಿಲ್ಲ. ರೈತರ ಹಣವನ್ನು ಡಬಲ್ ಎಂಜಿನ್ ಸರ್ಕಾರಗಳು ಲೂಟಿ ಮಾಡುತ್ತಿವೆ. ಜನರ ವಿಮಾ ಹಣವನ್ನು ಲೂಟಿ ಮಾಡಲು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಿವೆ. ಈ ಸರ್ಕಾರಕ್ಕೆ ಅಭಿವೃದ್ಧಿ ಬೇಕಿಲ್ಲ. ರೈತರು ಮತ್ತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.
ತಿಂಗಳಲ್ಲಿ ಸ್ಯಾಂಟ್ರೋ ರವಿ ಕೇಸ್ ಮುಚ್ಚಿ ಹಾಕ್ತಾರೆ: ಎಚ್.ಡಿ.ಕುಮಾರಸ್ವಾಮಿ
ರೈತರು ಸಾಲದಿಂದ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಿಮಗಾಗಿ ನಾನಿದ್ದೇನೆ. ಶಿಕ್ಷಣ, ಆರೋಗ್ಯ, ವಸತಿ ಇತ್ಯಾದಿಗಳಿವೆ. ಸಾಲ ಮಾಡಿದ ರೈತರು ಹೆದರಬೇಕಿಲ್ಲ ಎಂದು ಹೇಳಿದರು. ನಿಮ್ಮ ಕಷ್ಟಬಗೆಹರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನಿಮ್ಮ ಗ್ರಾಮ ಪಂಚಾಯತಿ ಕೇಂದ್ರದಲ್ಲಿಯೇ ಎಲ್ಲ ಸೌಲಭ್ಯ ಕಲ್ಪಿಸಿಕೊಡುತ್ತೇನೆ. ನಿನ್ನೆ ಒಂದೇ ದಿನ ಬೋನ್ ಮ್ಯಾರೋ ಕಾಯಿಲೆಗೆ ಚಿಕಿತ್ಸೆ ಕೊಡಿಸಿ ಎಂದು ನನ್ನ ಬಿಡದಿ ತೋಟಕ್ಕೆ ಬಂದಿದ್ದರು. ಈ ಚಿಕಿತ್ಸೆಗೆ 35 ಲಕ್ಷ ಖರ್ಚಾಗುತ್ತದೆ. ಇದನ್ನು ಭರಿಸಲು ಬಡವರಿಗೆ ಕಷ್ಟವಾಗುತ್ತದೆ. ನಾನು ಅಧಿಕಾರಕ್ಕೆ ಬಂದರೆ ಇಂಥವರಿಗೆ ಉಚಿತ ಚಿಕಿತ್ಸೆ ಕೊಡಿಸುತ್ತೇನೆ ಎಂದು ತಿಳಿಸಿದರು.
ದ್ರಾಕ್ಷಿ ಮತ್ತಿತರ ಬೆಳೆಗಳ ರಕ್ಷಣೆಗೆ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡುತ್ತೇನೆ. ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಕೋಲ್ಡ್ ಸ್ಟೋರೇಜ್ ನಿರ್ಮಿಸಿ ಕೊಡಲಾಗುವುದು. ರೈತ ಚೈತನ್ಯ ಹಾಗೂ ತೆಲಂಗಾಣ ಮಾದರಿಯ ರೈತ ಬಂಧು ಯೋಜನೆ ಜಾರಿ ಮಾಡುತ್ತೇನೆ. ರೈತರಿಗೆ ದಿನದ 24 ಗಂಟೆ ನಿರಂತರ ಉಚಿತ ವಿದ್ಯುತ್ ನೀಡುತ್ತೇನೆ. ಐದು ವರ್ಷಗಳ ಪೂರ್ಣಾವಧಿ ಅಧಿಕಾರ ನೀಡಿದರೆ ಎಲ್ಲ ಸೌಲಭ್ಯ ಕಲ್ಪಿಸುತ್ತೇನೆ ಎಂದರು.
ಕಾಂಗ್ರೆಸ್ ಮುಖಂಡರು ಚುನಾವಣೆ ಹೊತ್ತಲ್ಲಿ ಉಚಿತ ಘೋಷಣೆ ಮಾಡ್ತಾರೆ; ಎಚ್.ಡಿ.ಕುಮಾರಸ್ವಾಮಿ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ .18,000 ಕೋಟಿ ಅನುದಾನ ನೀಡಿದ್ದರು. ಈ ಅನುದಾನದಿಂದ ಕೃಷ್ಣಾ ನದಿ ನೀರು ಬಳಕೆ ಸಾಧ್ಯವಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳಲ್ಲಿ ಮಹಿಳೆಯರು ಮಾಡಿರುವ ಎಲ್ಲ ಸಾಲಮನ್ನಾ ಮಾಡುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗಾಗಿ ಮಹಿಳೆಯರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದರು. ಅದೇ ರೀತಿ 60 ವಷÜರ್ ಮೇಲ್ಪಟ್ಟಹಿರಿಯ ನಾಗರಿಕರಿಗೆ ಪಿಂಚಣಿಯನ್ನು . 6000 ಮಾಡಲಾಗುವುದು ಎಂದು ತಿಳಿಸಿದರು.
ಪಂಚರತ್ನ ಯೋಜನೆಗಳು ಎಲ್ಲರಿಗೂ ಅನುಕೂಲವಾಗಲಿವೆ. ಈ ಯೋಜನೆಗಳು ಧರ್ಮಾತೀತ, ಜಾತ್ಯತೀತವಾಗಿವೆ. ಈ ಯೋಜನೆಗಳು ಪ್ರತಿಯೊಬ್ಬರಿಗೂ ಸಲ್ಲುವ ಕಾರ್ಯಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.