
2024ರಲ್ಲಿ ಆಗಸ್ಟ್ನಲ್ಲಿ ಪಶ್ಚಿಮ ಬಂಗಾಳದಲ್ಲಿ ಭಾರಿಪ್ರತಿಭಟನೆ ನಡೆದಿತ್ತು. ಇದು ಕೇವಲ ಪ್ರತಿಭಟನೆ ಆಗಿರಲಿಲ್ಲ. ಬದಲಿಗೆ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಕಾರಣ, ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆಯೊಬ್ಬಳ ಮೇಲೆ ಭೀಕರ ಅ*ತ್ಯಾಚಾರ ಮತ್ತು ಕೊಲೆ ನಡೆದಿತ್ತು. ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿ, ವೈದ್ಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಪ್ರತಿಭಟನೆಗಳಿಗೆ ನಾಂದಿಯಾಯಿತು.
ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ 31 ವರ್ಷದ ವೈದ್ಯೆಯ ಮೇಲೆ ಅ*ತ್ಯಾಚಾರ ನಡೆಸಿ, ಅತ್ಯಂತ ಕ್ರೂರವಾಗಿ ಹ*ತ್ಯೆ ಮಾಡಲಾಗಿತ್ತು. ಈ ಬಗ್ಗೆ ಮಮತಾ ಬ್ಯಾನರ್ಜಿ ಅವರ ಗಮನಕ್ಕೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ತಂದರೂ ಅವರು ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ, ಬದಲಿಗೆ ರೇಪಿ*ಸ್ಟ್ಗೆ ಆಶ್ರಯ ನೀಡುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳೂ ಕೇಳಿಬಂದಿದ್ದವು. ಆದರೆ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂಸಾಚಾರ ರೂಪವನ್ನು ಪಡೆದಾಗ, ಕೊನೆಗೂ ಮಣಿದ ಪೊಲೀಸರು ಇದನ್ನು ಸಿಬಿಐ ತನಿಖೆಗೆ ವಹಿಸಿದ್ದರು. ವಿಚಾರಣಾ ನ್ಯಾಯಾಲಯವು ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈತನಿಗೆ ಗಲ್ಲುಶಿಕ್ಷೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ತಮ್ಮ ಮಗಳಿಗೆ ಆಗಿರುವ ಅನ್ಯಾಯ ಪಶ್ಚಿಮ ಬಂಗಾಳದಲ್ಲಿ ಯಾರ ಮಗಳಿಗೂ ಆಗಬಾರದು. ಅವರ ಸುರಕ್ಷತೆಯೇ ಮುಖ್ಯ ಎನ್ನುವ ಕಾರಣಕ್ಕೆ ಹಾಗೂ ಮುಖ್ಯಮಂತ್ರಿಯಾಗಿದ್ದ ಮಮತಾ ಅವರು ಈ ಪ್ರಕರಣದ ಬಗ್ಗೆ ತೋರಿಸಿದ್ದ ನಿರ್ಲಕ್ಷ್ಯಗೆ ಸಿಡಿದೆದಿದ್ದ, ಸಂತ್ರಸ್ತೆಯ ಅಮ್ಮ, ರತ್ನಾ ದೇಬನಾಥ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರವೇಶ ಮಾಡಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ.
ರತ್ನ ದೇಬನಾಥ್ ಅವರು ಭಾರತೀಯ ಜನತಾ ಪಾರ್ಟಿಯಿಂದ (BJP) ಪಶ್ಚಿಮ ಬಂಗಾಳದ ಪಾನಿಹಟಿ ವಿಧಾನಸಭಾ ಕ್ಷೇತ್ರದಿಂದ 2026ರ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಪಾನಿಹಟಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ತಮ್ಮ ಉದ್ದೇಶ ಮಗಳಿಗೆ ನ್ಯಾಯ ದೊರಕಿಸಿಕೊಡುವುದು ಮತ್ತು ಮಹಿಳೆಯರ ಸುರಕ್ಷತೆಗಾಗಿ ಹೋರಾಡುವುದು ಎಂದಿದ್ದಾರೆ.
ಟಿಎಂಸಿ ಅಭ್ಯರ್ಥಿಗೆ ಸೋಲು
ಉತ್ತರ 24 ಪರಗಣದಲ್ಲಿರುವ ಪಾಣಿಹಟಿ ವಿಧಾನಸಭಾ ಸ್ಥಾನವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅತ್ಯಂತ ಗಮನ ಸೆಳೆದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಈ ಕ್ಷೇತ್ರದಲ್ಲಿ ಐದು ಬಾರಿ ಹಾಲಿ ಶಾಸಕರಾಗಿರುವ ತೀರ್ಥಂಕರ ಘೋಷ್ ಅವರ ಪುತ್ರ ಟಿಎಂಸಿ ಅಭ್ಯರ್ಥಿ ತೀರ್ಥಂಕರ ಘೋಷ್ ವಿರುದ್ಧ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ರತ್ನಾ ದೇಬನಾಥ್ ಜಯಗಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.