ರಾಜ್ಯಗಳಿಗೆ ಅಕ್ಕಿ ಮಾರಾಟ ವಿಚಾರ: ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

By Govindaraj S  |  First Published Jun 15, 2023, 3:20 AM IST

ರಾಜ್ಯಗಳಿಗೆ ಅಕ್ಕಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರದ ಆದೇಶದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10 KG ಅಕ್ಕಿ ನೀಡಲು ಪಣ ತೊಟ್ಟಿದೆ. 


ಬೆಂಗಳೂರು (ಜೂ.15): ರಾಜ್ಯಗಳಿಗೆ ಅಕ್ಕಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರದ ಆದೇಶದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10 KG ಅಕ್ಕಿ ನೀಡಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCIನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ ಎಂದು ಅವರು ಕಿಡಿಕಾರಿದ್ದಾರೆ. 

ಕಾಂಗ್ರೆಸ್ ಗ್ಯಾರೆಂಟಿಗಳು ಜನರಿಗೆ ತಲುಪಲು ಬಿಡದಂತೆ ಕೇಂದ್ರ BJP ಸರ್ಕಾರ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಗೇಡಿನ ವಿಚಾರ.ಈಗಾಗಲೇ ರಾಜ್ಯದಲ್ಲಿ BJP 63 ಮತ್ತೊಂದು ಸೀಟಿಗೆ ತೃಪ್ತಿಪಡಬೇಕಾಗಿದೆ.ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
 

ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ.

ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCIನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ.
1/2

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)

Tap to resize

Latest Videos


ಕಾಂಗ್ರೆಸ್‌ ಗೆಲ್ಲಿಸಿ ಚಿತ್ತಾ​ಪುರದ ಭವಿಷ್ಯ ಉಳಿ​ಸಿ​ದ್ದೀ​ರಿ: ಬಿಜೆಪಿ ಹಾಗೂ ಅರ್‌ಎಸ್‌ಎಸ್‌ ಸೇರಿದಂತೆ ಸಂವಿಧಾನ ವಿರೋಧಿಗಳು ಕೂಡಿಕೊಂಡು ನನ್ನ ಸೋಲಿಗೆ ದೊಡ್ಡ ಷಡ್ಯಂತ್ರ ಮಾಡಿದ್ದರು. ಆದರೂ ಮತ​ದಾ​ರರು ಪ್ರಬು​ದ್ಧ​ರಾಗಿ ಸಿದ್ಧಾಂತದ ಚುನಾವಣೆಯಲ್ಲಿ ನನಗೆ ಅಭೂತಪೂರ್ವ ಗೆಲುವು ನೀಡಿದ್ದಿರಿ. ತಮ್ಮ ಪ್ರಭುದ್ಧತೆಗೆ ನನ್ನ ದೊಡ್ಡ ಸಲಾಂ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌, ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಹೇಳಿದರು. ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ನಡೆದ ಮತದಾರರಿಗೆ ಕೃತಜ್ಞತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬೊಮ್ಮಾಯಿ ಹೇಗೆ ಅಳಿಯನೋ ಸಿದ್ದೇಶ್ವರ ಸಹ ನನಗೆ ಅಳಿಯ, ಸಂಬಂಧಿ: ಶಾಮನೂರು ಶಿವಶಂಕರಪ್ಪ

ನನ್ನ ವೈಯಕ್ತಿಕ ಕಾರಣಗಳಿಂದಾಗಿ ಹೆಚ್ಚು ದಿನ ಚುನಾವಣೆ ಪ್ರಚಾರ ಮಾಡಲು ಸಾಧ್ಯವಾಗಿರಲಿಲ್ಲ. ಆದರೂ ನೀವೆಲ್ಲಾ ನಿಮ್ಮ ಮನೆ ಮಗನ ಚುನಾವಣೆ ಎನ್ನುವಂತೆ ಕೆಲಸ ಮಾಡಿ ಗೆಲ್ಲಿಸಿದ್ದೀರಿ. ಈ ಚುನಾವಣೆಯಲ್ಲಿ ಚಿತ್ತಾಪುರ ಯುವಕರ ಭವಿಷ್ಯ ಅಡಗಿತ್ತು. ನೀವೆಲ್ಲಾ ನನ್ನನು ಗೆಲ್ಲಿಸುವ ಮೂಲಕ ಕ್ಷೇತ್ರದ ಭವಿಷ್ಯ ಕಾಪಾಡಿದ್ದೀರಿ ಎಂದು ಭಾವುಕರಾಗಿ ನುಡಿದರು. ಕಾಂಗ್ರೆಸ್‌ ಸರ್ಕಾರ ಅಸ್ಥಿತ್ವಕ್ಕೆ ಬಂದ ಒಂದು ತಿಂಗಳಲ್ಲೆ ಐದು ಗ್ಯಾರಂಟಿಗಳ ಪೈಕಿ ಒಂದನ್ನು ಇಂದು ಜಾರಿ​ಗೊ​ಳಿಸಿದ್ದೇವೆ. ಉಳಿದ 4 ಗ್ಯಾರಂಟಿಗಳನ್ನು ಕೂಡಾ ಶೀಘ್ರ​ದಲ್ಲೆ ಅನುಷ್ಟಾನ ತರಲಿದ್ದೇವೆ. ಆದರೂ ಬಿಜೆಪಿಯವ​ರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳ ಬಗ್ಗೆ ಜನರಿಗಿರದ ಕಾತುರ ಬಿಜೆಪಿ ನಾಯಕರಿಗೇಕೆ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಸುರ್ಜೇವಾಲ ಪಾಲ್ಗೊಂಡಿದ್ದರಲ್ಲಿ ತಪ್ಪೇನಿಲ್ಲ: ಸಚಿವ ಚಲುವರಾಯಸ್ವಾಮಿ

ಕಾಂಗ್ರೆಸ್‌ ಕಡೆಯಿಂದ ಐದು ಹಾಗೂ ನನ್ನ ಕಡೆಯಿಂದ ಆರನೇ ಗ್ಯಾರಂಟಿ ನೀಡಿದ್ದೆ. ಅದರಂತೆ ನಾನು ಈಗಾಗಲೇ ಆರನೆ ಗ್ಯಾರಂಟಿ ಜಾರಿಗೆ ತಂದಿದ್ದು, ಸರ್ಕಾರ ಖಜಾನೆ ಲೂಟಿ ಮಾಡಿದ ನನ್ನ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದೇನೆ. ಇನ್ನುಳಿದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ನಡೆದ ಅಕ್ರಮಗಳ ವಿರುದ್ಧ ತನಿಖೆ ನಿಶ್ಚಿತ. ಅಕ್ರಮ ಮಾಡಿದವರಿಗೆ ಶಿಕ್ಷೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ. ಅಲ್ಲದೆ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗುವವರು ಮತ್ತು ಇನ್ನಿತರ ಅಕ್ರಮಗಳಲ್ಲಿ ತೊಡಗಿರುವವರನ್ನು ಜೈಲಿಗಟ್ಟುವದು ನಿಶ್ಚಿತ ಎಂದು ಗುಡುಗಿದರು.

click me!