ನಟ ವಿಜಯ್‌ - ತ್ರಿಶಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೀಳು ಹೇಳಿಕೆ ವಿವಾದ, ವಿಷಾಧ

Kannadaprabha News   | Kannada Prabha
Published : Feb 17, 2026, 09:54 AM IST
BJP leader

ಸಾರಾಂಶ

ಚುನಾವಣಾ ಹೊಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ ಮತ್ತು ನಟಿ ತ್ರಿಶಾ ಕೃಷ್ಣನ್‌ ಸಂಬಂಧದ ಬಗ್ಗೆ ಕೀಳು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.

ಮಧುರೈ: ಚುನಾವಣಾ ಹೊಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ ಮತ್ತು ನಟಿ ತ್ರಿಶಾ ಕೃಷ್ಣನ್‌ ಸಂಬಂಧದ ಬಗ್ಗೆ ಕೀಳು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವೊಂದರಲ್ಲಿ ಅವರು ‘ವಿಜಯ್‌ ಪಕ್ಷದ ನೀತಿ ಸುಧಾರಿಸಿಕೊಳ್ಳುವ ಬದಲು ತ್ರಿಶಾ ಮನೆಯಿಂದ ಹೊರ ಬಂದು ಹೆಂಡತಿ ಜತೆಗಿನ ಸಂಬಂಧ ಸರಿಪಡಿಸಿಕೊಳ್ಳಲಿ’ ಎಂದಿದ್ದರು.

ವಕೀಲರ ಮೂಲಕ ಪ್ರತಿಕ್ರಿಯಿಸಿದ್ದಾರೆ

ಇದರ ಬೆನ್ನಲ್ಲೇ ನಟಿ ತ್ರಿಶಾ ಮೌನ ಮುರಿದು, ವಕೀಲರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಅದರಲ್ಲಿ ‘ಉನ್ನತ ಸ್ಥಾನದಲ್ಲಿರುವವರ ಇಂತಹ ಅಸಹ್ಯಕರ ಮತ್ತು ಅನುಚಿತ. ತ್ರಿಶಾ ರಾಜಕಾರಣದಲ್ಲಿ ತಟಸ್ಥರಾಗಿದ್ದರು. ಮುಂದೆಯೂ ಹಾಗೆಯೇ ಇರುತ್ತಾರೆ’ ಎಂದಿದ್ದಾರೆ. ಅದರ ಬೆನ್ನಲ್ಲೇ ನಾಗೇಂದ್ರನ್‌ ‘ತಾವು ಯಾರಿಗೂ ನೋವುಂಟು ಮಾಡುವ ಉದ್ದೇಶ ಹೊಂದಿರಲಿಲ್ಲ’ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಹಿಂದಿನಿಂದಲೂ ವದಂತಿ:

ವಿಜಯ್‌ ಮತ್ತು ಪತ್ನಿ ಸಂಗೀತಾ ದಾಂಪತ್ಯದಲ್ಲಿ ವೈಮನಸ್ಸು ಮೂಡಿದೆ. ಇದಕ್ಕೆ ಪೂರಕ ಎನ್ನುವಂತೆ ಗಂಡ- ಹೆಂಡತಿ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿರಲಿಲ್ಲ. ಜೊತೆಗೆ ವಿಜಯ್‌ ಮತ್ತು ತ್ರಿಶಾ ಒಟ್ಟಿಗೆ ವಾಸಿಸುತ್ತಿದ್ದಾರೆ ಎನ್ನುವ ವದಂತಿ ಬಹಳ ದಿನಗಳಿಂದ ಇತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್‌ಗೆ ದೊಡ್ಡ ಆಘಾತ : 36 ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ನಾಯಕ ರಾಜೀನಾಮೆ
ನಾಲ್ಕು ಚುನಾವಣಾ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಕಾಡುತ್ತಿದೆ ಸಮಸ್ಯೆ