ರೌಡಿಗಳನ್ನು ಬಿಜೆಪಿಗೆ ಸೇರಿಸಲ್ಲ: ಅರುಣ್‌ ಸಿಂಗ್‌

By Kannadaprabha NewsFirst Published Dec 4, 2022, 1:00 PM IST
Highlights

ಕಾಂಗ್ರೆಸ್‌ಗೆ ಯಾವುದೇ ಅಜೆಂಡಾ ಇಲ್ಲ. ಆದ್ದರಿಂದ ಕಾಂಗ್ರೆಸ್ಸಿಗರು ಆರೋಪಗಳನ್ನು ಮಾಡುವುದರಲ್ಲಿಯೇ ಇರುತ್ತಾರೆ. ಕಾಂಗ್ರೆಸ್‌ನವರು ವಿವಾದ ಇಲ್ಲದಿದ್ದರೂ ವಿವಾದ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಆರೋಪದಲ್ಲಿ ಯಾವುದೇ ಧಮ್‌ ಇಲ್ಲ: ಅರುಣ್‌ ಸಿಂಗ್‌ 

ಬೆಂಗಳೂರು(ಡಿ.04):  ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಯಾವುದೇ ಅಜೆಂಡಾ ಇಲ್ಲ. ಆದ್ದರಿಂದ ಕಾಂಗ್ರೆಸ್ಸಿಗರು ಆರೋಪಗಳನ್ನು ಮಾಡುವುದರಲ್ಲಿಯೇ ಇರುತ್ತಾರೆ. ಕಾಂಗ್ರೆಸ್‌ನವರು ವಿವಾದ ಇಲ್ಲದಿದ್ದರೂ ವಿವಾದ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಆರೋಪದಲ್ಲಿ ಯಾವುದೇ ಧಮ್‌ ಇಲ್ಲ. ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೋದ ಕಡೆಯೆಲ್ಲ ಕಾಂಗ್ರೆಸ್‌ ಸೋತಿದೆ. ಚಾಮರಾಜನಗರಕ್ಕೆ ರಾಹುಲ್‌ ಗಾಂಧಿ ಹೋಗಿಬಂದ ನಂತರ ಅಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಅನುಭವಿಸಿದೆ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಬಿಜೆಪಿ ಪರ ಒಲವು, ಮತ್ತೆ ಗೆಲ್ತೇವೆ: ಅರುಣ್‌ ಸಿಂಗ್‌

ಜನ ಸಂಕಲ್ಪ ಸಮಾವೇಶ, ಎಸ್‌ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ರಾಜ್ಯದಲ್ಲಿ ಬಿಜೆಪಿ ಪರ ಒಲವಿರುವ ಸಂಕೇತವಾಗಿದ್ದು, ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ್‌-ಅರುಣ್‌ ಸಿಂಗ್‌ ರಹಸ್ಯ ಮಾತುಕತೆ

ಶನಿವಾರ ಪಕ್ಷದ ಕಚೇರಿ ಜಗನಾಥ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಜನಸಂಕಲ್ಪ ಸಮಾವೇಶಗಳಲ್ಲಿ ಜನರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಜನರ ಸಮರ್ಥನೆ ಬಿಜೆಪಿ ಪರವಾಗಿ ಇರುವುದು ಇದರಿಂದ ಸ್ಪಷ್ಟವಾಗುತ್ತದೆ. ಕಾರ್ಯಕರ್ತರ ಸಂಕಲ್ಪ ಯಾತ್ರೆಯಲ್ಲಿ ಕಾರ್ಯಕರ್ತರ ಪಾಲ್ಗೊಳ್ಳುವಿಕೆ ಗರಿಷ್ಠ ಪ್ರಮಾಣದಲ್ಲಿದೆ. ನಾನು ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಇದನ್ನು ಗಮನಿಸಿದ್ದೇವೆ. ಹೀಗಾಗಿ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಇರುವುದು ಸ್ಪಷ್ಟಎಂದು ಹೇಳಿದರು.

ರಾಜ್ಯದ ಜನರೂ ಬಿಜೆಪಿ ಸರ್ಕಾರವನ್ನೇ ಮತ್ತೆ ಬಯಸುತ್ತಿದ್ದಾರೆ. ನಾವು 150 ಸ್ಥಾನಗಳನ್ನು ಗೆಲ್ಲಲಿದ್ದೇವೆ. ಸರ್ಕಾರ ರಚಿಸಿ ವೇಗದಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲಿದ್ದೇವೆ. ಚುನಾವಣೆಗೆ ಅಭ್ಯರ್ಥಿಗಳ ಅಯ್ಕೆ ಬಗ್ಗೆ ಕೇಂದ್ರಿಯ ಚುನಾವಣಾ ಸಮಿತಿ ನಿರ್ಧರಿಸಲಿದೆ. ಚುನಾವಣಾ ಸಮಿತಿಯು ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಪಕ್ಷದ ಕಾರ್ಯಕರ್ತರಲ್ಲಿ ಗೆಲ್ಲುವ ವಿಶ್ವಾಸ ಇದ್ದು, ಜನರಿಗೂ ಬಿಜೆಪಿ ಪರ ಒಲವು ಇದೆ ಎಂದರು.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೋದ ಕಡೆಯೆಲ್ಲ ಕಾಂಗ್ರೆಸ್‌ ಸೋತಿದೆ. ಚಾಮರಾಜನಗರಕ್ಕೆ ರಾಹುಲ್‌ ಗಾಂಧಿ ಹೋಗಿಬಂದ ನಂತರ ಅಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಅನುಭವಿಸಿದೆ ಎಂದು ತಿರುಗೇಟು ನೀಡಿದರು.
 

click me!